ಏತ ನೀರಾವರಿ ಯೋಜನೆ ಬೇಗ ಪೂರ್ಣಗೊಳಿಸಿ

ತಂತ್ರಜ್ಞಾನ, ಜಾಣ್ಮೆ -ದೂರದೃಷ್ಟಿಯಿಂದ ಎಲ್ಲ ಜಲ ಮೂಲಗಳನ್ನು ಬಳಸಿಕೊಳ್ಳುವುದು ಅವಶ್ಯ: ನಿರಾಣಿ

Team Udayavani, Mar 23, 2022, 12:13 PM IST

11

ಬಾಗಲಕೋಟೆ: ಕಳೆದ 8-10 ವರ್ಷಗಳ ಅವಧಿಯಲ್ಲಿ ಅನುಮೋದನೆಗೊಂಡ ಜಿಲ್ಲೆಯ ಏತ ನೀರಾವರಿ ಯೋಜನೆಗಳನ್ನು ಬೇಗ ಪೂರ್ಣಗೊಳಿಸಬೇಕೆಂದು ಉತ್ತರ ಕರ್ನಾಟಕ ಸಮಗ್ರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಸಂಗಮೇಶ ಆರ್‌. ನಿರಾಣಿ ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಜಲ ದಿನಾಚರಣೆ ಸಂದರ್ಭದಲ್ಲಿ ಸರಕಾರಕ್ಕೆ ಪತ್ರ ಬರೆದು ಮನವಿ ಮಾಡಿರುವ ಅವರು, ಅಗೋಚರ ಅಂತರ್ಜಲವನ್ನು ಗೋಚರಿಸುವಂತೆ ಮಾಡುವುದು, 2022ನೇ ಸಾಲಿನ ವಿಶ್ವ ಜಲ ದಿನಾಚರಣೆ ಘೋಷವಾಕ್ಯವಾಗಿದೆ. ಆದರೆ ನಮ್ಮ ಕಣ್ಣೆದುರಿಗೆ ವ್ಯರ್ಥವಾಗುತ್ತಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ನಾವು ವಿಫಲರಾಗಿರುವುದು ನೋವಿನ ಸಂಗತಿ. ಎಲ್ಲ ಜಲ ಮೂಲಗಳನ್ನು ಸಮರ್ಪಕ ತಂತ್ರಜ್ಞಾನ, ಜಾಣ್ಮೆ- ದೂರದೃಷ್ಟಿಯಿಂದ ಬಳಸಿಕೊಳ್ಳುವುದು ಅವಶ್ಯ ಎಂದು ಅವರು ಹೇಳಿದ್ದಾರೆ.

ಈ ಭಾಗದ ಮಹತ್ವಾಕಾಂಕ್ಷೆಯ ಕೃಷ್ಣಾ ಮೇಲ್ದಂಡೆ ಯೋಜನೆಯ 1-2ನೇ ಹಂತದ ಯೋಜನೆ ಅನುಷ್ಠಾನಕ್ಕಾಗಿ ಬಾಗಲಕೋಟೆ-ವಿಜಯಪುರ ಜಿಲ್ಲೆಯ 176 ಹಳ್ಳಿಗಳು ಮುಳುಗಡೆಯಾಗಿವೆ. 3ನೇ ಹಂತದ ಯೋಜನೆಗಾಗಿಯೂ 20 ಹಳ್ಳಿಗಳು ಮುಳುಗಡೆಯಾಗಲಿವೆ. ಜಲಾಶಯ ನಿರ್ಮಾಣಕ್ಕಾಗಿ ನಮ್ಮ ಲಕ್ಷಾಂತರ ಎಕರೆ ಫಲವತ್ತಾದ ಭೂಮಿ ಮುಳುಗಡೆಯಾಗಿದೆ. ಆದ್ದರಿಂದ ಯುಕೆಪಿ-3 ಯೋಜನೆ ಶೀಘ್ರವೇ ಅನುಷ್ಠಾನಗೊಳಿಸಿ ಮುಳುಗಡೆ ಜಿಲ್ಲೆಗೆ ಪ್ರಥಮ ಆದ್ಯತೆಯಾಗಿ ನೀರು ನೀಡಿ ಮುಂದಿನ ಜಿಲ್ಲೆಗೆ ನೀರು ಒಯ್ಯಬೇಕೆಂದು ಆಗ್ರಹಿಸಿದ್ದಾರೆ.

