ಮುಳುಗಡೆ ನಗರಿಯಲ್ಲಿ ಜೆಸಿಬಿ ಸದ್ದು


Team Udayavani, Jun 17, 2020, 7:28 AM IST

ಮುಳುಗಡೆ ನಗರಿಯಲ್ಲಿ ಜೆಸಿಬಿ ಸದ್ದು

ಬಾಗಲಕೋಟೆ: ಕಳೆದ ಮೂರು ತಿಂಗಳಿಂದ ವ್ಯಾಪಾರ-ವಹಿವಾಟು ಇಲ್ಲದೇ ಸಂಕಷ್ಟದಲ್ಲಿದ್ದ ನಗರದ ವ್ಯಾಪಾರಸ್ಥರಿಗೆ ನಗರಸಭೆ ಅಧಿಕಾರಿಗಳು, ಮಂಗಳವಾರ ಬೆಳ್ಳಂಬೆಳಗ್ಗೆ ಶಾಕ್‌ ನೀಡಿದರು.

ವ್ಯಾಪಾರಸ್ಥರು ತಮ್ಮ ಅಂಗಡಿಗೆ ಬರುವ ಮುಂಚೆಯೇ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಜೆಸಿಬಿ ಯಂತ್ರದೊಂದಿಗೆ ಅಂಗಡಿಗಳ ಮುಂದೆ ಇದ್ದ ಮೆಟ್ಟಿಲು, ತಗಡು ಎಲ್ಲವನ್ನೂ ತೆರವುಗೊಳಿಸಿದ್ದರು. ಅಂಗಡಿ ಮುಂದಿನ ನಾಮಫಲಕ ಸಹಿತ, ರಸ್ತೆ-ಚರಂಡಿ ಮೇಲೆ ಹಾಕಿದ್ದ ಮೆಟ್ಟಿಲು ತೆರವುಗೊಳಿಸಲಾಯಿತು. ನಗರದ ಫಂಕಾ ಮಸೀದಿಯಿಂದ ಬಸವೇಶ್ವರ ವೃತ್ತದವರೆಗಿನ ಎಂ.ಜಿ. ರಸ್ತೆಯಲ್ಲಿ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಬೆಳಗ್ಗೆ 6 ಗಂಟೆಯಿಂದಲೇ ಆರಂಭಗೊಂಡ ಕಾರ್ಯಾಚರಣೆ, ಸಂಜೆ 7ರ ವರೆಗೂ ಮುಂದುವರಿದಿತ್ತು.

ಬೀದಿ ಬದಿ ವ್ಯಾಪಾರಸ್ಥರ ಆಕ್ರೋಶ: ದಿನ ನಿತ್ಯ ಬೀದಿ ಬದಿ ವಿವಿಧ ಹಣ್ಣು, ಹೂವು ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಮಹಿಳೆಯರು ಸಹಿತ ನೂರಾರು ಜನರನ್ನು ತೆರವುಗೊಳಿಸಲಾಯಿತು. ಈ ವೇಳೆ ಮಹಿಳೆಯರು, ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಎಂ.ಜಿ. ರಸ್ತೆಯ ವ್ಯಾಪಾರಿ ಕೇಂದ್ರ, ನಗರದ ವ್ಯಾಪರಸ್ಥರ ಹೃದಯ ಭಾಗವಾಗಿದ್ದು, ಎರಡು ತಿಂಗಳು ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಈ ಪ್ರದೇಶ ನಿಷೇಧಿತ ಪ್ರದೇಶವಾಗಿತ್ತು. ಕಳೆದ ಮೇ 3ರಿಂದ ಈ ಪ್ರದೇಶದಲ್ಲಿ ವ್ಯಾಪಾರ-ವಹಿವಾಟಿಗೆ ಅವಕಾಶ ಕಲ್ಪಿಸಿದ್ದು, ಇದೀಗ ಸುಧಾರಿಸಿಕೊಳ್ಳುತ್ತಿದ್ದ ವ್ಯಾಪಾರಸ್ಥರಿಗೆ ನಗರಸಭೆ ಅಧಿಕಾರಿಗಳಿಂದ ಇಂದಿನ ತೆರವು ಕಾರ್ಯಾಚರಣೆ ಶಾಕ್‌ ನೀಡಿತು.

ನಗರಸಭೆ ಅಧಿಕಾರಿಗಳ ದೌರ್ಜನ್ಯ: ಕೋವಿಡ್ ಸಂಕಷ್ಟದಲ್ಲಿರುವ ವ್ಯಾಪಾರಸ್ಥರು ತೊಂದರೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅತಿಕ್ರಮಣ ತೆರವು ಹೆಸರಿನಲ್ಲಿ ಅಂಗಡಿಗಳ ಮುಂದಿನ ಮೆಟ್ಟಿಲು, ತಗಡು, ನಾಮಫಲಕ ಎಲ್ಲವೂ ತೆರವುಗೊಳಿಸಲಾಗುತ್ತಿದೆ. ರಸ್ತೆ ಬದಿ ವ್ಯಾಪಾರ ಮಾಡಿಕೊಂಡಿದ್ದ ಜನರನ್ನು ಒಕ್ಕಲೆಬ್ಬಿಸಲಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಈ ಕಾರ್ಯಾಚರಣೆ ಅಗತ್ಯವಿರಲಿಲ್ಲ. ಅತಿಕ್ರಮ ತೆರವು ಮಾಡುವುದೇ ಆದರೆ ವ್ಯಾಪಾರಸ್ಥರಿಗೆ ಸೂಚನೆ ನೋಟಿಸ್‌ ನೀಡಿ, ಸ್ವಯಂ ತೆರವು ಮಾಡಿಕೊಳ್ಳಲು ಅವಕಾಶ ನೀಡಬೇಕು. ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿತ್ತು. ಯಾವುದನ್ನೂ ಮಾಡದೇ, ಅಧಿಕಾರಿಗಳು ಮನಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹಲವು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಭೀತಿ ಹಿನ್ನೆಲೆಯಲ್ಲಿ ನಗರದ ಅಂಗಡಿಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಚರಂಡಿ, ರಸ್ತೆ ಅತಿಕ್ರಮಣ ಮಾಡಿಕೊಂಡ ಅಂಗಡಿಗಳ ಎದುರಿನ ತಗಡು ತೆಗೆಯಲಾಗಿದೆ. ಈ ಕಾರ್ಯಾಚರಣೆಗೆ ಯಾರ ಒತ್ತಡವೂ ಇಲ್ಲ. ನಗರದ ಸೌಂದರ್ಯ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.ಮುನಿಶಾಮಪ್ಪ, ಪೌರಾಯುಕ್ತ, ನಗರಸಭೆ

ಟಾಪ್ ನ್ಯೂಸ್

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.