ಕೋವಿಡ್ 19 ಮುಕ್ತ ಜಿಲ್ಲೆಗೆ ಸಹಕರಿಸಿ: ಡಿಸಿಎಂ
Team Udayavani, Apr 23, 2020, 2:57 PM IST
ಬಾಗಲಕೋಟೆ: ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.
ಬುಧವಾರ ನಗರದಲ್ಲಿ ಕೋವಿಡ್ 19 ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಭೀತಿ ಕ್ರಮೇಣ ಇಳಿಮುಖವಾಗುತ್ತಿದೆ. ಜನರಲ್ಲಿ ಕೋವಿಡ್ ಲಕ್ಷಣಗಳು ಇರುವುದು ಕಡಿಮೆಯಾಗುತ್ತಿವೆ. ಈಗಾಗಲೇ 21 ಸೋಂಕಿತರ ಪೈಕಿ 2 ಸಂಪೂರ್ಣ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸಂತಸದ ವಿಷಯವಾಗಿದೆ. 28 ದಿನಗಳ ಕ್ವಾರಂಟೈನ್ ಪೂರ್ಣಗೊಂಡವರನ್ನು ಮನೆಗೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು, ನರ್ಸ್‌ಗಳ ಹಾಗೂ ಇತರೆ ಸಿಬ್ಬಂದಿ ಬಗ್ಗೆ ಕಾಳಜಿ ವಹಿಸುವ ಕೆಲಸವಾಗಬೇಕು. ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತರು ಗುಣಮುಖರಾಗಿ ಹೊರಗೆ ಬರುವಂತಾಗಬೇಕು ಎಂದರು. ಆಶಾ ಕಾರ್ಯಕರ್ತೆಯರು ಸರ್ವೇ ಮಾಡಿ ಆರೋಗ್ಯ ವಿಚಾರಿಸುತ್ತಿರುವ ಕಾರ್ಯವನ್ನು ಉಪ ಮುಖ್ಯಮಂತ್ರಿಗಳು ಶ್ಲಾಘಿಸಿದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆಯ ಹಳೆಯ ಬಾಗಲಕೋಟೆ, ಮುಧೋಳ, ಮುಗಳಖೋಡ ಹಾಗೂ ಜಮಖಂಡಿ ನಗರದಲ್ಲಿ ಸೋಂಕು ದೃಢಪಟ್ಟ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ಅಲ್ಲಿರುವ ಜನರಿಗೆ ಬೇಕಾಗುವ ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸ ಮಾಡಲಾಗುತ್ತಿದೆ. ನಾಲ್ಕು ಕಡೆ ಕಂಟೈನ್ ಮೆಂಟ್ ಝೋನ್‌ಗಳಿಗೆ ನಿಯಮ ಪಾಲನೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಗೆ ಕಾಸರಗೋಡು, ಮಹಾರಾಷ್ಟ್ರ, ಗೋವಾ ಸೇರಿದಂತೆ ಇತರೆ ಕಡೆಗಳಿಂದ ಆಗಮಿಸಿದ ಜನರಿಗಾಗಿ 7 ಕಡೆ ಕೋವಿಡ್ ಪರಿಹಾರ ಕೇಂದ್ರ ಸ್ಥಾಪಿಸಿ ಅಲ್ಲಿ ಒಟ್ಟು 144 ಜನ ವಲಸಿಗರನ್ನು ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿಯವರೆಗೆ ಯಾರಲ್ಲಿ ಕೋವಿಡ್ ಲಕ್ಷಣಗಳಿಲ್ಲ. 28 ದಿನಗಳ ಕ್ವಾರಂಟೈನ್ ಪೂರ್ಣಗೊಂಡ ಮೇಲೆ ಅವರ ಮನೆಗಳಿಗೆ ಕಳುಹಿಸಿಕೊಡಲಾಗುವುದು. ಜಿಲ್ಲಾದ್ಯಂತ ಮೇ 3ರವರೆಗೆ ಕಲಂ 144 ಜಾರಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣಾಧಿಕಾರಿ ಡಾ| ಎ.ಎನ್.ದೇಸಾಯಿ ಮಾತನಾಡಿ ಜಿಲ್ಲೆಯಲ್ಲಿ ಒಟ್ಟಯ 1303 ಜನರ ಮೇಲೆ ಮಾತ್ರ ನಿಗಾ ವಹಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 1538 ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1236 ನೆಗಟಿವ್, 21 ಪಾಜಿಟಿವ್ ಹಾಗೂ 1 ಮೃತಪಟ್ಟ ಪ್ರಕರಣ ವರದಿಯಾಗಿದೆ. 253 ಸ್ಯಾಂಪಲ್‌ಗಳ ವರದಿ ಬಾಕಿ ಇವೆ. ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮಟರಿಯಲ್ಸ್‌ಗಳು ಲಭ್ಯವಿದೆ ಎಂದರು.