ಕುಂಠಿತಗೊಂಡ ಯೋಜನೆ ಪೂರ್ಣಗೊಳಿಸಿ: ಈ ಬಾರಿ ರಾಜ್ಯದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀರಾವರಿಗೆ ಹೆಚ್ಚು ಅನುದಾನ ಮೀಸಲಿಡುವ ಮೂಲಕ ಜಲಸಂಪನ್ಮೂಲ ಸದ್ಬಳಕೆಗೆ ಆದ್ಯತೆ ನೀಡಿದ್ದಾರೆ. ಅದರಂತೆ ಬಹು ವರ್ಷಗಳಿಂದ ಕುಂಠಿತಗೊಂಡಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲೆಯ ಜಮಖಂಡಿ ತಾಲೂಕಿನ ಕುಲಹಳ್ಳಿ- ಹುನ್ನೂರ ಭಾಗದ 9,164 ಹೆಕ್ಟೇರ್‌ ಪ್ರದೇಶಕ್ಕೆ ನೀರೊದಗಿಸುವ ಕುಲಹಳ್ಳಿ ಹುನ್ನೂರು ಏತ ನೀರಾವರಿ ಯೋಜನೆಗೆ 2017ರಲ್ಲಿಯೇ ಅನುಮೋ ದನೆ ದೊರೆತರೂ ಈ ಯೋಜನೆ ಇಂದಿಗೂ ಪೂರ್ಣವಾಗಿಲ್ಲ. ಜಮಖಂಡಿ ತಾಲೂಕಿನ 6 ಗ್ರಾಮಗಳು, ಮುಧೋಳ ತಾಲೂಕಿನ 4 ಗ್ರಾಮಗಳ 7,200 ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸುವ 174.42 ಕೋಟಿ ಮೊತ್ತದ ಬಹುಬೇಡಿಕೆಯ ವೆಂಕಟೇಶ್ವರ ಏತ ನೀರಾವರಿ ಯೋಜನೆ ಅನುಮೋದನೆ ದೊರೆತು 7 ವರ್ಷವಾದರೂ ಪೂರ್ಣಗೊಂಡಿಲ್ಲ. ಸಾವಳಗಿ- ತುಂಗಳ ಭಾಗಕ್ಕೆ ನೀರಾವರಿ ಕಲ್ಪಿಸುವ ಕರಿಮಸೂತಿ ಯೋಜನೆ ದಶಕ ಕಳೆದರೂ ಪೂರ್ಣಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಂಡರೆ ಮುಧೋಳ-ರಾಮದುರ್ಗ ತಾಲೂಕಿನ 10 ಸಣ್ಣ ನೀರಾವರಿ ಕೆರೆ ತುಂಬಿಸುವ ಜತೆಗೆ 17,377 ಹೆಕ್ಟೇರ್‌ ಭೂಮಿಗೆ ನೀರಾವರಿ ಸೌಕರ್ಯ ಕಲ್ಪಿಸಬಹುದು. ರಾಮೇಶ್ವರ ಮತ್ತು ವೀರಭದ್ರೇಶ್ವರ ಯೋಜನೆಗಳಿಂದ ವಂಚಿತವಾದ ರಾಮದುರ್ಗ ತಾಲೂಕಿನ 19 ಗ್ರಾಮಗಳು, ಬಾದಾಮಿ ತಾಲೂಕಿನ 6 ಗ್ರಾಮಗಳು, ಮುಧೋಳ ತಾಲೂಕಿನ 2 ಗ್ರಾಮಗಳ 13,000 ಹೆಕ್ಟೇರ್‌ ಪ್ರದೇಶಕ್ಕೆ 2 ಹಂತಗಳಲ್ಲಿ 566 ಕೋಟಿ ಮೊತ್ತದ ಸಾಲಾಪುರ ಏತ ನೀರಾವರಿ ಯೋಜನೆ ನನೆಗುದಿಗೆ ಬಿದ್ದಿದೆ. ಬಾದಾಮಿ-ನರಗುಂದ ತಾಲೂಕಿನ 1578 ಹೆಕ್ಟೇರ್‌ ಪ್ರದೇಶಕ್ಕೆ ನೀರೊದಗಿಸುವ ಕೊಣ್ಣೂರು ಏತ ನೀರಾವರಿ ಯೋಜನೆ ಆಡಳಿತಾತ್ಮಕ ಅನುಮೋದನೆ ದೊರೆತರೂ ಭೂ ಸ್ವಾಧೀನ ಪ್ರಕ್ರಿಯೆಯಿಂದ ಯೋಜನೆ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ಹೆರಕಲ್‌ ಏತ ನೀರಾವರಿ ಯೋಜನೆಯ ಪೂರ್ಣಫಲ ಪಡೆದು 45 ಸಾವಿರ ಎಕರೆ ಪ್ರದೇಶಕ್ಕೆ ಪೂರ್ಣ ಪ್ರಮಾಣದಲ್ಲಿ ನೀರಾವರಿ ಸೌಕರ್ಯ ಕಲ್ಪಿಸಬೇಕಾದರೆ ಕೈನಕಟ್ಟಿ ಬಳಿ ಕೈಗೆತ್ತಿಕೊಂಡಿರುವ ಹೆರಕಲ್‌ ದಕ್ಷಿಣ ವಿಸ್ತರಣೆ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಇವುಗಳಲ್ಲದೇ ತುಬಚಿ-ಬಬಲೇಶ್ವರ ಯೋಜನೆ, ರಾಮಥಾಳ ನೀರಾವರಿ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿದರೆ ಗರಿಷ್ಠ ಪ್ರಯೋಜನ ಜಿಲ್ಲೆಯ ರೈತರಿಗೆ ದೊರೆಯಲಿದೆ ಎಂದು ಹೇಳಿದ್ದಾರೆ.

