ಆರೋಗ್ಯದಿಂದ ದೇಶದ ಅಭಿವೃದ್ದಿ: ಗದ್ದಿ ಗೌಡರ
ತಾಲೂಕು ಮಟ್ಟದ ಆರೋಗ್ಯ ಮೇಳಕ್ಕೆ ಚಾಲನೆ
Team Udayavani, Apr 19, 2022, 4:02 PM IST
ಬಾಗಲಕೋಟೆ: ಉತ್ತಮ ಸದೃಢ, ಆರೋಗ್ಯವಂತ ಸಮಾಜ ನಿರ್ಮಾಣವಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವೆಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರದ 4ನೇ ವಾರ್ಷಿಕೋತ್ಸವದ ಅಂಗವಾಗಿ ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕದಡಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯ ಸೇವಾ ಕ್ಷೇತ್ರದಲ್ಲಿ ಆಹಾರ ಪದಾರ್ಥ, ಕಲುಷಿತ ವಾತಾವರಣ, ರೋಗ ರುಜಿನಗಳಿಗೆ ತುತ್ತಾಗಿ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಲು ವೈದ್ಯರು ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕಿದೆ. ಆರೋಗ್ಯ ಸೇವೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳು ನೇರವಾಗಿ ಜನರಿಗೆ ಮುಟ್ಟಿಸುವ ಕಾರ್ಯವಾಗಬೇಕು. ದೇಶ ಕೋವಿಡ್ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿರ್ವಹಿಸಿದೆ ಎಂದರು.
ಕೇಂದ್ರ ಸರಕಾರ ಸ್ವಚ್ಛ ಭಾರತದಿಂದ ಹಿಡಿದು ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಜನಔಷಧಿ ಕೇಂದ್ರ, ಆಯುಷ್ ಇಲಾಖೆ ಬಳಕೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ದೇಶದ ಎಲ್ಲ ಜನರಿಗೆ ಕೋವಿಡ್ ಲಸಿಕೆ ಒದಗಿಸುವ ಕಾರ್ಯ ಮಾಡಿದ್ದಾರೆ. ಅಲ್ಲದೇ ಬೇರೆ ದೇಶಕ್ಕೂ ಸಹ ಲಸಿಕೆ ನೀಡಿದ್ದಾರೆ. ಆರೋಗ್ಯ ಉಚಿತ ಸೇವೆಯನ್ನು ಈ ಶಿಬಿರದ ಮೂಲಕ ಪಡೆದುಕೊಳ್ಳಬಹುದಾಗಿದೆ. ಮೇಳದಲ್ಲಿ ತಜ್ಞವೈದ್ಯರಿಂದ ಉಚಿತ ತಪಾಸಣೆ, ಔಷಧಗಳ ವಿತರಣೆ ಸಹ ಮಾಡಲಾಗುತ್ತಿದೆ. ಆಯುಷ್ಮಾನ ಕಾರ್ಡ್‌ಗೆ ನೋಂದಣಿ, ಆರೋಗ್ಯ ಸೇವೆಯ ಮಾಹಿತಿಯುಳ್ಳ ಡಿಜಿಟಲ್ ಕಾರ್ಡ್ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಶಾಸಕ ಡಾ| ವೀರಣ್ಣ ಚರಂತಿಮಠ ಮಾತನಾಡಿ, ಆರೋಗ್ಯ ಮೇಳದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ನುರಿತ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಔಷದೋಪಚಾರ ಕಾರ್ಯ ನಡೆಯಲಿದೆ. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ ಪಡೆದುಕೊಂಡಲ್ಲಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆ ಪಡೆಯಬಹುದಾಗಿದೆ. ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ಸಹ ನೀಡಲಾಗುತ್ತಿದೆ. ಅಲ್ಲದೇ ಮನೆಯಲ್ಲಿಯೇ ಇದ್ದು ಇ-ಸಂಜೀವಿನಿ ಮೊಬೈಲ್ ಆಪ್ ಮೂಲಕ ಆರೋಗ್ಯದ ಸಲಹೆಗಳನ್ನು ಸಹ ಪಡೆದುಕೊಳ್ಳಬಹುದಾಗಿದೆ. ಹಲವಾರು ಉಚಿತ ಆರೋಗ್ಯ ಸೇವೆಗಳು ಇದ್ದು ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಮಾತನಾಡಿ, ಚೀನಾದ ಕೋವಿಡ್ ಕೇರ್ ಸೆಂಟರ್ ನಲ್ಲಿ ಆಹಾರಕ್ಕಾಗಿ ಪರಿತಪಿಸುತ್ತಿರುವುದನ್ನು ವಿವಿಧ ಮಾಧ್ಯಮದ ಮೂಲಕ ನೋಡಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಆಹಾರದ ಸಮಸ್ಯೆಯಾಗದಂತೆ ನೋಡಿವೆ. ಉಚಿತವಾಗಿ ಪಡಿತರ ಸಹ ವಿತರಿಸಲಾಗುತ್ತಿದೆ. ಉಚಿತ ಆರೋಗ್ಯ ಸೇವೆ ನೀಡುವ ಎಬಿಆರ್‌ಕೆ ಕಾರ್ಡ್ ಗಳನ್ನು ಗ್ರಾಮ-1 ಕೇಂದ್ರಗಳಲ್ಲಿ ಸಹ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|ಜಯಶ್ರೀ ಎಮ್ಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪ್ರಕಾಶ ಬಿರಾದಾರ, ಜಿಲ್ಲಾ ಆಯುಷ್ ಅಧಿ ಕಾರಿ ಅಕ್ಕಮಹಾದೇವಿ ಗಾಣಿಗೇರ, ಜಿಲ್ಲಾ ಸರ್ವೇಕ್ಷಣಾ ಕಾರಿ ಡಾ|ವಿಜಯ ಕಂಠಿ, ಜಿಲ್ಲಾ ಕುಟುಂಬ ಕಲ್ಯಾಣಾ ಧಿಕಾರಿ ಡಾ|ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಬಿ.ಜಿ. ಹುಬ್ಬಳ್ಳಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಎಸ್.ಸಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ವಿವಿಧ ಆರೋಗ್ಯ ಸೇವೆ ಮಳಿಗೆ ಉದ್ಘಾಟನೆ:
ಕಾರ್ಯಕ್ರಮದ ಪೂರ್ವದಲ್ಲಿ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸುವ ಕ್ಷಯರೋಗ ತಪಾಸಣೆ, ಆಹಾರ ಕಲಬರಕೆ ಮಾಹಿತಿ ಕೇಂದ್ರ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಆರೋಗ್ಯ ಶಿಕ್ಷಣ, ಬಿಪಿ-ಶುಗರ್ ತಪಾಸಣೆ, ಆಯುಷ ಸೇವಾ ಕೇಂದ್ರ, ರಾಷ್ಟ್ರೀಯ ತಂಬಾಕು ನಿಯಂತ್ರಣ, ಐಡಿಎಸ್‌ಪಿ ಕೇಂದ್ರ ಹಾಗೂ ಔಷಧ ವಿತರಣೆ ಮಳಿಗೆಗಳನ್ನು ಸಂಸದ ಪಿ.ಸಿ.ಗದ್ದಿಗೌಡರ ಮತ್ತು ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.