ದೂರವಾಣಿ ಆಪ್ತ ಸಲಹಾ ಕೇಂದ್ರಕ್ಕೆ ಚಾಲನೆ
ಕೌಟುಂಬಿಕ ದೌರ್ಜನ್ಯ ತಡೆಗೆ ಆರಂಭಸಾಂತ್ವನ ಸಹಾಯವಾಣಿ ಭಿತ್ತಿಪತ್ರ ಬಿಡುಗಡೆ
Team Udayavani, Apr 9, 2020, 12:12 PM IST
ಧಾರವಾಡ: ಅಸಂಘಟಿತ ವಲಯದ ಕಾರ್ಮಿಕರಿಗೆ ಸಚಿವ ಜಗದೀಶ ಶೆಟ್ಟರ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿದರು.
ಧಾರವಾಡ: ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಯಾವುದಾದರೂ ಕುಟುಂಬದಲ್ಲಿ ಕೌಟುಂಬಿಕ ದೌರ್ಜನ್ಯಗಳು ನಡೆದರೆ ಉಚಿತ ಸಹಾಯವಾಣಿ ಮತ್ತು ದೂರವಾಣಿ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಲು ರಾಜ್ಯದಲ್ಲೇ ಮೊದಲ ಬಾರಿಗೆ ಆರಂಭವಾಗಿರುವ ದೂರವಾಣಿ ಆಪ್ತ ಸಲಹಾ ಕೇಂದ್ರಕ್ಕೆ ಬುಧವಾರ ಚಾಲನೆ ದೊರೆಯಿತು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಕೌಟುಂಬಿಕ ದೌರ್ಜನ್ಯ ತಡೆಗೆ ಆರಂಭಿಸಿರುವ ಸಾಂತ್ವನ ಸಹಾಯವಾಣಿಯ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಿರ್ವಹಣೆಗೊಳ್ಳುತ್ತಿರುವ ಮಹಿಳಾ ಸಹಾಯವಾಣಿ ಸಂಖ್ಯೆ 181, ದೂರವಾಣಿ ಸಂಖ್ಯೆ: 0836-2445484, 0836-2747353 ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಸ್ಯಾನಿಟೈಸರ್,ಮಾಸ್ಕ್ ವಿತರಣೆ: ಕರ್ನಾಟಕ ಸಕಾರದ ಕಾರ್ಮಿಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೂಲಕ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರಿಗೆ 7.5 ಲಕ್ಷ ರೂ. ವೆಚ್ಚದ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.
ಅಸಂಘಟಿತ ವಲಯದ ಕಾರ್ಮಿಕ ಸಂಘದ ಅಧ್ಯಕ್ಷ ದುರುಗಪ್ಪ ಚಿಕ್ಕತುಂಬಳ, ಸುರೇಶ ನಾಡಿಗೇರ ಮತ್ತಿತರರಿಗೆ ಸಚಿವರು ನಗರದ ಡಿಸಿ ಕಚೇರಿ
ಆವರಣದಲ್ಲಿ ಸಾಂಕೇತಿಕವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಸಿ.ಎಂ.ನಿಂಬಣ್ಣವರ, ಶಂಕರ ಪಾಟೀಲ ಮುನೇನಕೊಪ್ಪ,ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ, ಡಿಸಿ ದೀಪಾ ಚೋಳನ್, ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.