27ರಿಂದ ನೀರು ಹರಿಸಲು ತೀರ್ಮಾನ
•ಆಗಸ್ಟ್ ಅಂತ್ಯದವರೆಗೂ ಎಲ್ಲ ಕಾಲುವೆಗಳಿಗೆ ನೀರು •ಸೆಪ್ಟೆಂಬರ್‌ನಲ್ಲಿ ಮತ್ತೆ ಸಭೆ
Team Udayavani, Jul 21, 2019, 10:38 AM IST
ಮುದ್ದೇಬಿಹಾಳ: ಬೆಂಗಳೂರಿನ ವಿಧಾನಸೌಧದ 313ನೇ ಕೊಠಡಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.
ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಆಲಮಟ್ಟಿ ಎಡದಂಡೆ, ಆಲಮಟ್ಟಿ ಬಲದಂಡೆ, ತಿಮ್ಮಾಪುರ ಏತ ನೀರಾವರಿ, ಚಿಮ್ಮಲಗಿ ಏತ ನೀರಾವರಿ ಹಾಗೂ ಮುಳವಾಡ ಏತ ನೀರಾವರಿ ಯೋಜನೆಗಳು ಸೇರಿದಂತೆ ವ್ಯಾಪ್ತಿ ಕಾಲುವೆಗಳಿಗೆ ಜು. 27ರ ಮಧ್ಯರಾತ್ರಿಯಿಂದ ಮತ್ತು ನಾರಾಯಣಪುರ ಬಸವಸಾಗರ ಜಲಾಶಯದಿಂದ ಜು. 21ರಿಂದ ಎಲ್ಲ ಕಾಲುವೆಗಳಿಗೆ ನೀರು ಬಿಡಲು ಐಸಿಸಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಶನಿವಾರ ಬೆಂಗಳೂರಿನ ವಿಧಾನಸೌಧದ 313ನೇ ಕೊಠಡಿಯಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅವಳಿ ಜಲಾಶಯಗಳ ನೀರಿನ ಲಭ್ಯತೆ ಗಮನಿಸಿ 2019ನೇ ಆಗಸ್ಟ್ ಅಂತ್ಯದವರೆಗೂ ನಿರಂತರವಾಗಿ ಎಲ್ಲ ಕಾಲುವೆಗಳಿಗೆ ನೀರು ಹರಿಸುವುದು ಮತ್ತು ಸೆಪ್ಟೆಂಬರ್ ಮೊದಲ ವಾರದಲ್ಲಿ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಗಮನಿಸಿ ಮತ್ತೂಮ್ಮೆ ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿ ಕಾಲುವೆಗಳ ದುರಸ್ತಿಯ ಕ್ಲೋಸರ್ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಹನುಮಾಪುರ ಜಾಕ್‌ವೆಲ್ ದುರಸ್ತಿ ಕೂಡಾ ಇನ್ನೂ ಮುಗಿದಿಲ್ಲ, ಇವುಗಳನ್ನು ಗಮನದಲ್ಲಿಟ್ಟುಕೊಂಡು ಜು. 27ರ ಮಧ್ಯರಾತ್ರಿಯಿಂದ ಆಗಸ್ಟ್‌ವರೆಗೆ ಯಾವುದೇ ವಾರಾಬಂದಿಯಿಲ್ಲದಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಒಳಹರಿವು ಸ್ಥಗಿತಗೊಂಡ ನಂತರ ಆಗಸ್ಟ್ ಕೊನೆ ವಾರದಲ್ಲಿ ಸಭೆ ಸೇರಿ ವಾರಾಬಂದಿ ಅವಧಿ ನಿಗದಿ ಪಡಿಸಲು ನಿರ್ಧರಿಸಿತು.
ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾಗುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಕ್ಷೀಣಿಸಿದೆ. ಜಲಾಶಯದ ಒಳಹರಿವು ಸ್ಥಗಿತಗೊಂಡ ನಂತರ ವಾರಾಬಂದಿ ಅಳವಡಿಸಿದಾಗ ಪ್ರತಿ ನೀರಾವರಿ ಯೋಜನೆಯ ಮೊದಲು ಟೇಲ್ ಎಂಡ್ ಭಾಗಕ್ಕೆ ನೀರು ಹರಿಸಿ, ನಂತರ ಹಂತ ಹಂತವಾಗಿ ಆ ಯೋಜನೆಯ ಎಲ್ಲ ಕಾಲುವೆಗೆ ನೀರು ಹರಿಸಲು ಐಸಿಸಿ ನಿರ್ಣಯಿಸಿತು. ಸಭೆಯಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಜೇವರ್ಗಿ ಶಾಸಕ ಅಜಯಸಿಂಗ್, ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ದೇವದುರ್ಗ ಶಾಸಕ ಶಿವನಗೌಡ ನಾಯಕ, ರಾಯಚೂರು ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಪಾಲ್ಗೊಂಡು ತಮ್ಮ ಭಾಗದ ನೀರಾವರಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.