ಕೋವಿಡ್ ನುಂಗಿತು 8.72 ಕೋಟಿ ಅನುದಾನ


Team Udayavani, Mar 26, 2021, 6:43 PM IST

ಕೋವಿಡ್  ನುಂಗಿತು 8.72 ಕೋಟಿ ಅನುದಾನ

ಬಾಗಲಕೋಟೆ: ಕಳೆದ ವರ್ಷ ಮಾ. 31ರಂದು ಜಿಲ್ಲೆಗೆ ಕಾಲಿಟ್ಟ ಕೋವಿಡ್ ಎಂಬ ಮಹಾಮಾರಿ ಇಲ್ಲಿಯವರೆಗೆ ಒಟ್ಟು 8.72 ಕೋಟಿಅನುದಾನ ನುಂಗಿದೆ. ಜಿಲ್ಲೆಯಲ್ಲಿ ಕೊರೊನಾಸಮಗ್ರ ನಿರ್ವಹಣೆಗೆ 8.72 ಕೋಟಿ ಖರ್ಚು ಮಾಡಲಾಗಿದೆ.

ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ಕೆ. ರಾಜೇಂದ್ರ,ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಯಂತ್ರೋಪಕರಣಗಳ ಖರೀದಿ, ಬೆಡ್‌, ಕಾಟಾ,ಪಿಪಿಇ ಕಿಟ್‌, ಚಿಕಿತ್ಸೆಗೆ ಬೇಕಾದ ಎಲ್ಲ ರೀತಿಯಸಲಕರಣೆ, ಊಟದ ವ್ಯವಸ್ಥೆ ಹಾಗೂ ಇತರೆಸೇರಿ ಇಲ್ಲಿಯವರೆಗೆ ಒಟ್ಟು 8.72 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಬಗ್ಗೆ ಅಡಿಟ್‌ ಸಹ ಆಗಿದೆ ಎಂದು ತಿಳಿಸಿದರು.

ಕೋವಿಡ್‌ 2ನೇ ಅಲೆಯಿಂದ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆಗೆ ತಂಡ ರಚಿಸಲಾಗಿದೆ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ಧರಿಸುವುದು ಮುಖ್ಯವಾಗಿದೆ. ಇದರ ಪಾಲನೆ ನಗರ ಸ್ಥಳೀಯ ಸಂಸ್ಥೆ ಮತ್ತು ತಾಲೂಕುಪಂಚಾಯಿತಿ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಲಾಗಿದೆ. ತಂಡಗಳು ಬಜಾರ್‌, ತರಕಾರಿಮಾರುಕಟ್ಟೆ, ಬಸ್‌ ನಿಲ್ದಾಣ ಹಾಗೂ ಅಂಗಡಿ ಮುಂಗ್ಗಟ್ಟುಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶದವರಿಗೆ 250 ರೂ. ಹಾಗೂಗ್ರಾಮೀಣ ಪ್ರದೇಶದವರಿಗೆ 100 ರೂ.ಗಳ ದಂಡ ವಿಧಿಸಲಿದ್ದಾರೆಂದು ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಲಸಿಕೆ ಹಾಕಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರುಕಡ್ಡಾಯವಾಗಿ ಕೊರೊನಾ ಲಸಿಕೆಹಾಕಿಸಿಕೊಳ್ಳಬೇಕು. ಅಲ್ಲದೇ 45 ರಿಂದ 59 ವರ್ಷದೊಳಗಿನವರಿಗೆ ಮಧುಮೇಹಮತ್ತು ರಕ್ತದ ಒತ್ತಡ ಇದ್ದವರು ಲಸಿಕೆ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಲಸಿಕೆ ಸಮಸ್ಯೆ ಇರುವದಿಲ್ಲ. ಬೇರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಬಗ್ಗೆ ಮಾಹಿತಿ ಇದ್ದಲ್ಲಿ ಸಹಾಯವಾಣಿ ಸಂಖೆ 1077ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದರು.

