Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

ಮತಾಂತರಕ್ಕೆ ಒಪ್ಪದಕ್ಕೆ ನೇಹಾ ಕೊಲೆ

Team Udayavani, May 3, 2024, 10:10 PM IST

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

ರಬಕವಿ ಬನಹಟ್ಟಿ: ಸ್ವಾತಂತ್ರ್ಯ ನಂತರದ ದಿನಗಳಲ್ಲಿ 60 ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಅವನತಿಯತ್ತ ಸಾಗಿದೆ. ಇದೀಗ 276 ಸ್ಥಾನಗಳಷ್ಟೂ ಕಣಕ್ಕಿಳಿಸದೆ ಕೇವಲ 217 ಕ್ಷೇತ್ರಗಳಿಗೆ ಸೀಮಿತಗೊಂಡಿದೆ. ಇಂತಹ ಪಕ್ಷದಿಂದ ಪ್ರಧಾನಿಯಾಗವರೇ? ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಭಾರಿ ಜನಸ್ತೋಮದೆದುರು ಮಾತನಾಡಿದ ಅವರು, ಪ್ರಧಾನಿ ಹುದ್ದೆಗೆ ಒಂದೆಡೆ ಸ್ಟಾಲಿನ್, ಮಮತಾ ಬ್ಯಾನರ್ಜಿಯಂತವರು ಬೆನ್ನು ಬಿದ್ದಿದ್ದರೆ, ರಾಜ್ಯದ ಸಿಎಂ ಸಿದ್ದರಾಮಯ್ಯನವರೂ ನಾನೂ ಪ್ರಧಾನಿಯಾಗುವೆಯೆಂದು ಹೊರಟಿದ್ದಾರೆ. ರಾಜ್ಯಭಾರವನ್ನೇ ನೀಗಿಸದ ಇಂಥವರಿಂದ ದೇಶಭಾರ ಸಾಧ್ಯವೇ? ಎಂದರು. ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜಕೀಯ ನಡೆಸುತ್ತಿದ್ದಾರೆ ವಿನಃ ಅಭಿವೃದ್ಧಿ ಶೂನ್ಯವಾಗಿದೆ ಎಂದರು.

ದೇಶದ ರಕ್ಷಣೆ, ಸುರಕ್ಷತೆಗಾಗಿ ಮೋದಿಯನ್ನು ಪ್ರಧಾನಿಯನ್ನಾಗಿಸಬೇಕಿದೆ. ಆನಹಿತ, ಬಡವರ ಪರ ಹಾಗು ದೇಶದ ಅಭಿವೃದ್ಧಿ ಕಳೆದ 10 ವರ್ಷಗಳಿಂದ ನಡೆಯುತ್ತಿದೆ. ಮುಂದೆಯೂ ಸುಭದ್ರ ಸರ್ಕಾರಕ್ಕೆ ಬಿಜೆಪಿ ಅನಿವಾರ್ಯವಾಗಿದೆ ಎಂದರು.

ಮತಾಂತರಕ್ಕೆ ಒಪ್ಪದಕ್ಕೆ ಕೊಲೆ: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ ಕ್ಷೀಣಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ. ಮುಸ್ಲಿಂ ಯುವಕ ಕೊಲೆಯಾದ ನೇಹಾಳನ್ನು ಮುಸ್ಲಿಂ ಮತಾಂತರಕ್ಕೆ ಒತ್ತಾಯಿಸಿದ್ದಾನೆ. ಇದಕ್ಕೆ ಸುತಾರಾಂ ಒಪ್ಪದ ಕಾರಣ ಕೊಲೆ ಮಾಡುವಷ್ಟು ಕ್ರೂರಿಯ ರಕ್ಷಣೆಗೆ ರಾಜ್ಯ ಸರ್ಕಾರ ನಿಂತಿರುವುದು ತಲೆ ತಗ್ಗಿಸುವ ವಿಚಾರವೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಶಾಸಕ ಸಿದ್ದು ಸವದಿ ಮಾತನಾಡಿ, ಗ್ಯಾರಂಟಿ ಹೆಸರಲ್ಲಿ ಖಜಾನೆ ಲೂಟಿಯಾಗ್ತಿದೆ. ಅಭಿವೃದ್ಧಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪಂಚ ಗ್ಯಾರಂಟಿ ಹೆಸರಲ್ಲಿ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆಯೆಂದರು.

