ಕೋವಿಡ್ ಜಾಗೃತಿಗೆ ರಸ್ತೆಗಿಳಿದ ನ್ಯಾಯಾಧೀಶರು
Team Udayavani, Nov 14, 2020, 3:10 PM IST
ಬಾಗಲಕೋಟೆ: ನವನಗರದ ಎಸ್‌ಬಿಐ ಬ್ಯಾಂಕ್, ಪೆಟ್ರೋಲ್ ಬಂಕ್ ಹತ್ತಿರ ಹಾಗೂ ಇತರೆ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಿದರು.
ಶುಕ್ರವಾರ ಜಿಲ್ಲಾ ನ್ಯಾಯಾಲಯ, ಆರೋಗ್ಯ ಇಲಾಖೆ, ಪೊಲೀಸ್ ಹಾಗೂ ವಕೀಲರ ಸಂಘದಸಹಯೋಗದಲ್ಲಿ ಕೋವಿಡ್-19 ಜಾಗೃತಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿಮಾಸ್ಕ್ ಹಾಕಿಕೊಳ್ಳದೇ ಸಂಚರಿಸುತ್ತಿರುವ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ವಿತರಿಸಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತ ಕ್ರಮಗಳ ಕುರಿತು ಕರಪತ್ರ ವಿತರಿಸಿದರು.
ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ನಡೆದಾಡುತ್ತಿರುವ ವೃದ್ಧರಿಗೆ, ಮಕ್ಕಳಿಗೆ ಹಾಗೂ ಆಟೋ ಹಾಗೂ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿರುವ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ವಿತರಿಸಿ, ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ಗಳನ್ನು ಧರಿಸುವಂತೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಕೋವಿಡ್-19 ಅರಿವು ಕಾರ್ಯಕ್ರಮದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಹೇಮಲತಾ ಹುಲ್ಲೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎ.ಎನ್.ದೇಸಾಯಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ|ಬಿ.ಜಿ.ಹುಬ್ಬಳ್ಳಿ, ಸಹಾಯಕ ಸರಕಾರಿ ಅಭಿಯೋಜಕಿ ಶಾರದಾ ಬದಾಮಿ, ನಗರಸಭೆ ಪೌರಾಯುಕ್ತ ಮುನಿಶ್ಯಾಮಪ್ಪ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಎಂ.ಎಚ್.ಕಡಕೋಳ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.