ಸಿಇಟಿ ಪರೀಕ್ಷಾರ್ಥಿಗಳಿಗೆ ಕೋವಿಡ್ ಆತಂಕ
Team Udayavani, Jun 6, 2020, 8:40 AM IST
ಬನಹಟ್ಟಿ: ಕೋವಿಡ್-19 ಸಂದರ್ಭದಲ್ಲಿ ರಬಕವಿ ಬನಹಟ್ಟಿ ತಾಲೂಕಿನ ಅಂದಾಜು 1200 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ಜಮಖಂಡಿಗೆ ಹೋಗಬೇಕಾಗಿದ್ದು, ಕೋವಿಡ್ ಹರಡುವ ಭೀತಿಯಲ್ಲಿದ್ದಾರೆ.
ಆದ್ದರಿಂದ ರಬಕವಿ ಬನಹಟ್ಟಿಯಲ್ಲಿಯೇ ಪರೀಕ್ಷಾ ಕೇಂದ್ರ ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ನೇಕಾರ ಮಾಲೀಕರ ಮುಖಂಡ ಶಂಕರ ಜಾಲಿಗಿಡದ ತಿಳಿಸಿದರು. ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸಿಇಟಿ ಪರೀಕ್ಷಾ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಶುಕ್ರವಾರ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಮುಖಂಡ ರಾಜೇಂದ್ರ ಭದ್ರನ್ನವರ ಮಾತನಾಡಿ, ಇಲ್ಲಿಯ ಬಡ ನೇಕಾರರ ಮಕ್ಕಳು ಎರಡು ದಿನಗಳ ಕಾಲ ಜಮಖಂಡಿಗೆ ಹೋಗಿ ಬರಬೇಕಾಗಿರುವುದರಿಂದ ಆರ್ಥಿಕವಾಗಿಯೂ ತೊಂದರೆಯಾಗುತ್ತದೆ. ಇನ್ನೂ 1200 ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಉಂಟಾಗುತ್ತದೆ ಎಂದು ಮನವರಿಕೆ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ, ಇಷ್ಟೊಂದು ವಿದ್ಯಾರ್ಥಿಗಳಿಗೆ ಅನುಕೂಲವಾಗುವುದಾದರೆ ಸಂಬಂಧಪಟ್ಟ ಶಿಕ್ಷಣ ಸಚಿವರು ಮತ್ತು ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಇಲ್ಲಿಯೇ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸುವುದಾಗಿ ತಿಳಿಸಿದರು. ಈ ವೇಳೆ ಲಕ್ಷ್ಮಣ ದೇಸರಟ್ಟಿ, ಬಸವರಾಜ ಗುಡೋಡಗಿ, ಶಂಕರ ಕೆಸರಗೊಪ್ಪ, ರಾಹುಲ ಕಲಾಲ, ಕಿರಣ ಕರಲಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.