ಜಮಖಂಡಿ ತಾಲೂಕಿನ ಹುನ್ನೂರ ಕಡಪಟ್ಟಿ ಏತ ನೀರಾವರಿ ಯೋಜನೆ, ಕೊಣ್ಣೂರ-ಮರೆಗುದ್ದಿ ಏತ ನೀರಾವರಿ ಯೋಜನೆ, ಬೀಳಗಿ-ಮುಧೋಳ ತಾಲೂಕಿನ ಕೆರೆ ತುಂಬಿಸುವ ಮಂಟೂರ ಏತ ನೀರಾವರಿ ಯೋಜನೆ, ಘಟಪ್ರಭಾ ಎಡದಂಡೆ ಕಾಲುವೆ ಅಚ್ಚುಕಟ್ಟು ಪ್ರದೇಶದ ನೀರಾವರಿ ಕೊರತೆ ಅನುಭವಿಸುತ್ತಿರುವ ಜಮೀನುಗಳಿಗಾಗಿ ಅನವಾಲ ಏತ ನೀರಾವರಿ ಯೋಜನೆ, ಮುಧೋಳ, ರಬಕವಿ-ಬನಹಟ್ಟಿ ತಾಲೂಕುಗಳ ಬಹುದಿನದ ಬೇಡಿಕೆ‌ ಸಸಾಲಟ್ಟಿ ಯೋಜನೆ, ಮಂಟೂರ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗಳಿಗೆ ಸರ್ಕಾರ ಶೀಘ್ರವೇ ಮಂಜೂರಾತಿ ನೀಡಿ ಯೋಜನೆ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಲಭ್ಯವಿರುವ ಜಲ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡರೆ ಭವಿಷ್ಯದ ನೀರಿನ ಆತಂಕ ದೂರ ಮಾಡಬಹುದು. ಈ ನಿಟ್ಟಿನಲ್ಲಿ ಸರ್ಕಾರ, ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

18-aranthodu

Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.