624 ಗ್ರಾಮಗಳ 3ಲಕ್ಷ ಮನೆಗಳಿಗೆ ನಿರಂತರ ನೀರು

ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ

Team Udayavani, May 15, 2020, 9:52 AM IST

624 ಗ್ರಾಮಗಳ 3ಲಕ್ಷ  ಮನೆಗಳಿಗೆ ನಿರಂತರ ನೀರು

ಬಾಗಲಕೋಟೆ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಜಲ ಜೀವನ ಮಿಷನ್‌ (ಜೆಜೆಎಂ) ಯೋಜನೆಯಡಿ ಗ್ರಾಮೀಣ ಪ್ರದೇಶದ 624 ಗ್ರಾಮಗಳ 3,07,314 ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸಿ ನಿರಂತರ ನೀರು ಪೂರೈಕೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿ ಮನೆಗಳಿಗೂ ಒಂದು ನಳ ಜೋಡಣೆ ಮತ್ತು 55 ಎಲ್‌ಪಿಸಿಡಿ ನೀರು ಪೂರೈಕೆಗಾಗಿ ಕೇಂದ್ರ ಸರ್ಕಾರ ಪ್ರಸ್ತಾಪಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮಗಳಲ್ಲಿ ಸಮಿತಿ ರಚಿಸಲಾಗುತ್ತಿದೆ. ಇದಕ್ಕಾಗಿ ಗ್ರಾಮ ಪಂಚಾಯತಿಯಿಂದ ಶೇ.10 ರಷ್ಟು ವಂತಿಗೆ ಪಡೆದು ದಿನ 24 ಗಂಟೆಗಳ ಕಾಲ ನೀರು ಪೂರೈಸಲು ಯೋಜನೆ ಜಾರಿಗೊಳಿಸಲಾಗುವುದು ಎಂದರು.

ಸುಸ್ಥಿರ ಜಲಮೂಲ ಹಾಗೂ ತಾಳುವಿಕೆ ಇರುವ ಜಲಮೂಲ ಒದಗಿಸುವುದು, ಮೊದಲ ಹಂತದಲ್ಲಿ 55 ಎಲ್‌ಪಿಸಿಡಿ ನೀರು ಪೂರೈಕೆ ಇರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ. 55 ಎಲ್‌.ಪಿ.ಸಿ.ಡಿಗಿಂತ ಕಡಿಮೆ ನೀರು ಪೂರೈಕೆ ಇರುವ ಯೋಜನೆ ಪುನಶ್ಚೇತಗೊಳಿಸಿ ಅಂತಹ ಗ್ರಾಮಗಳಿಗೆ ಹೆಚ್ಚುವರಿ ಸ್ಥಿರ ಜಲಮೂಲ ಪ್ರಸ್ತಾಪಿಸಿ ಅವುಗಳನ್ನು ಸಹ ಜೆಜೆಎಂ ಯೋಜನೆ ವ್ಯಾಪ್ತಿಗೆ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು. ಕೇಂದ್ರ ಸರಕಾರದ ಜೆಜೆಎಂ ಯೋಜನೆಯನ್ನು ಕರ್ನಾಟಕದಲ್ಲಿ ಮನೆ- ಮನೆಗೆ ಗಂಗೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್‌ ಸಚಿವರು ಘೋಷಿಸಿದ್ದಾರೆ. ಈ ಯೋಜನೆಯಡಿ ಗ್ರಾಮ ಪಂಚಾಯತನ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಯ ಜವಾಬ್ದಾರಿ ಹೆಚ್ಚಿಗೆ ಇದ್ದು, ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಮುತುವರ್ಜಿಯಿಂದ ಕೆಲಸ ನಿರ್ವಹಿಸಬೇಕಾಗಿದೆ. ಈ ಯೋಜನೆಗೆ ಕೇಂದ್ರ ಸರಕಾರದಿಂದ ಶೇ. 45, ರಾಜ್ಯ ಸರಕಾರದಿಂದ ಶೇ. 45 ಹಾಗೂ ಗ್ರಾಮೀಣ ಸಮುದಾಯದಿಂದ ಶೇ. 10 ರಷ್ಟು ವಂತಿಕೆ ವಿಂಗಡಿಸಿದ್ದಾರೆ ಎಂದರು.

