138 ಜನ ಗುಣಮುಖ-ಬಿಡುಗಡೆ; ಹೊಸದಾಗಿ 168 ಜನರಿಗೆ ಸೋಂಕು
Team Udayavani, Aug 16, 2020, 3:40 PM IST
ಬಾಗಲಕೋಟೆ: ಜಿಲ್ಲೆಯಲ್ಲಿ 138 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಶನಿವಾರ ಹೊಸದಾಗಿ 168 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3994 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 2941 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕು 37, ಬಾದಾಮಿ 36, ಹುನಗುಂದ 29, ಬೀಳಗಿ 22, ಮುಧೋಳ 25, ಜಮಖಂಡಿ 19 ಜನ ಇದ್ದು, ಅವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ 1642 ಸ್ಯಾಂಪಲ್‌ಗಳ ವರದಿ ಬರಬೇಕಿದೆ. ಪ್ರತ್ಯೇಕವಾಗಿ 596 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 42,439 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 36516 ನೆಗೆಟಿವ್, 3,994 ಪಾಸಿಟಿವ್ ಬಂದಿವೆ.
ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಜಿಲ್ಲೆಯ ವಿವಿಧ ಕೋವಿಡ್ ಕೇರ್ ಸೆಂಟರ್‌ನಲ್ಲಿ 999 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಿಂದ ಕಳುಹಿಸಿದ್ದ ಒಟ್ಟು 192 ಸ್ಯಾಂಪಲ್‌ಗಳು ರಿಜೆಕ್ಟ್ ಆಗಿವೆ. ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್ 223 ಇದ್ದು, ಇನ್‌ಸ್ಟಿಟ್ಯೂಶನ್ ಕ್ವಾರಂಟೈನ್‌ನಲ್ಲಿದ್ದ 8307 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.