Rabkavi Banhatti: ಖಾಲಿಯಾಗುತ್ತಿರುವ ಹಿಪ್ಪರಗಿ ಜಲಾಶಯ; ಇನ್ನೆರಡು ವಾರ ಮಾತ್ರ ನೀರು
Team Udayavani, Apr 2, 2024, 7:56 PM IST
ರಬಕವಿ-ಬನಹಟ್ಟಿ: ಬೆಳಗಾವಿ, ವಿಜಯಪುರ ಹಾಗು ಬಾಗಲಕೋಟೆ ಜಿಲ್ಲೆಗಳ ಸಂಜೀವನಿಯಾಗಿರುವ ಹಿಪ್ಪರಗಿ ಜಲಾಶಯ ಸಂಪೂರ್ಣ ಬತ್ತಿ ಹೋಗುವ ಲಕ್ಷಣಗಳ ಗೋಚರಿಸುತ್ತಿದ್ದು, ಜನತೆಗೆ ನೀರಿನ ಹಾಹಾಕಾರ ಎದುರಾಗಲಿದೆ.
6 ಟಿಎಂಸಿ ಸಾಮರ್ಥ್ಯ ಹೊಂದಿರುವ ಹಿಪ್ಪರಗಿ ಜಲಾಶಯದಲ್ಲಿ ಕೇವಲ 0.7 ಟಿಎಂಸಿಯಷ್ಟು ಮಾತ್ರ ನೀರು ಇದೆ. ಜಲಾಶಯದಿಂದ ದಿನಂಪ್ರತಿ 0.07 ಟಿಎಂಸಿಯಷ್ಟು ನೀರು ಖಾಲಿಯಾಗುತ್ತಿದೆ. ಇತ್ತ ಜನರ ನಿತ್ಯದ ಬಳಕೆ, ಮತ್ತೊಂದೆಡೆ ಬಿರುಬಿಸಿಲಿನ ತಾಪಕ್ಕೆ ನೀರು ತೀವ್ರ ಕಡಿಮೆಯಾಗುತ್ತಿದೆ. ಜಲಾಶಯದ ಹಿಂಬಾಗದಲ್ಲಿ ಮಾತ್ರ ನೀರು ಇದ್ದು, ಮುಂಭಾಗ ಸಂಪೂರ್ಣವಾಗಿ ಖಾಲಿಯಾಗಿದೆ. ಇದ್ದರಿಂದ ಮುಂದಿನ ಭಾಗದ ಜನತೆ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.
ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಮಹಿಷವಾಡಗಿ ಬ್ಯಾರೇಜ್ ಕಾಣುತ್ತಿದ್ದು, ಹಲವಾರು ತಿಂಗಳಿಂದ ನೀರಲ್ಲಿ ಮುಳಗಿದ್ದ ಬ್ಯಾರೇಜ್ ಕೆಲವು ದಿನಗಳಿಂದ ಕಾಣುತ್ತಿದ್ದು, ಅಲ್ಲದೇ ನೀರಿನ ಮಟ್ಟ ಕೆಲ ದಿನಗಳಲ್ಲಿ ದಿಢೀರ್ ಆಗಿ ಭಾರಿ ಕುಸಿತ ಕಂಡ ಹಿನ್ನಲೆಯಲ್ಲಿ ಜನರಿಗೆ ಬೇಸಿಗೆಯ ಆತಂಕ ಶುರುವಾಗಿದೆ. ಇದೇ ರೀತಿ ಪ್ರತಿ ದಿನ ಖಾಲಿಯಾದರೆ ಏಪ್ರಿಲ್ ಎರಡನೇ ವಾರದಲ್ಲಿ ನೀರು ಖಾಲಿಯಾಗಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ ಬ್ಯಾರೇಜ್‌ನ ಗೇಟ್‌ಗಳು ಕಾಣುತ್ತಿದ್ದು ರಸ್ತೆ ಸಂಚಾರ ಪ್ರಾರಂಭವಾಗಿದೆ.
ಕೃಷ್ಣಾ ನದಿ ನೀರು ಏಪ್ರಿಲ್ 15ರವರೆಗೆ ಬರಬಹುದು. ಆದರೂ ಮುಂಜಾಗೃತ ಕ್ರಮವಾಗಿ ನಗರಸಭೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಾರಣ ಸಾರ್ವಜನಿಕರು ನೀರನ್ನು ಮಿತವ್ಯಯವಾಗಿ ಬಳಕೆ ಮಾಡಬೇಕು. ಕೃಷ್ಣಾ ನದಿಯಲ್ಲಿ ನೀರು ನಿಂತ ನೀರಾಗಿರುವುದರಿಂದ ಸಾರ್ವಜನಿಕರು ಆರೋಗ್ಯದ ದೃಷ್ಠಿಯಿಂದ ನೀರನ್ನು ಸೋಸಿ ಕಾಯಿಸಿ ಆರಿಸಿ ನೀರನ್ನು ಕುಡಿಯಬೇಕು.- ಜಗದೀಶ ಈಟಿ, ಪೌರಾಯುಕ್ತರು, ನಗರಸಭೆ ರಬಕವಿ-ಬನಹಟ್ಟಿ
ಹಿಪ್ಪರಗಿ ಜಲಾಶಯದಲ್ಲಿ ನೀರಿನ ಸಾಂಧ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇನ್ನೆರಡು ವಾರ ಮಾತ್ರ ನೀರು ದೊರಕಬಹುದು. ನೀರನ್ನು ಕಾಳಜಿಪೂರ್ವಕ ಬಳಕೆ ನಾಗರಿಕರದ್ದಾಗಬೇಕು. -ವಿ.ಎಸ್. ನಾಯಕ, ಸಹಾಯಕ ಅಭಿಯಂತರ, ಹಿಪ್ಪರಗಿ ಜಲಾಶಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.