ಜಿಲ್ಲೆಯ ಒಟ್ಟು 6 ತಾಲೂಕುಗಳಲ್ಲಿ ಒಟ್ಟು 198 ಗ್ರಾಮ ಪಂಚಾಯತಿಗಳಿದ್ದು, 662 ಗ್ರಾಮಗಳಿವೆ. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 320877 ಮನೆಗಳಿವೆ. ಕ್ರೀಯಾತ್ಮಕ ನಳಗಳನ್ನು ಹೊಂದಿರುವ ಮನೆಗಳು 13563 ಇದ್ದು, ಕ್ರಿಯಾತ್ಮಕ ನಳಗಳ ಜೋಡಣೆ ಮಾಡಬೇಕಾದ ಮನೆಗಳ ಸಂಖ್ಯೆ 307314 ಇರುತ್ತವೆ. 2020-21ನೇ ಸಾಲಿಗೆ 47514,2021-22ನೇ ಸಾಲಿಗೆ 84765, 2022-23ನೇ ಸಾಲಿಗೆ 79075, 2023-24ನೇ ಸಾಲಿಗೆ 95960 ಮನೆಗಳ ಜೋಡಣೆಗೆ ಪ್ರಸ್ತಾಪಿಸಲಾಗಿದ್ದು, ಇದಕ್ಕಾಗಿ 366.935 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಮಂಜೂರಾತಿಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಆರ್‌. ಎನ್‌. ಪುರೋಹಿತ ಸೇರಿದಂತೆ ಇತರರು ಉಪಸ್ಥಿತರಿದ್ದರು.

 ಶಾಲೆ-ವಸತಿ ನಿಲಯ ಆಯ್ಕೆ : ಜಿಲ್ಲೆಗೆ ದಿನದಿಂದ ದಿನಕ್ಕೆ ಬೇರೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸುತ್ತಿದ್ದು, ಸೋಂಕು ಕಾಣಿಸಿಕೊಂಡ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸಿದವರನ್ನು ಇನ್ಸ್ಟಿಟ್ಯೂಶನ್‌ ಕ್ವಾರಂಟೈನ್‌ ಮಾಡಲು ಜಿಲ್ಲೆಯಲ್ಲಿ ಒಟ್ಟು 507 ಶಾಲೆಗಳನ್ನು ಗುರುತಿಸಲಾಗಿದ್ದು, ಒಟ್ಟು 2059 ಕೊಠಡಿ, 806 ಶೌಚಾಲಯಗಳು ಇವೆ. 6 ಲಾಡ್ಜಗಳನ್ನು ಸಹ ಗುರುತಿಸಲಾಗಿದೆ. ಅದರಲ್ಲಿ 93 ರೂಮ್‌, 93 ಶೌಚಾಲಯಗಳಿವೆ. 311 ಹಾಸ್ಟೇಲ್‌ಗ‌ಳನ್ನು ಸಹ ಗುರುತಿಸಲಾಗಿದ್ದು, 254 ರೂಮ್‌, 254 ಶೌಚಾಲಯಗಳ ವ್ಯವಸ್ಥೆ ಇವೆ. ಒಟ್ಟಾರೆಯಾಗಿ 2464 ರೂಮ್‌, 1153 ಶೌಚಾಲಯಗಳ ವ್ಯವಸ್ಥೆ ಇದ್ದು, ಒಟ್ಟು 1898 ಜನರನ್ನು ಕ್ವಾರಂಟೈನ್‌ ಮಾಡಲು ಸಿದ್ಧಪಡಿಸಲಾಗಿದೆ. ಕ್ವಾರಂಟೈನ್‌ ಶಾಲೆಗಳಲ್ಲಿ ಸ್ನಾನಗೃಹಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ 3 ಲಕ್ಷಗಳ ವೆಚ್ಚದಲ್ಲಿ ಕಟ್ಟಿಸಿಕೊಡಲಾಗುತ್ತಿದೆ ಎಂದು ಜಿಪಂ ಸಿಇಒ ಹೇಳಿದರು.

ಬೇರೆ ರಾಜ್ಯದಿಂದ 84 ಜನ ಆಗಮನ : ಬೇರೆ ರಾಜ್ಯಗಳಿಂದ ಬಾಗಲಕೋಟೆ ಜಿಲ್ಲೆಗೆ ಗುರುವಾರ ಒಟ್ಟು 84 ಜನ ಆಗಮಿಸಿದ್ದಾರೆ. 3 ಜನ ಮಾತ್ರ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದಾರೆ. ಬೇರೆ ರಾಜ್ಯಗಳಿಂದ ಬಾಗಲಕೋಟೆ ತಾಲೂಕಿಗೆ 39, ಬೀಳಗಿ 16, ಹುನಗುಂದ 15, ಮುಧೋಳ 7, ಜಮಖಂಡಿ ತಾಲೂಕಿಗೆ 7 ಜನ ಆಗಮಿಸಿದ್ದಾರೆ. ಇದರಲ್ಲಿ ಹೊರ ರಾಜ್ಯದಿಂದ ಬಂದವರನ್ನು ಇನ್ಸ್ಟಿಟ್ಯೂಶನ್‌ಕ್ವಾರಂಟೈನ್‌ ಹಾಗೂ ಬೇರೆ ಜಿಲ್ಲೆಗಳಿಂದ ಆಗಮಿಸಿದ 3 ಜನರನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.