ಕೋವಿಡ್ 19: ಕಟ್ಟುನಿಟ್ಟಿನ ಕ್ರಮಕ್ಕೆ ನಿರಾಣಿ ಸೂಚನೆ
Team Udayavani, Apr 18, 2020, 2:35 PM IST
ಬೀಳಗಿ: ದಿನದಿಂದ ದಿನಕ್ಕೆ ಕೋವಿಡ್-19 ಭೀತಿ ಹೆಚ್ಚುತ್ತಲೆ ಸಾಗಿದೆ. ಈ ನಿಟ್ಟಿನಲ್ಲಿ ಸಂಬಂಸಿದ ಎಲ್ಲ ಅ ಧಿಕಾರಿ ವರ್ಗ ಮತ್ತು ಪೊಲೀಸ್ ಇಲಾಖೆ ಇನ್ನು ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶುಕ್ರವಾರ ಕರೆದ ಕೋವಿಡ್-19 ತುರ್ತು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರು ಮಾತನಾಡಿದರು. ಕೋವಿಡ್-19 ತಡೆಗಾಗಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ, ತಾಲೂಕಿನ ಎಲ್ಲ ಗ್ರಾಪಂ ಮತ್ತು ನಗರದ ಪಪಂ ಇಲಾಖೆ ಸೇರಿದಂತೆ ಸಂಬಂ ಸಿದ ಎಲ್ಲ ಅಧಿಕಾರಿ ವರ್ಗದ ಅವಿರತ ಪರಿಶ್ರಮದಿಂದಾಗಿಯೇ ಸದ್ಯ ಅದೆಷ್ಟೋ ಪ್ರಮಾಣದಲ್ಲಿ ಕೋವಿಡ್-19 ಮಹಾಮಾರಿಗೆ ಬ್ರೇಕ್ ಹಾಕಲು ಸಾಧ್ಯವಾಗಿದೆ.
ತಾಲೂಕಿನೊಳಗೆ ಹೋಗಿಬರುವ ವಾಹನ ಹಾಗೂ ಜನರ ಮೇಲೆ ತೀವ್ರ ನಿಗಾ ಇರಿಸಬೇಕು. ಸಂದೇಹವಿದ್ದ ವ್ಯಕ್ತಿಗಳನ್ನು ಕೂಡಲೆ ತಪಾಸಣೆ ಮಾಡಲು ಕ್ರಮ ಕೈಗೊಳ್ಳಬೇಕು. ಇದುವರೆಗೆ ಅಧಿಕಾರಿಗಳು, ಪೊಲೀಸರು ಹಾಗೂ ಸಂಬಂಧಿ ಸಿದ ಎಲ್ಲ ಸಿಬ್ಬಂದಿ ವೀರ ಸೈನಿಕರಂತೆ ಕೋವಿಡ್-19 ವಿರುದ್ಧ ಹೋರಾಟ ನಡೆಸಿರುವ ಕ್ರಮ ಶ್ಲಾಘನೀಯ ಆಗಿದೆ. ಮುಂದೆಯೂ ಕೂಡ ಕಟ್ಟುನಿಟ್ಟಿನಿಂದ ಕೊರೊನಾ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.
ತಹಶೀಲ್ದಾರ್ ಭೀಮಪ್ಪ ಅಜೂರ, ಸಿಪಿಐ ಸಂಜೀವ ಬಳಿಗಾರ, ಪಪಂ ಮುಖ್ಯಾಧಿಕಾರಿ ದೇವೀಂದ್ರ ಧನಪಾಲ, ತಾಪಂ ಇಒ ಎಂ.ಕೆ. ತೊದಲಬಾಗಿ, ತಾಲೂಕು ಆರೋಗ್ಯಾಧಿಕಾರಿ ಡಾ|ದಯಾನಂದ ಕರೆಣ್ಣವರ, ಮುಖ್ಯ ವೈದ್ಯಾಧಿಕಾರಿ ಡಾ|ಸಂಜಯ ಯಡಹಳ್ಳಿ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.