ಕಾಂಗ್ರೆಸ್‌ ಗೆಲುವು ನಿಶ್ಚಿತ: ಕಾಶಪ್ಪನವರ

ಸಿದ್ದರಾಮಯ್ಯನವರ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯ ಜನರಿಗೆ ತಿಳಿಸಿ

Team Udayavani, Mar 16, 2022, 1:29 PM IST

8

ಇಳಕಲ್ಲ: ರಾಜ್ಯದ ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಿತ. ಕಾಂಗ್ರೆಸ್‌ ಪಕ್ಷ ಬಡವರ ಪಕ್ಷ. ಕಾಂಗ್ರೆಸ್‌ ಸದಸ್ಯತ್ವ ಹೊಂದಿ ದೇಶದ ಅಭಿವೃದ್ಧಿಗೆ ಬುನಾದಿ ಹಾಕಬೇಕು. ಸಿದ್ದರಾಮಯ್ಯನವರ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ತಿಳಿಸಿ ಜಾಗೃತಿ ಮೂಡಿಸಬೇಕು ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಇಲ್ಲಿಯ ಗೊಂಗಡಶೆಟ್ಟಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷದ ಹುನಗುಂದ ಮತಕ್ಷೇತ್ರದ ಡಿಜಿಟಲ್‌ ಸದಸ್ಯತ್ವದ ಮುಖ್ಯ ನೋಂದಣಿಕಾರರ ತರಬೇತಿ ಶಿಬಿರ, ಪ್ರಜಾ ಪಂಚಾಯಿತಿ ಪ್ರತಿನಿಧಿಗಳ ಮತ್ತು ಬೂತ್‌ಮಟ್ಟದ ಪ್ರತಿನಿಧಿಗಳ ಸದಸ್ಯತ್ವ ನೋಂದಣಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನ ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವುದಾಗಿ ಹೇಳಿದರು. ಡಿಜಿಟಲ್‌ ಸದಸ್ಯತ್ವ ಹೆಚ್ಚಿಸುವ ಮೂಲಕ ಎಲ್ಲರೂ ಸೇರಿ ಪಕ್ಷವನ್ನು ಬಲಪಡಿಸೋಣ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿ, ಹಿಂದಿನ ಅವ ಧಿಯಲ್ಲಿ ಕ್ರಿಯಾಶೀಲರಾಗಿ ಸದಸ್ಯತ್ವ ಅಭಿಯಾನದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪಾಲ್ಗೊಂಡ ಪರಿಣಾಮ ನಮ್ಮ ಮತಕ್ಷೇತ್ರ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿತ್ತು. ಆದರೆ, ಈ ಬಾರಿ ಕೇವಲ 1500 ಜನರನ್ನು ಮಾತ್ರ ಸದಸ್ಯರನ್ನು ನೋಂದಾಯಿಸಿರುವುದು ಬೇಸರದ ಸಂಗತಿ. ಕಾರ್ಯಕರ್ತರು ನಿರುತ್ಸಾಹಿಗಳಾಗಬಾರದು ಎಂದರು.

ಮುಂದಿನ ಚುನಾವಣೆಯಲ್ಲಿ ವಿಜಯಾನಂದ ಕಾಶಪ್ಪನವರನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಹುನಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ ದೊಡ್ಡಮನಿ ಮಾತನಾಡಿ, ಡಿಜಿಟಲ್‌ ಸದಸ್ಯತ್ವ ಅಭಿಯಾನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ಅವಶ್ಯವಾಗಿದ್ದು, ಪ್ರತಿಯೊಬ್ಬ ಗ್ರಾಮ ಪಂಚಾಯಿತಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷ ಬಲಪಡಿಬೇಕು ಎಂದು ಹೇಳಿದರು.

ವೇದಿಕೆ ಮೇಲೆ ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಪಾರಸಮಲ್‌ ಜೈನ್‌, ಹುನಗುಂದ ಮತಕ್ಷೇತ್ರದ ಉಸ್ತುವಾರಿ ನಿಜಾದ್‌ ಅಹಮ್ಮದ್‌, ಮಹಿಳಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷೆ ಸರಸ್ವರಿ ಈಟಿ, ಕಾಂಗ್ರೆಸ್‌ ಮುಖಂಡರಾದ ಶಾಂತಕುಮಾರ ಸುರಪುರ, ಶರಣಪ್ಪ ಆಮದಿಹಾಳ, ಆನಂದ ಬಾವೂರ, ಮುತ್ತಣ್ಣ ಕಲ್ಗುಡಿ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

6-mahadevapura

Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.