ಜಿಲ್ಲೆಯಲ್ಲಿ ಮಾ. 24 ರಂದು ಒಂದೇ ದಿನ 20 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 17ಪ್ರಕರಣಗಳು ಬಾಗಲಕೋಟೆಯ ಮಾರವಾಡಿ ಗಲ್ಲಿ ಹಾಗೂ ಸಿಮೆಂಟ್‌ ಕಾರ್ಖಾನೆ ಹತ್ತಿರ ಹಾಗೂ2 ಹುನಗುಂದ ಮತ್ತು 1 ಪ್ರಕರಣ ಮುಧೋಳದಲ್ಲಿ ಕಂಡುಬಂದಿರುತ್ತದೆ. ಕಳೆದ 7 ದಿನಗಳಲ್ಲಿ15290 ಮಾದರಿ ಪರೀಕ್ಷಿಸಲಾಗಿ ಅದರಲ್ಲಿ 50 ಕೋವಿಡ್ ಪ್ರಕರಣಗಳು ಕಂಡುಬಂದಿವೆ. 18 ಜನ ಮಾತ್ರ ಗುಣಮುಖರಾಗಿದ್ದು, ಯಾವುದೇ ಮರಣ ವರದಿಗಳು ಕಂಡುಬಂದಿರುವುದಿಲ್ಲ. ಫೆಬ್ರವರಿಯಲ್ಲಿ 18 ಹಾಗೂ ಮಾರ್ಚ್‌ನಲ್ಲಿ 81 ಕೋವಿಡ್ ಪ್ರಕರಣಗಳು ಕಂಡುಬಂದಿರುತ್ತದೆ ಎಂದು ತಿಳಿಸಿದರು.

ಮಹಾರಾಷ್ಟ್ರದಿಂದ ಆಗಮನ; ಮಾಹಿತಿ ಕೊಡಿ: ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ

ಸಾರ್ವಜನಿಕರಿಗೆ ನೆಗೆಟಿವ್‌ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಜರುಗಿಸಲಾಗುತ್ತಿದೆ. ಎನ್‌.ಡಬ್ಲೂ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೂ ಸಹ ಕೋವಿಡ್‌ಲಸಿಕೆ ಹಾಕಲಾಗುತ್ತಿದೆ. ಸಾರ್ವಜನಿಕರಿಗೆಕೋವಿಡ್‌ ಲಸಿಕೆ ನೀಡುವುದು ಹಾಗೂ ಕೋವಿಡ್‌ ಪರೀಕ್ಷೆಗೆ ಒಳಪಡಿಸುವ ಕುರಿತುಸರಕಾರ ನಿಗದಿಪಡಿಸಿದ ಗುರಿಯನ್ನು ತಲುಪಲುಕ್ರಮವಹಿಸಲಾಗಿದೆ. ಪ್ರಕರಣಗಳು ಹೆಚ್ಚಾದಲ್ಲಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲ ರೀತಿಯಿಂದಸಜ್ಜಾಗಿದೆ. ಅಲ್ಲದೇ ವಸತಿ ನಿಲಯಗಳನ್ನುಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್‌ ಪ್ರಕರಣಗಳು ಹೆಚ್ಚಾದ ಪ್ರದೇಶಗಳಲ್ಲಿ ಸರಕಾರ ಮಾರ್ಗಸೂಚಿಯಂತೆಕಂಟೈನ್‌ಮೆಂಟ್‌ ಜೋನ್‌ ರಚಿಸಿ ಸದರಿ ಪ್ರದೇಶದಮೇಲುಸ್ತುವಾರಿಯಾಗಿ ಇನ್ಸಿಡೆಂಟ್‌ ಕಮಾಂಡರ್‌ ಗಳನ್ನು ನೇಮಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಪಂ ಸಿಇಒ ಟಿ.ಭೂಬಾಲನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್‌. ದೇಸಾಯಿ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.