144 ಜನರಿಗೆ ಸೋಂಕು ದೃಢ
Team Udayavani, Sep 6, 2020, 3:01 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿಗೆ ಮತ್ತಿಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 64 ಜನ ಕೋವಿಡ್‌ನಿಂದ ಗುಣಮುಖರಾಗಿನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಶನಿವಾರ ಹೊಸದಾಗಿ 144 ಜನರಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 6881 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 5794 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ
ಬಾಗಲಕೋಟೆ ತಾಲೂಕಿನಲ್ಲಿ 46, ಬಾದಾಮಿ 11, ಹುನಗುಂದ 32, ಬೀಳಗಿ 16, ಮುಧೋಳ 16, ಜಮಖಂಡಿ 19 ಹಾಗೂ ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 640 ಸ್ಯಾಂಪಲ್‌ಗಳ ವರದಿ ಬಾಕಿ ಇವೆ. ಪ್ರತ್ಯೇಕವಾಗಿ 144 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 68178 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 60348 ನೆಗೆಟಿವ್, 6881 ಪಾಸಿಟಿವ್ ಬಂದಿವೆ.
ಈ ವರೆಗೆ 80 ಜನ ಮೃತಪಟ್ಟಿದ್ದಾರೆ. ಇನ್ನು 1007 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 214 ಸ್ಯಾಂಪಲ್ ಗಳು ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 652 ಇದ್ದು, ಇನ್‌ಸ್ಟಿಟ್ಯೂಶನ್ ಕ್ವಾರಂಟೈನ್‌ನಲ್ಲಿದ್ದ 8803 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ನನ್ನನ್ನು ತುಳಿದಿದೆ ಎನ್ನುವುದು ತಪ್ಪು: ಈಶ್ವರಪ್ಪ
Mudhol: ಮಧ್ಯರಾತ್ರಿ ನಡುರಸ್ತೆಯಲ್ಲಿ ಕಬ್ಬು ತುಂಬಿದ ಟ್ರೇಲರ್ ಪಲ್ಟಿ
Political Gap: ನಾನು ರಾಜಕೀಯದಿಂದ ಸ್ವಿಚ್ಡ್ ಆಫ್ ಆಗಿದ್ದೇನೆ: ಸ್ಪೀಕರ್ ಯು.ಟಿ. ಖಾದರ್
Excise: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಇನ್ನು ಕೌನ್ಸೆಲಿಂಗ್: ಸಚಿವ ತಿಮ್ಮಾಪುರ
ನಿರ್ವಹಣೆಯೇ ಇಲ್ಲದ ಬಸ್ ನಿಲ್ದಾಣ! ರಾತ್ರಿ ವೇಳೆ ಬಸ್‌ಗಳ ಓಡಾಟ ತೀರಾ ಕಡಿಮೆ