ಬಾವುಟದ ವಿಷಯದಲ್ಲಿ ಕಮಿಷನ್ ವ್ಯಾಪಾರ : ಮಾಜಿ ಸಚಿವೆ ಉಮಾಶ್ರೀ
Team Udayavani, Aug 12, 2022, 8:39 PM IST
ರಬಕವಿ-ಬನಹಟ್ಟಿ: ಯಾವಾಗಲೂ ದೇಶದ ಧ್ವಜವನ್ನು ದ್ವೇಷಿಸುತ್ತಿದ್ದ ಬೆಜೆಪಿಯವರು ಈಗ ಕೈಯಲ್ಲಿ ಧ್ವಜವನ್ನು ಹಿಡಿದುಕೊಂಡು ನಾಟಕವಾಡುತ್ತಿರುವುದು ಜನರಿಗೆ ಗೊತ್ತಾಗುತ್ತದೆ. ರಾಷ್ಟ್ರ ಧ್ವಜದ ವಿಷಯದಲ್ಲೂ ಕಮಿಷನ್ ವ್ಯಾಪಾರ ನಡೆಸುವುದರ ಮೂಲಕ ರಾಷ್ಟ್ರ ಧ್ವಜದ ನಿಯಮಗಳನ್ನು ಗಾಳಿಗೆ ತೂರಿ ರಾಷ್ಟ್ರ ಧ್ವಜಗಳಲ್ಲಿ ಪ್ರಮಾದಗಳನ್ನು ಕಾಣದೆ ಮನ ಬಂದಂತೆ ರಾಷ್ಟ್ರ ಧ್ವಜಗಳನ್ನು ತಯಾರಿಸಲು ಅನುಮತಿ ನೀಡಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಕಿಡಿ ಕಾರಿದರು.
ಶುಕ್ರವಾರ ಸ್ಥಳೀಯ ಈಶ್ವರಲಿಂಗ ಮೈದಾನದಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ನಿಮಿತ್ತವಾಗಿ ಹಮ್ಮಿಕೊಂಡ ಪಾದಯಾತ್ರೆಯ ನಂತರ ನಡೆದ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರ‍್ಯದ ಅರ್ಥವನ್ನು ಯುವ ಪೀಳಿಗೆ ಆರ್ಥೈಯಿಸಿಕೊಳ್ಳಬೇಕಿದೆ. ಸಂವಿಧಾನ ಮತ್ತು ಮೂಲಭೂತ ಹಕ್ಕುಗಳ ಮನವರಿಕೆ ಇಂದಿನ ಯುವಕರಿಗೆ ಆಗಬೇಕಾಗಿದೆ. ಸಮಾನತೆ. ಸಹೋದರ ಭಾಂಧವ್ಯ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ದೇಶದ ಜನರನ್ನು ಸಶಕ್ತರನ್ನಾಗಿಸಿದ್ದು ಕಾಂಗ್ರೆಸ್. ಬಿಜೆಪಿ ಸರ್ಕಾರ ಹಳೆ ನೀರನ್ನು ಹೊಸ ಬಾಟಲಿಗೆ ಹಾಕಿ ಯೋಜನೆಗಳನ್ನು ತಯಾರು ಮಾಡುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿ, ಆರ್‌ಎಸ್‌ಎಸ್ ಗೆ ಸ್ವಾತಂತ್ರ‍್ಯ ಹೋರಾಟ ಮತ್ತು ಆಚರಣೆಯ ನೈತಿಕತೆ ಇಲ್ಲವಾಗಿದೆ. ದೇಶದ ಮಹಾತ್ಮನನ್ನು ಕೊಂದ ನಾಥೂರಾಮ ಗೋಡ್ಸೆಯಂತಹ ದ್ರೋಹಿಗಳ ಬಾಯಿಂದ ಘೋಷಣೆಗಳು ಹೇಗೆ ಬರುತ್ತಿವೆ ಎಂಬುದು ತಿಳಿಯುತ್ತಿಲ್ಲ.ಬಿಜೆಪಿ ದೇಶಕ್ಕೆ ಯಾವುದೆ ಮಹತ್ವದ ಯೋಜನೆಗಳನ್ನು ನೀಡದೆ ಕೇವಲ ತೆರಿಗೆಯ ಹೊರೆಯನ್ನು ನೀಡಿದೆ. ದೇಶದ ಪ್ರಾಧಾನಿ ಕೇವಲ ಬಂಡವಾಳಶಾಹಿಗಳ ಪರವಾಗಿದ್ದು, ಜನ ಸಾಮಾನ್ಯರ ವಿರೋಧಿಯಾಗಿದ್ದಾರೆ. ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತ ನಡೆಸುವಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಬಕವಿ, ರಾಮಪುರ ಹಾಗೂ ಬನಹಟ್ಟಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಜಾಥಾ ನಡೆಸಿದರು.
ಡಾ.ಪದ್ಮಜೀತ ನಾಡಗೌಡಪಾಟೀಲ, ರಾಜು ಭದ್ರನವರ, ಬಸವರಾಜ ಶೇಗಾವಿ, ಸಂಗಮೇಶ ಬಬಲೇಶ್ವರ, ಡಾ.ಎ.ಆರ್.ಬೆಳಗಲಿ, ಡಾ.ಎಂ.ಎಸ್.ದಡ್ಡೆನವರ, ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ರಮೇಶ ಸವದಿ, ಪ್ರಭಾವತಿ ಚಾವಡಿ, ಪ್ರವೀಣ ನಾಡಗೌಡ, ಶಂಕರ ಸೋರಗಾವಿ, ಅಶೋಕ ಆಳಗೊಂಡ, ಮಾಳು ಹಿಪ್ಪರಗಿ, ರಾಹುಲ ಕಲಾಲ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.