ಗಲಗಲಿ ಕ್ಷೇತ್ರ ಗೆದ್ದು ಬಾಗಲಕೋಟೆ ಜಿ.ಪಂ ಉಳಿಸಿಕೊಂಡ ಕಾಂಗ್ರೆಸ್!
Team Udayavani, Jun 17, 2018, 9:28 AM IST
ಬಾಗಲಕೋಟೆ: ಜಿದ್ದಾಜಿದ್ದಿನ ಕಣವಾಗಿದ್ದ ಬಾಗಲಕೋಟೆ ಜಿ.ಪಂನ ಗಲಗಲಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು ಜಿಲ್ಲಾ ಪಂಚಾಯತನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಮುಗಿಯಪ್ಪ ಬಸ್ಸಪ್ಪ ದೇವನಾಳ ಅವರು ಬಿಜೆಪಿಯ ಚನ್ನಪ್ಪ ಹಣಮಂತ ಜಮಖಂಡಿ ಅವರನ್ನು ಸೋಲಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ವೆಂಕನಗೌಡ ತಿಮ್ಮನಗೌಡ ಪಾಟೀಲ್ ಅವರ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಮಾಜಿ ಕಾಂಗ್ರೆಸ್ ಶಾಸಕ ಜಿ.ಟಿ.ಪಾಟೀಲ್ ಮತ್ತು ಹಾಲಿ ಬಿಜೆಪಿ ಶಾಸಕ ಮುರುಗೇಶ ನಿರಾಣಿ ಅವರಿಗೆ ಪ್ರತಿಷ್ಠೆಯ ಕಣವಾಗಿತ್ತು. ಇಬ್ಬರೂ ಭರ್ಜರಿ ಪ್ರಚಾರ ನಡೆಸಿದ್ದರು.
ಜಿ.ಪಂ ಉಳಿಸಿಕೊಂಡ ಕಾಂಗ್ರೆಸ್
36 ಸದಸ್ಯ ಬಲದ ಜಿ.ಪಂ.ನಲ್ಲಿ ಕಾಂಗ್ರೆಸ್ 17 , ಬಿಜೆಪಿ 18 ಮತ್ತು ರೈತ ಸಂಘದ ಓರ್ವ ಸದಸ್ಯರಿದ್ದರು. ಇದೀಗ ಕಾಂಗ್ರೆಸ್‌ನ ಸಂಖ್ಯೆ 18 ಆಗಿದ್ದು ಜಿ.ಪಂ.ಅಧ್ಯಕ್ಷೆ ವೀಣಾ ಕಾಶಪ್ಪನವರ ಹುದ್ದೆ ಉಳಿದಿದೆ. ಹಿಂದೆ ಬಿಜೆಪಿ ಸದಸ್ಯನ ಗೈರಿನಿಂದ ಕಾಂಗ್ರೆಸ್ ಅಧಿಕಾರಕ್ಕೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.