ಕ್ಷೌರಿಕರಿಗೆ ಆಹಾರಧಾನ್ಯ ಕಿಟ್ : ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ಕ್ಷೌರಿಕರಿಗೆ ದಿನನಿತ್ಯದ ಬಳಕೆಗೆ ಬೇಕಾಗುವ ಅಗತ್ಯ ವಸ್ತುಗಳ ಫುಡ್ ಕಿಟ್‌ಗಳನ್ನು ಬಾಗಲಕೋಟೆ ನಗರದ 145 ಕ್ಷೌರಿಕರಿಗೆ ನೀಡಲಾಯಿತು. ಜಿಲ್ಲೆಯ ಎಲ್ಲ ನಗರ-ಪಟ್ಟಣ ಪ್ರದೇಶದ ಕ್ಷೌರಿಕ ಕುಟುಂಬಗಳಿಗೆ ತಲಾ 1200 ಮೊತ್ತ ಆಹಾರಧಾನ್ಯಗಳ ಕಿಟ್ ಅನ್ನು ಎಸ್‌ಡಿಆರ್‌ಎಫ್ ನಿಧಿಯಿಂದ ನೀಡಲಾಗುತ್ತಿದೆ. –ಗೋವಿಂದ ಕಾರಜೋಳ, ಡಿಸಿಎಂ
1.13 ಕೋಟಿ ರೂ. ಸಂಗ್ರಹ : ಜಿಲ್ಲೆಯ ದಾನಿಗಳಿಂದ ಕೋವಿಡ್ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ ಒಟ್ಟು 1,13,58,866 ರೂ.ಗಳ ಸಂಗ್ರಹವಾಗಿದೆ. ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 36,23,866 ರೂ. ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 77,35,000 ರೂ. ನೀಡಿದ್ದಾರೆ. -ಕ್ಯಾ.ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ
5 ಲಕ್ಷ ಮೊತ್ತದ ಮಾಸ್ಕ್ : ಜಿಲ್ಲೆಯ ಜನರಿಗೆ ಉಚಿತವಾಗಿ ವಿತರಿಸಲು ಸಂಸದರ ನಿಧಿಯಿಂದ 5 ಲಕ್ಷ ಮೊತ್ತದ ಮಾಸ್ಕ್ ನೀಡಲಾಗಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳಿಂದ ಉತ್ಪಾದಿಸಿದ ಕಾಟನ್ ಬಟ್ಟೆಯ ಗುಣಮಟ್ಟದ ಮಾಸ್ಕ್ ಗಳನ್ನು ಜಿಲ್ಲೆಯ ಜನರಿಗೆ ನೀಡಲು ಅಧಿಕಾರಿಗಳಿಗೆ ನೀಡಲಾಗಿದೆ.- ಪಿ.ಸಿ. ಗದ್ದಿಗೌಡರ, ಸಂಸದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.