ಹಳ್ಳಿ ಪ್ರತಿ ಮನೆಗೂ ಶುದ್ಧ ಜಲ
Team Udayavani, Feb 10, 2021, 4:37 PM IST
ಬಾಗಲಕೋಟೆ: ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ಕೇಂದ್ರ ಸರ್ಕಾರ ಜಲ ಜೀವನಮಷಿನ್ ಅಡಿ ಹೊಸ ಯೋಜನೆ ಕೈಗೊಂಡಿದ್ದು, ಶೀಘ್ರವೇ ಎಲ್ಲರ ಮನೆಗೂ ನಳದ ಸಂಪರ್ಕ ಕಲ್ಪಿಸಲಾಗುವುದು ಎಂದು ಬಾಗಲಕೋಟೆ ಶಾಸಕ ಡಾ|ವೀರಣ್ಣ ಚರಂತಿಮಠ ಹೇಳಿದರು.
ತಾಲೂಕಿನ ನೀಲಾನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯ ನಿರ್ವಹಿಸಲಾಗುತ್ತಿದೆ. ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದು, ಯಾವುದೇ ಕಾಮಗಾರಿ ಕಳಪೆ ಮಟ್ಟದಿಂದಕೂಡದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕಳಪೆ ಕಾಮಗಾರಿ ಕಂಡು ಬಂದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಗ್ರಾಮೀಣ ಭಾಗದ ಪ್ರತಿ ಮನೆಗೂ ನಳದ ಸಂಪರ್ಕ ಕಲ್ಪಿಸಿ, ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯನ್ನು ಪ್ರಧಾನಿ ನರೇಂದ್ರಮೋದಿ ಜಾರಿಗೊಳಿಸಿದ್ದಾರೆ. ಇದರಿಂದ ಪ್ರತಿ ಮನೆಗೂ ನಳ ಅಳವಡಿಸಲಿದ್ದು, ಮೀಟರ್‌ಅಳವಡಿಸುವ ಕಾರ್ಯವೂ ನಡೆಯಲಿದೆ.ಇದರಿಂದ ನೀರಿನ ಮಿತ ಬಳಕೆಯಾಗಲಿದೆ ಎಂದರು.
ವಿವಿಧೆಡೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವನೀರು ಮತ್ತು ನೈರ್ಮಲ್ಯ ಇಲಾಖೆ, 3 ಕೋಟಿ 65 ಲಕ್ಷ ರೂ.ಅನುದಾನದಹಲವು ಕಾಮಗಾರಿಗೆ ಶಾಸಕ ಚರಂತಿಮಠಭೂಮಿಪೂಜೆ ನೆರವೇರಿಸಿದರು. ಎಪಿಎಂಸಿ ಅಧ್ಯಕ್ಷ ಕೃಷ್ಣಪ್ಪ ಲಮಾಣಿ,ಜಿಪಂ ಸದಸ್ಯ ರಂಗನಗೌಡ ಗೌಡರ, ತಾ.ಪಂ. ಅಧ್ಯಕ್ಷ ಚನ್ನನಗೌಡ ಪರನಗೌಡರ, ಸದಸ್ಯ ಪರಶುರಾಮ ಛಬ್ಬಿ, ಅಧಿಕಾರಿಗಳಾದ ಕುರಬಗಟ್ಟಿ, ಕಿರಣ ಗೌಡರ, ಮ್ಯಾಗಿನಮನಿ,ನರಸಿಂಹರಾಜು, ಪುರೋಹಿತ, ಶ್ರೀಮತಿಬಂಡಿ, ಬಿಜೆಪಿ ಗ್ರಾಮೀಣ ಮಂಡಲಅಧ್ಯಕ್ಷ ಸುರೇಶ ಕೊಣ್ಣೂರ, ಪ್ರಧಾನ ಕಾರ್ಯದರ್ಶಿಗಳಾದ ಕಲ್ಲಪ್ಪ ಭಗವತಿ,ಮಲ್ಲೇಶ ಬಿಜಾಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.