ಸುಳ್ಳು ಪ್ರಚಾರ ಪಡೆಯುವ ಬಿಜೆಪಿ ಸರ್ಕಾರ
ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ | ರಾಜ್ಯದ ಪಾಲಿನ ಅನುದಾನಕ್ಕೂ ತಾರತಮ್ಯ
Team Udayavani, Jul 8, 2021, 5:52 PM IST
ಬಾಗಲಕೋಟೆ: ಕೊರೊನಾ, ಪ್ರವಾಹ ನಿರ್ವಹಣೆ ಹಾಗೂ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು, ಸುಳ್ಳು ಹೇಳಿ ಪ್ರಚಾರ ಪಡೆಯುತ್ತಿವೆ. ಸರ್ಕಾರದ ಜನ ವಿರೋಧಿ ನೀತಿಯಿಂದ ಬಡ ಜನರು ತತ್ತರಿಸಿ ಹೋಗಿದ್ದಾರೆ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಆರೋಪಿಸಿದರು.
ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ 2014ರಲ್ಲಿ ದೇಶದಲ್ಲಿ ಬದಲಾವಣೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ನೋಟು ಅಮಾನ್ಯಿಕರಣ, ಅವೈಜ್ಞಾನಿಕ ಜಿಎಸ್‌ಟಿ ಮುಂತಾದ ನೀತಿಯಿಂದ ಪ್ರತಿಯೊಬ್ಬರೂ ರೋಸಿ ಹೋಗಿದ್ದಾರೆ. ಕೊರೊನಾ ವಿಷಯದಲ್ಲಿ ದಿವ್ಯ ನಿರ್ಲಕಷ್ಯ ವಹಿಸಿದ್ದರಿಂದ ಸಾವು ನೋವು ಹೆಚ್ಚಾದವು. ಈ ಕುರಿತು ಎರಡೂ ಸರ್ಕಾರಕ್ಕೆ ಗಂಭೀರತೆಯೇ ಇಲ್ಲ ಎಂದರು.
ಅನುದಾನಕ್ಕೂ ತಾರತಮ್ಯ: ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯಕ್ಕೂ ಅನುದಾನ ಹಂಚಿಕೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ, ರಾಜ್ಯಕ್ಕೆ ಬರಬೇಕಾದ ಅನುದಾನ ಪಡೆಯಲು ಸ್ವತಃ ರಾಜ್ಯ ಸರ್ಕಾರವೇ ಕೋರ್ಟ್ ಮೆಟ್ಟಿಲೇರಿದೆ. ಇಂತಹ ವ್ಯವಸ್ಥೆ ಎಂದೂ ಬಂದಿರಲಿಲ್ಲ. ರಾಜ್ಯದ ಪಾಲಿನ ಹಣ ಬಿಡುಗಡೆ ಮಾಡುವಲ್ಲಿ ಕೇಂದ್ರ ಸ್ಪಂದಿಸುತ್ತಿಲ್ಲ. ಇತ್ತ ರಾಜ್ಯ ಸರ್ಕಾರವೂ ಘೋಷಣೆ ಮಾಡಿದ ಯಾವುದೇ ಸಹಾಯಧನ ಜನರಿಗೆ ತಲುಪಿಲ್ಲ ಎಂದರು.
ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋಟ್ಯಾಂತರ ಖರ್ಚು ಮಾಡಿದೆ ಎಂದು ಹೇಳಿಕೊಂಡಿದೆ. ಇದುವರೆಗೂ ಲೆಕ್ಕ ಕೊಟ್ಟಿಲ್ಲ. ರಾಜ್ಯ ಸರ್ಕಾರವೂ 35 ಸಾವಿರ ಕೋಟಿ ನೀಡಿದ್ದಾಗಿ ಹೇಳಿದ್ದು, ರೈತರು, ಕೂಲಿ ಕಾರ್ಮಿಕರು ಸಹಿತ ಬಡ ಜನರಿಗೆ ತಲುಪಿಲ್ಲ ಎಂದು ಆರೋಪಿಸಿದರು.
ಸಹಾಯಹಸ್ತ ಅಭಿಯಾನ: ಕೊರೊನಾ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದಿವ್ಯ ನಿರ್ಲಕ್ಷéದಿಂದ ಸಾವು-ನೋವು ಸಂಭವಿಸಿವೆ. ಈ ಕುರಿತು ರಾಜ್ಯದ ಪ್ರತಿಯೊಂದು ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಮೂಲಕ ಸಹಾಯಹಸ್ತ ಸರ್ವೆ ಅಭಿಯಾನ ನಡೆಯುತ್ತಿದೆ. ಈ ವೇಳೆ ಸಂಕಷ್ಟ ಎದುರಿಸಿದ ಕುಟುಂಬಗಳಿಗೆ ಪಕ್ಷದಿಂದ ಕೈಲಾದ ನೆರವು ಕೂಡ ನೀಡಲಾಗುತ್ತಿದೆ ಎಂದು ಹೇಳಿದರು.
ಮಾಜಿ ಶಾಸಕ ಜೆ.ಟಿ. ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ಪಾರಸಮಲ್ಲ ಜೈನ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್ .ಜಿ. ನಂಜಯ್ಯನಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ, ಓಬಿಸಿ ಘಟಕದ ಜಿಲ್ಲಾ ಅಧ್ಯಕ್ಷ ಕಾಶಿನಾಥ ಹುಡೇದ, ಪ್ರಮುಖರಾದ ಎಂ.ಎಲ್. ಶಾಂತಗೇರಿ, ಬಂಗಾರೇಶ ಹಿರೇಮಠ, ನಾಗರಾಜ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.
ಇದಕ್ಕೂ ಮುಂಚೆ ನಡೆದ ಸೈಕಲ್ ಜಾಥಾ ಅನ್ನು ನಗರದ ಕಾಂಗ್ರೆಸ್ ಕಚೇರಿಯಿಂದ ಆರಂಭಿಸಿ, ಬಸವೇಶ್ವರ ವೃತ್ತದ ವರೆಗೆ ನಡೆಸಲಾಯಿತು. ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಎಚ್. ವೈ. ಮೇಟಿ, ಜಿ.ಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಎಸ್.ಸಿ ಘಟಕದ ಜಿಲ್ಲಾ ಅಧ್ಯಕ್ಷ ರಾಜು ಮನ್ನಿಕೇರಿ, ಹನುಮಂತ ರಾಕುಂಪಿ, ಚಂದ್ರಶೇಖರ ರಾಠೊಡ, ಗೋವಿಂದರಾಜ ಬಳ್ಳಾರಿ, ಹಾಜಿಸಾಬ ದಂಡಿನ, ಎಸ್.ಎನ್. ರಾಂಪುರ, ಮುತ್ತು ಜೋಳದ, ಎಸ್.ಎನ್. ಗೋಡಿ ಮುಂತಾದವರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.