ಪರಿಹಾರ ಕೇಂದ್ರದಿಂದ ಸಂತ್ರಸ್ತರ ಒಕ್ಕಲೆಬ್ಬಿಸಬೇಡಿ

Team Udayavani, Aug 30, 2019, 10:31 AM IST

bk-tdy-3

ಬಾಗಲಕೋಟೆ: ಸಂತ್ರಸ್ತರನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಮಾತನಾಡಿದರು.

ಬಾಗಲಕೋಟೆ: ಜಮಖಂಡಿ ತಾಲೂಕಿನ ತಮದಡ್ಡಿಯ ಸಂತ್ರಸ್ತರು, ನಮಗೆ ನೆಲೆ ಕಲ್ಪಿಸಿ ಎಂದು ಡಿಸಿ ಕಚೇರಿ ಎದುರು ಧರಣಿ ನಡೆಸಿದರು.

ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ನಮ್ಮನ್ನು, ಹೊರ ಹಾಕುತ್ತಿದ್ದು, ನಾವು ಎಲ್ಲಿಗೆ ಹೋಗಬೇಕು ಎಂದು ಡಿಸಿ ಎದುರು ಗೋಳಿಟ್ಟರು. ಡಿಎಸ್‌ಎಸ್‌ ನೇತೃತ್ವದಲ್ಲಿ ಜಿಲ್ಲೆಯ ಜಮಖಂಡಿ, ತೇರದಾಳ, ರಬಕವಿ-ಬನಹಟ್ಟಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ತಂತ್ರಸ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ತಮಗೆ ಶಾಶ್ವತ ಮನೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕಳೆದ ವಾರ ಕೃಷ್ಣೆಯ ಪ್ರವಾಹಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಸಂತ್ರಸ್ತರು, ಇದೀಗ ಶಾಶ್ವತ ನೆಲೆಗಾಗಿ ಬೀದಿಗಿಳಿಯುವ ಅನಿವಾರ್ಯತೆ ಎದುರಾಗಿದೆ.

ಕೃಷ್ಣಾ ನದಿ ಪ್ರವಾಹದಿಂದ ಮನೆ, ಭೂಮಿ, ಮನೆಯಲ್ಲಿನ ದಿನ ಬಳಕೆ ಸಾಮಗ್ರಿ ಎಲ್ಲವೂ ಕಳೆದುಕೊಂಡು ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದ ದಯನೀಯ ಸ್ಥಿತಿಯಲ್ಲಿ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ಸಂತ್ರಸ್ತರು ಇದೀಗ ಸಂಪೂರ್ಣ ಬೀದಿಗೆ ಬೀಳುವ ಆತಂಕ ಎದುರಾಗಿದೆ. ಶಾಲೆಗಳಲ್ಲಿ ತೆರೆಯಲಾದ ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರು ಆಸರೆ ಪಡೆದಿದ್ದು, ಅಧಿಕಾರಿಗಳು ಪರಿಹಾರ ಕೇಂದ್ರದಿಂದ ಹೊರಹೋಗಲು ಸೂಚಿಸುತ್ತಿದ್ದಾರೆ. ಮನೆಗಳು ಬಿದ್ದು, ಇರಲು ವ್ಯವಸ್ಥೆ ಇಲ್ಲ. ಇತ್ತ ಪರಿಹಾರ ಕೇಂದ್ರದಿಂದ ಹೊರ ಹೋಗು ಎಂದರೆ ಎಲ್ಲಿಗೆ ಹೋಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂತ್ರಸ್ತರ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌, ಶಾಲೆಗಳಲ್ಲಿ ಇರುವ ಪರಿಹಾರ ಕೇಂದ್ರ ಸ್ಥಗಿತಗೊಳಿಸಿ, ಅದೇ ಗ್ರಾಮಗಳಲ್ಲಿ ಇರುವ ದೇವಸ್ಥಾನ, ಸಮುದಾಯ ಭವನ ಅಥವಾ ಇತರೇ ಸರ್ಕಾರಿ ಕಟ್ಟಡಗಳಲ್ಲಿ ಪರಿಹಾರ ಕೇಂದ್ರ ತೆರೆಯಲಾಗುತ್ತಿದೆ. ಯಾವುದೇ ಅಧಿಕಾರಿ, ಸಂತ್ರಸ್ತರನ್ನು ಪರಿಹಾರ ಕೇಂದ್ರದಿಂದ ಹೊರ ಹೋಗು ಎಂದರೆ ನೇರವಾಗಿ ತಮಗೆ ತಿಳಿಸಬೇಕು. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪ್ರಮುಖರಾದ ಶ್ರೀಕಾಂತ ಮೇತ್ರಿ, ಬಾಲಪ್ಪ ಚಲವಾದಿ, ಮಹೇಶ ಮಾದರ, ಅಂಜಲಿ ಬಾನು, ಬಸವರಾಜ ಚಲವಾದಿ, ಮಾರುತಿ ಹೊಸಮನಿ, ಮಂಜುನಾಥ ಚಲವಾದಿ, ಲಕ್ಷ್ಮಣ ಹಟ್ಟೆನ್ನವರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.