ಅನುದಾನ ಸದ್ಭಳಕೆಯಾದರೆ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ; ಶಾಸಕ ಸಿದ್ದು ಸವದಿ
Team Udayavani, Nov 8, 2022, 6:54 PM IST
ರಬಕವಿ-ಬನಹಟ್ಟಿ: ಗ್ರಾಮ ಪಂಚಾಯತ್ ಅನುದಾನ ಸದ್ಭಳಕೆಯಾದರೆ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಮಂಗಳವಾರ ಸ್ಥಳೀಯ ನಗರಸಭೆಯ ಕಾರ್ಯಾಲಯದಲ್ಲಿ ರಬಕವಿ ಬನಹಟ್ಟಿ ತಾಲೂಕು ಪಂಚಾಯತ್ ಆಶ್ರಯದಲ್ಲಿ ದೂರದೃಷ್ಠಿ ಯೋಜನೆಗೆ ಸಂಬಧಪಟ್ಟಂತೆ ಹೆಚ್ಚುವರಿ ಮಾರ್ಗಸೂಚಿಗಳ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಅನುದಾನಗಳನ್ನು ನೀಡಿದರೂ ನಮ್ಮ ಭಾಗದ ಗ್ರಾಮಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎಂದರು.
ಶೌಚಾಲಯ, ರಸ್ತೆ, ಆಸ್ತಿ ನಿರ್ವಹಣೆ ಅಭಿವೃದ್ಧಿ ಮತ್ತು ಕಸ ಸಂಗ್ರಹಣೆಗಾಗಿ ಸಾಕಷ್ಟು ವಾಹನಗಳನ್ನು ನೀಡಿದರೂ ಕಸ ಸಂಗ್ರಹಣೆ ಸರಿಯಾಗಿ ಆಗುತ್ತಿಲ್ಲ. ಈ ಕುರಿತು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಐದು ವರ್ಷಗಳ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವಾಗ ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅನುರಾಧ ಹಾದಿಮನಿ, ಉದ್ಯೋಗ ಖಾತ್ರಿ ಯೋಜನೆಯ ಅಧಿಕಾರಿಗಳಾದ ಬಸಲಿಂಗಪ್ಪ ನಾವಲಗಿ ಮತ್ತು ಬಸವರಾಜ ಮುನ್ನೊಳ್ಳಿ ಇದ್ದರು.
ಶಂಕರ ಹುನ್ನೂರ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ರಬಕವಿ ಬನಹಟ್ಟಿ ತಾಲೂಕಿನ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.