ಸಾರ್ವಜನಿಕರಿಗೆ ಸೌಲಭ್ಯ ತಲುಪಿಸಿ


Team Udayavani, Nov 26, 2019, 2:08 PM IST

bk-tdy-2

ಮುಧೋಳ: ಸರ್ಕಾರ ಸಾರ್ವಜನಿಕರಿಗೆ ಸ್ವಂತ ಸೂರು ನಿರ್ಮಿಸಿಕೊಳ್ಳಲು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಹೆಚ್ಚು ಜನರಿಗೆ ಸೌಲಭ್ಯ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ನಗರಸಭೆ ಪೌರಾಯುಕ್ತ ಸುನೀಲ ಪಾಟೀಲ ಹೇಳಿದರು.

ನಗರಸಭೆ ಕಚೇರಿಯಲ್ಲಿ ಸೋಮವಾರ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 2022ರೊಳಗೆ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ ಜಾರಿಗೆ ತಂದಿದ್ದು, ನಗರಸಭೆ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿನ ಅರ್ಹರಿಗೆ ಯೋಜನೆಯ ಲಾಭ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಕ್ರೆಡಿಟ್‌ ಲಿಂಕ್‌ ಸಬ್ಸಿಡಿ ಸ್ಕೀಮ್‌ನಡಿ ಪ್ರತಿಯೊಬ್ಬರೂ ತಾವು ನಿರ್ಮಿಸಿಕೊಳ್ಳುವ ಮನೆಗೆ ಬ್ಯಾಂಕ್‌ನಿಂದ ಸಾಲ ಸೌಲಭ್ಯ ಹಾಗೂ ಬ್ಯಾಂಕ್‌ ಬಡ್ಡಿ ದರಕ್ಕೆ ಸಬ್ಸಿಡಿ ನೀಡಲಾಗುವುದು. ಸ್ವಂತವಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು 1.50 ಲಕ್ಷ ಸಹಾಯಧನ ನೀಡಲಾಗುವುದು ಎಂದು ಹೇಳಿದರು.

ನಗರಸಭೆ ಸದಸ್ಯ ಗುರುಪಾದ ಕುಳಲಿ ಮಾತನಾಡಿ, ಮನೆ ನಿರ್ಮಿಸಿಕೊಳ್ಳಲು ಸರ್ಕಾರ ನೆರವು ನೀಡುತ್ತದೆ. ಆದರೆ ಬ್ಯಾಂಕ್‌ನವರು ಸಾಲ ಸೌಲಭ್ಯ ನೀಡಲು ಹಿಂದೇಟು ಹಾಕುತ್ತಾರೆ. ಅಲ್ಲದೆ ಈ ಮೊದಲು ಸಾರ್ವಜನಿಕರು ಮನೆಗಾಗಿ ಅರ್ಜಿ ಸಲ್ಲಿಸಿದ್ದು, ಇದುವರೆಗೂ ಫಲಾನುಭವಿಗಳ ಆಯ್ಕೆಯಾಗಿಲ್ಲ ಎಂದರು.

ಈ ವೇಳೆ ಮಾತನಾಡಿದ ಪೌರಾಯುಕ್ತ ಪಾಟೀಲ, ಈ ಬಗ್ಗೆ ಮುಂದಿನ ದಿನಗಳಲ್ಲಿ ಬ್ಯಾಂಕ್‌ ಸಿಬ್ಬಂದಿಯೊಂದಿಗೆ ಸಭೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು. ಈ ಹಿಂದೆ ಸಾರ್ವಜನಿಕರು ಮನೆಗಾಗಿ ಅರ್ಜಿ ಸಲ್ಲಿಸಿದ್ದು, ಮುಂದಿನ ತಿಂಗಳು ಫಲಾನುಭವಿಗಳ ಪಟ್ಟಿ ತಯಾರಾಗುವ ನಿರೀಕ್ಷೆ ಇದೆ ಎಂದು ಹೇಳಿದರು. ನಗರಸಭೆ ಸದಸ್ಯ ಡಾ| ಸತೀಶ ಮಲಘಾಣ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರ ಬ್ಯಾಂಕ್‌ ಅಧಿಕಾರಿಗಳ ಸಭೆ ಕರೆಯಬೇಕು. ನಗರದ ಸೌಂದರ್ಯಕ್ಕೆ ಧಕ್ಕೆ ತರುವ ಅನಧಿಕೃತ ಜಾಹೀರಾತುಗಳನ್ನು ಅಂಟಿಸದಂತೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಶೌಚಾಲಯಗಳ ಸಮಸ್ಯೆಯಾಗುತ್ತಿದ್ದು, ಅವುಗಳ ಸೂಕ್ತ ನಿರ್ವಹಣೆ ಹಾಗೂ ಹೈಟೆಕ್‌ ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಬೇಕು. ಮುಂದಿನ ವರ್ಷ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರೆ ನಡೆಯಲಿದ್ದು, ಜಾತ್ರೆಯಲ್ಲಿ ತೊಂದರೆ ಉಂಟಾಗದಂತೆ ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಬೇಕು ಎಂದು ಸದಸ್ಯರು ಒಕ್ಕೊರಲಿನಿಂದ ಆಭಿಪ್ರಾಯ ವ್ಯಕ್ತಪಡಿಸಿದರು.

ಶೀಘ್ರದಲ್ಲಿ ಸಭೆ: ಸಾರ್ವಜನಿಕರಲ್ಲಿ ಪ್ಲಾಸ್ಟಿಕ್‌ ನಿಷೇಧದ ಕುರಿತು ಜಾಗೃತಿ ಮೂಡಿಸಲು ಶೀಘ್ರದಲ್ಲಿ ಸಾರ್ವಜನಿಕರ ಹಾಗೂ ಸದಸ್ಯರ ಸಭೆ ಕರೆಯಲಾಗುವುದು. ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಸದಸ್ಯರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು. ನಗರಸಭೆ ಸದಸ್ಯರಾದ ವಿನೋದ ಕಲಾಲ, ಅಲ್ಲಾಭಕ್ಷ ಕೊಣ್ಣೂರ, ಹನಮಂತ ತೇಲಿ, ಯೂಸೂಪ್‌ ಜಮಾದಾರ, ಕಚೇರಿ ವ್ಯವಸ್ಥಾಪಕಿ ಭಾರತಿ ಜೋಶಿ ಇತರರಿದ್ದರು.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.