ಬೈಕ್ ಗೆ ಢಿಕ್ಕಿ ಹೊಡೆದ ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು: ಬೈಕ್ ಸವಾರ ಸಾವು
Team Udayavani, Jul 6, 2021, 10:43 AM IST
ಬಾಗಲಕೋಟೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಢಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು 58 ವರ್ಷದ ಕೂಡಲೆಪ್ಪ ಬೋಳಿ ಎಂದು ಗುರುತಿಸಲಾಗಿದೆ. ಹುನಗುಂದ ತಾಲ್ಲೂಕಿನ ಕೂಡಲಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ:ರೇಖಾ ಕದಿರೇಶ್ ಕೊಲೆ ಪ್ರಕರಣ: ಕೊಲೆ ಪ್ಲ್ಯಾನ್ ಮಾಡಿದ್ದ ಮತ್ತೊಬ್ಬ ಆರೋಪಿ ಸೆರೆ
“ಅಪಘಾತವಾದ ಕಾರಿನಲ್ಲಿ ನಾನು ಇರಲಿಲ್ಲ. ನಾನು ಸ್ನೇಹಿತನ ಕಾರಿನಲ್ಲಿ ಮುಂದೆ ತೆರಳುತ್ತಿದ್ದೆ. ಅಪಘಾತವಾಗಿರುವುದು ನಿಜ, ಸ್ಥಳದಲ್ಲಿ ಯಾರೂ ಇರಲಿಲ್ಲ. ಅಪಘಾತವಾದ ತಕ್ಷಣ ಆ್ಯಂಬುಲೆನ್ಸ್ ಗೆ ಕರೆ ಮಾಡಿ ಅವರನ್ನು ನಾನೇ ಆಸ್ಪತ್ರೆಗೆ ದಾಖಲಿಸಿದ್ದೆ. ದೇವರಾಣೆಗೂ ನಾನೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೆ. ಮಾನವೀಯತೆ ದೃಷ್ಟಿಯಿಂದ ಮೃತನ ಕುಟುಂಬಕ್ಕೆ ನಾನು ಸಹಾಯವನ್ನು ಮಾಡುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಸವದಿ ಹೇಳಿದ್ದಾರೆ.
ಮನೆ ದೇವರಾಣೆಗೂ ನಾನು ಯಾರಿಗೂ ಧಮ್ಕಿ ಹಾಕಿಲ್ಲ. ಆಕಸ್ಮಿಕವಾಗಿ ಕಾರಿಗೆ ಅಡ್ಡಬಂದಿದ್ದರಿಂದ ಅಪಘಾತವಾಗಿದೆ ಎಂದು ಚಿದಾನಂದ ಸವದಿ ಹೇಳಿಕೆ ನೀಡಿದ್ದಾರೆ.
ಸಂಬಂಧಿಕರ ಆಕ್ರೋಶ: ಸವದಿ ಪುತ್ರ ಚಿದಾನಂದ ಸುಳ್ಳು ಹೇಳಿತ್ತಿದ್ದಾರೆ. ಸಾಂತ್ವನ ಹೇಳುವ ಬದಲು ಅವರು ಸುಳ್ಳು ಹೇಳುತ್ತಿದ್ದಾರೆ. ರಕ್ಷಣೆ ಮಾಡಿರುವವರು ಪರಾರಿ ಆಗಿರುವುದು ಏಕೆ? ಪ್ರಕರಣವನ್ನು ಮುಚ್ಚಿಹಾಕುವ ಎಲ್ಲ ಪ್ರಯತ್ನ ನಡೆದಿದೆ ಎಂದು ಮೃತ ಕೂಡಲೆಪ್ಪ ಬೋಳಿ ಸಂಬಂಧಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.