1 ಲಕ್ಷ ನೀಡಿದರೆ ಮನೆಯಾಳಾಗುವೆ: ಲೋಕಸಭಾ ಪ್ರಣಾಳಿಕೆಯಲ್ಲಿ ಬೋಗಸ್ ಗ್ಯಾರಂಟಿ ಹೇಳಿರುವ ಕಾಂಗ್ರೆಸ್ ಮೊದಲಿಗೆ ಆಡಳಿತಕ್ಕೇ ಬರುವದಿಲ್ಲ. ಇವರೇನಾದರೂ ಪ್ರತಿ ವರ್ಷ ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ ರೂ.ಗಳನ್ನು ನೀಡಿದ್ದಲ್ಲಿ ಶಾಸಕತ್ವಕ್ಕೆ ರಾಜೀನಾಮೆ ನೀಡಿ ಅವರ ಮನೆಯಾಳಾಗಿ ಕೆಲಸ ಮಾಡುವೆ ಎಂದು ಸವಾಲೆಸೆದರು.

60 ಲಕ್ಷ ಮಹಿಳೆಯರಿರುವ ದೇಶದಲ್ಲಿ ವರ್ಷಕ್ಕೆ 60 ಲಕ್ಷ ಕೋಟಿ ರೂ.ಗಳಷ್ಟು ಹಣ ಕೇವಲ ಮಹಿಳಾ ಗ್ಯಾರಂಟಿಗೆ ಬೇಕು. ಪ್ರತಿ ವರ್ಷ ಇಡೀ ಕೇಂದ್ರದ ವಾರ್ಷಿಕ ಬಜೆಟ್ 45 ಲಕ್ಷ ಕೋಟಿ ರೂ.ಗಳಷ್ಟಿದೆ. ಹೀಗಿರುವಾಗ ಹಣ ಹೊಂದಿಸುವ ವಿಚಾರವೇ ಇಲ್ಲದೆ ಬೋಗಸ್ ಗ್ಯಾರಂಟಿಗಳಿಗೆ ಮರುಳಾಗಬೇಡಿ ಎಂದು ನೆರೆದಿದ್ದ ಸಾವಿರಾರು ಮಹಿಳೆಯರೆದುರು ಸವದಿ ಹೇಳಿದರು.

ದಾಖಲೆ ಮೆರವಣಿಗೆ: ಸುಮಾರು ಒಂದೂವರೆ ಕಿ.ಮೀ.ನಷ್ಟು ಉದ್ದನೆಯ ರಸ್ತೆಯಷ್ಟು ಮಹಿಳಾ ಮಣಿಗಳು ಸಾವಿರಾರು ಸಂಖ್ಯೆಯಲ್ಲಿ ಬೃಹತ್ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದು ದಾಖಲೆಯಾಗಿತ್ತು.

ವೇದಿಕೆ ಮೇಲೆ ಸವಿತಾ ಹೊಸೂರ, ವೈಷ್ಣವಿ ಬಗೇವಾಡಿ, ಪವಿತ್ರಾ ತುಕ್ಕಣ್ಣವರ, ರತ್ನಾ ಕೊಳಕಿ, ಮಾಲಾ ಬಾವಲತ್ತಿ, ಶಾಂತಾ ಸೊರಗಾಂವಿ, ಗೌರಿ ಮಿಳ್ಳಿ, ಮೀನಾಕ್ಷಿ ಹಿರೇಮಠ, ದುರ್ಗವ್ವ ಹರಿಜನ, ಸಾವಿತ್ರಿ ಆಸಂಗಿ, ಶ್ರೀಶೈಲ ಬೀಳಗಿ, ಧರೆಪ್ಪ ಉಳ್ಳಾಗಡ್ಡಿ, ಪ್ರಭು ಮೊಳೇದ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.