ನಮ್ಮವರ ಒಳಸಂಚಿನಿಂದಲೇ ವಿಧಾನಸಭೆಯಲ್ಲಿ ಸೋಲು: ಸಿದ್ದು ಸವದಿ
ಲೋಕಸಭಾ ಚುನಾವಣೆಯಲ್ಲಿ 405ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿಗೆ ಬರಲಿವೆ
Team Udayavani, Mar 21, 2024, 4:25 PM IST
ಉದಯವಾಣಿ ಸಮಾಚಾರ
ಬೀಳಗಿ: ನಮ್ಮವರ ಒಳ ಸಂಚಿನಿಂದ ನಾವು ವಿಧಾನಸಭಾ ಚುನಾವಣೆಯಲ್ಲಿ ಸೋಲಬೇಕಾಯಿತೇ ಹೊರತು ಕಾಂಗ್ರೆಸ್‌ನಿಂದಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಣ್ಣಪುಟ್ಟ ಮನಸ್ತಾಪಗಳಿದ್ದರೆ ಅವುಗಳನ್ನು ಬದಿಗೊತ್ತಿ ದೇಶದ ಅಭಿವೃದ್ಧಿಗೋಸ್ಕರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಬಾಗಲಕೋಟೆ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿ ಮತ್ತು ಸುರಕ್ಷತೆ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ಮೂಲಕ ದೇಶ
ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಆದ್ದರಿಂದ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಗೆಲುವಿಗೆ ಶ್ರಮಿಸಬೇಕು ಎಂದರು.
ಸ್ವಾತಂತ್ರ್ಯ ನಂತರ ಕೇಂದ್ರದಲ್ಲಿ ಬಿಜೆಪಿ ಅಧಿ ಕಾರಕ್ಕೆ ಬಂದ ನಂತರ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ದೇಶ ವಿರೋಧಿ ಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ ಎಂದರು.
ಕಾಂಗ್ರೆಸ್‌ನವರ ಗ್ಯಾರಂಟಿ ಕೆಲವರಿಗೆ ಮುಟ್ಟಿದ್ದು, ಇನ್ನೂ ಕೆಲವರಿಗೆ ಮುಟ್ಟಿಲ್ಲ. ಮೋದಿ ಅವರೇ ದೇಶದ ಜನತೆಯ ಗ್ಯಾರಂಟಿಯಾಗಿದ್ದು, ದೇಶ ಮತ್ತು ದೇಶದ ಭವಿಷ್ಯಕ್ಕಾಗಿ ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗಬೇಕು. ಬೀಳಗಿ ಮತಕ್ಷೇತ್ರದಲ್ಲಿ 40 ಸಾವಿರ ಮತ ಲೀಡ್ ಬರುವಂತೆ ಕಾರ್ಯಕರ್ತರು ತಮ್ಮ ಬೂತ್ ಮಟ್ಟದಲ್ಲಿ ಶ್ರಮಿಸಬೇಕು ಎಂದರು.
ಲೋಕಸಭಾ ಚುನಾವಣೆಯಲ್ಲಿ 405ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿಗೆ ಬರಲಿವೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ. ಬಾಗಲಕೋಟೆ ಮತಕ್ಷೇತ್ರದ ಜನರ ಮೇಲಿನ ಪ್ರೀತಿ, ವಿಶ್ವಾಸದಿಂದ ಮತ್ತೂಮ್ಮೆ ಪಿ.ಸಿ. ಗದ್ದಿಗೌಡರ ಅವರಿಗೆ ಟಿಕೆಟ್ ನೀಡಿದ್ದಾರೆ ಎಂದ ಅವರು, ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಮತ್ತೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದರು.
ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಲಿಂಗರಾಜ ಪಾಟೀಲ, ಸಂಸದ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ| ಮುರುಗೇಶ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪಿ.ಎಚ್. ಪೂಜಾರ, ಬಿಜೆಪಿ ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ, ಅಶೋಕ ಲಿಂಬಾವಳಿ, ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮೋಹನ ಜಾಧವ, ಎಂ.ಎಂ. ಶಂಭೋಜಿ, ಮಲ್ಲಿಕಾರ್ಜುನ ಅಂಗಡಿ, ಕೆ.ವಿ. ಪಾಟೀಲ, ಭರತ ಬಾರಕೇರ, ಹೂವಪ್ಪ ರಾಠೊಡ, ಹೊಳೆಬಸು ಬಾಳಶೆಟ್ಟಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.