ಮನೆಗೆ ವೈದ್ಯರ ತಂಡ: ಸಮೀಕ್ಷೆಗೆ ಸಹಕರಿಸಿ
ಸಚಿವ ಮುರುಗೇಶ ನಿರಾಣಿ ಮನವಿ | ವೈದ್ಯರು ಪ್ರತಿದಿನ 4 ಗ್ರಾಮಗಳಲ್ಲಿ ತೆರಳಿ ಆರೋಗ್ಯ ತಪಾಸಣೆ
Team Udayavani, Jun 1, 2021, 7:02 PM IST
ಬಾಗಲಕೋಟೆ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮನೆ ಮನೆ ಆರೋಗ್ಯ ತಪಾಸಣೆ ಕೈಗೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಚಾಲನೆ ನೀಡಿದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಪಂ, ಬೀಳಗಿ ತಾಲೂಕಾ ಪಂಚಾಯತ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಹಮ್ಮಿಕೊಂಡ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಒಬ್ಬರಿಂದ ಒಬ್ಬರಿಗೆ ಹರಡಬಹುದಾದ ಸಾಂಕ್ರಾಮಿಕ ರೋಗವಾಗಿದೆ. ನಗರದಿಂದ ಈಗ ಗ್ರಾಮ ಮಟ್ಟದಲ್ಲಿ ಈ ಸೋಂಕು ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವೈದ್ಯರು, ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರನ್ನೊಳಗೊಂಡ ತಂಡವು ಗ್ರಾಮದ ಪ್ರತಿಯೊಂದು ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ಕೈಗೊಳ್ಳಲಿದ್ದಾರೆ. ಗ್ರಾಮಸ್ಥರು ಇದಕ್ಕೆ ಸಹಕಾರ ನೀಡಬೇಕು. ತಪಾಸಣೆಯಿಂದ ಆರೋಗ್ಯದ ಸ್ಥಿತಿಗತಿಗೆ ಅನುಗುಣವಾಗಿ ಔಷಧ ಸಹ ನೀಡಲಿದ್ದಾರೆ. ಕೆಮ್ಮು, ನೆಗಡಿ, ಜ್ವರಗಳು ಬಂದಲ್ಲಿ ಔಷಧಗಳ ಕಿಟ್ ಸಹ ನೀಡಲಿದ್ದಾರೆ. ಇದರಿಂದ ಆರಂಭದಲ್ಲಿಯೇ ಅದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಸೋಂಕು ದೇಹದೊಳಗೆ ಸೇರಿ ಉಲ್ಬಣವಾಗುವವರೆಗೆ ಬಿಡಬಾರದು ಎಂಬ ದೃಷ್ಟಿಯಿಂದ ಆರಂಭದಲ್ಲಿಯೇ ಪತ್ತೆ ಹಚ್ಚುವ ಉದ್ದೇಶವಾಗಿದೆ ಎಂದು ಹೇಳಿದರು.
ಬೀಳಗಿ ತಾಲೂಕಿನ ಗಲಗಲಿ, ಸಿದ್ದಾಪುರ, ಸೊನ್ನ ಮತ್ತು ಗಿರಿಸಾರ ಗ್ರಾಮಗಳಿಗೆ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು. ವೈದ್ಯರು ಪ್ರತಿದಿನ ನಾಲ್ಕು ಗ್ರಾಮಗಳಲ್ಲಿ ತೆರಳಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಔಷಧ ಕಿಟ್‌ಗಳನ್ನು ಸಹ ಸಚಿವರು ವಿತರಿಸಿದರು.
ಬೀಳಗಿ ತಹಶೀಲ್ದಾರ್ ಶಂಕರ ಗಾಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕಾರ್ತಿಕ ಎಂ., ತಾಲೂಕು ವೈದ್ಯಾಧಿಕಾರಿ ಡಾ| ಕರಿಯನ್ನವರ, ಡಾ| ಅನಿಲ ಕುಚನೂರ, ಜಯಶ್ರೀ ಮಾದರ, ಮೋಹನ್ ಜಾಧವ, ಹೊಳೆಬಸು ಬಾಳಶೆಟ್ಟಿ, ರಾಮಣ್ಣ ಶೇಬಾನಿ, ಶ್ರೀಶೈಲ ಗೋಳಿಪಲ್ಲೆ, ಆನಂದ ಇಂಗಳಗಾವಿ, ಸಂಜಯ ಬಳಿಗಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.