ಸಹಕಾರಿ ಸಂಘಗಳಿಂದ ಅಭಿವೃದ್ಧಿ
•ಸಹಕಾರಿ ಕ್ಷೇತ್ರ ಬೆಳೆದಷ್ಟು ಒಳ್ಳೆಯದು: ಶಾಸಕ ಕಾರಜೋಳ
Team Udayavani, Jul 1, 2019, 12:50 PM IST
ಮುಧೋಳ: ನಗರದಲ್ಲಿ ಹಮ್ಮಿಕೊಂಡಿದ್ದ ಮುಧೋಳ ಕಬ್ಬು ಬೆಳೆಗಾರರ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ಅರಳಿಕಟ್ಟಿ ಫೌಂಡೇಶನ್ ಪ್ರಾರಂಭೋತ್ಸವ ಸಮಾರಂಭವನ್ನು ಶಾಸಕ ಗೋವಿಂದ ಕಾರಜೋಳ ಉದ್ಘಾಟಿಸಿದರು.
ಮುಧೋಳ: ಸಹಕಾರಿ ಕ್ಷೇತ್ರಗಳು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವುದರಿಂದ ಪರಸ್ಪರರಲ್ಲಿ ಸಹಾಯ, ಸಹಕಾರ, ನಂಬಿಕೆ, ಸಂಪರ್ಕ, ಸಂಬಂಧ ಹಾಗೂ ವ್ಯವಹಾರಗಳು ಹೆಚ್ಚುತ್ತವೆ ಎಂದು ಶಾಸಕ ಗೋವಿಂದ ಕಾರಜೋಳ ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಹಮ್ಮಿಕೊಂಡಿದ್ದ ಮುಧೋಳ ಕಬ್ಬು ಬೆಳೆಗಾರರ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ಅರಳಿಕಟ್ಟಿ ಫೌಂಡೇಶನ್ ಅವಳಿ ಸಂಸ್ಥೆಗಳ ಪ್ರಾರಂಭೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತರ ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರವನ್ನು ಹುಟ್ಟುಹಾಕಿದ ಕೀರ್ತಿ ಧಾರವಾಡ ಜಿಲ್ಲೆಯ ಕಣಗಿಹಾಳದ ಸಿದ್ದನಗೌಡ ಪಾಟೀಲ ಅವರಿಗೆ ಸಲ್ಲುತ್ತದೆ. ದೇಶದಲ್ಲಿ ಪ್ರಥಮ ಬಾರಿಗೆ ಸಾಲ ಮತ್ತು ಬಡ್ಡಿ ಮನ್ನಾ ಮಾಡಿರುವ ಕೀರ್ತಿ ಮಾಜಿ ಮುಖ್ಯಮಂತ್ರಿ ದಿ| ರಾಮಕೃಷ್ಣ ಹೆಗಡೆ ಅವರಿಗೆ ಸಲ್ಲುತ್ತದೆ ಎಂದರು.
ಸಹಕಾರಿ ಕ್ಷೇತ್ರದಲ್ಲಿ ಪಡೆದ ಸಾಲಕ್ಕೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶೂನ್ಯ ಹಾಗೂ ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಜಾರಿಗೆ ತರುವ ಮೂಲಕ ರೈತರಿಗೆ ಆರ್ಥಿಕ ಸಹಾಯ ನೀಡಿದೆ ಎಂದರು.
ಬೀಳಗಿ ಶಾಸಕ ಮುರುಗೇಶ ನಿರಾಣಿ ಮಾತನಾಡಿ, ಅನೇಕ ಸಹಕಾರಿ ಸಂಸ್ಥೆಗಳು ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದಲ್ಲಿ ನೂರಾರು ಶಾಖೆ ಆರಂಭಿಸಿ ಸಾವಿರಾರು ಕೋಟಿ ಹಣ ಠೇವಣಿ ಸಂಗ್ರಹಿಸಿವೆ. ಇದರಿಂದ ಜನಸಾಮಾನ್ಯರಿಗೆ ಸರಳವಾಗಿ ಸಾಲ ಹಾಗೂ ಆರ್ಥಿಕ ಭದ್ರತೆ ದೊರೆತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಸಿ.ವಿ. ಲೋಕೇಶಗೌಡ್ರ ಮಾತನಾಡಿದರು. ರನ್ನ ಶುಗರ್ಸ್ ಮಾಜಿ ಅಧ್ಯಕ್ಷ ಲಕ್ಷ್ಮಣ ತಳೇವಾಡ ಅಧ್ಯಕ್ಷತೆ ವಹಿಸಿದ್ದರು. ತಿಮ್ಮಣ್ಣ ಅರಳಿಕಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಬಾಜಂಬಗಿ ಹಿರೇಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಯುವ ಉದ್ಯಮಿ ಸತೀಶ ಬಂಡಿವಡ್ಡರ, ವೀರಶೈವ ಸಮಾಜದ ಅಧ್ಯಕ್ಷ ರಾಚಪ್ಪಣ್ಣ ಕರೆಹೊನ್ನ, ಕಬ್ಬು ಬೆಳೆಗಾರರ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಗಿರೀಶಗೌಡ ಪಾಂ.ಪಾಟೀಲ,ಉಪಾಧ್ಯಕ್ಷ ಅನಂತರಾವ್ ಘೋರ್ಪಡೆ, ಅರಳಿಕಟ್ಟಿ ಫೌಂಡೇಶನ್ ಅಧ್ಯಕ್ಷೆ ಸವಿತಾ ತಿಮ್ಮಣ್ಣ ಅರಳಿಕಟ್ಟಿ, ಉಪಾಧ್ಯಕ್ಷೆ ರಾಜೇಶ್ವರಿ ಕೋಮಾರ ಉಪಸ್ಥಿತರಿದ್ದರು. ಕುಳಲಿ ಪಿಕೆಪಿಎಸ್ ಕಾರ್ಯದರ್ಶಿ ನಿಂಗರಾಜ ಗುಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.