ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಸ್ಲಿಮರ ಓಲೈಕೆ; ಮುತಾಲಿಕ್
ನೀವು ಆಯ್ಕೆಯಾದ ಕ್ಷೇತ್ರದಲ್ಲಿ ಹಿಂದುಗಳಿಗೆ ರುದ್ರಭೂಮಿ ಇಲ್ಲ.
Team Udayavani, May 14, 2022, 6:09 PM IST
ಬಾದಾಮಿ: ಕಾಂಗ್ರೆಸ್ ಪಕ್ಷದವರು ತಮ್ಮ ವೋಟ್ ಬ್ಯಾಂಕ್ ಸಲುವಾಗಿ ಮುಸ್ಲಿಂರನ್ನು ಓಲೈಕೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕಾಗಿ ಈಗ ಇಡೀ ದೇಶದಲ್ಲಿ ಕಾಂಗ್ರೆಸ್ ಮೂಲೆಗುಂಪಾಗಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.
ಪಟ್ಟಣದ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಹಿಂದು ಸಮಾಜ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುತುಬ್ ಮಿನಾರ್, ತಾಜಮಹಲ್ ನಮ್ಮದೇ. ಬಸವಣ್ಣ, ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ ಹುಟ್ಟಿದ ಕ್ಷೇತ್ರದಲ್ಲಿ ಜನಿಸಿದವರು ನಾವು. ಅಂಬೇಡ್ಕರ್ ಬರೆದ ಸಂವಿಧಾನದ ಆಧಾರದ ಮೇಲೆ ದೇಶ ನಡೆಯುತ್ತಿದೆ ಎಂದರು.ಮಾನಸಿಕತೆ ಬದಲಾವಣೆ ಮಾಡಬೇಕಿದೆ. ನಮಾಜ್ ಮಾಡಿದರೆ ನಮಗೆ ವಿರೋಧವಿಲ್ಲ. ನಮಾಜ್ ಮಾಡುವಾಗ ಮೈಕ್ ನಲ್ಲಿ ಕೂಗಿದರೆ
ನಮ್ಮ ವಿರೋಧವಿದೆ. ಸರಕಾರ 15 ದಿನಗಳ ಗಡುವು ಕೊಟ್ಟಿದೆ. ಆದಕಾರಣ ತಟಸ್ಥವಾಗಿದ್ದೇವೆ ಎಂದು ಹೇಳಿದರು.
ಸಿದ್ದರಾಮಯ್ಯನವರೇ ಕ್ಷೇತ್ರ ಬದಲಾವಣೆ ಮಾಡಿ: ನೀವು ಆಯ್ಕೆಯಾದ ಕ್ಷೇತ್ರದಲ್ಲಿ ಹಿಂದುಗಳಿಗೆ ರುದ್ರಭೂಮಿ ಇಲ್ಲ. ಇಲ್ಲಿ ಹಿಂದುಗಳು ಜಾಗೃತರಾಗಿದ್ದಾರೆ. ನೀವು ಕ್ಷೇತ್ರ ಬದಲಾವಣೆ ಮಾಡಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಮೋದ ಮುತಾಲಿಕ ಸಲಹೆ ನೀಡಿದರು.
ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ: ನನನ್ನು ಬಂಧಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಈಗಾಗಲೇ ನಮ್ಮ ಹಿಂದು ಕಾರ್ಯಕರ್ತರು ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಿಸಲು ತಯಾರಿ ನಡೆಸಿದ್ದಾರೆ. ಇಂತಹ ಹೇಳಿಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶೋಭೆ ತರುವಂಥದಲ್ಲ. ಅವರು ನಮ್ಮನ್ನು ಕೆಣಕುತ್ತಿದ್ದಾರೆ ಎಂದರು.
ಮಾಜಿ ಶಾಸಕರಾದ ಎಂ.ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗರಾಜ ಕಾಚೆಟ್ಟಿ, ಶಿವನಗೌಡ ಸುಂಕದ, ವೀರಯ್ಯ ಮಣ್ಣೂರಮಠ, ಹುಚ್ಚಪ್ಪ ಬೆಳ್ಳಿಗುಂಡಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.