ಅಂದ-ಚೆಂದ ನೋಡಬೇಡಿ; ಗುಣಮಟ್ಟ ನೋಡಿ; ಮಹಾದೇವ ಮುರಗಿ
ಮಾರುಕಟ್ಟೆ ಬೆಳೆದಂತೆ ವಸ್ತುಗಳನ್ನು ಖರೀದಿಸುವಲ್ಲಿ ಎಚ್ಚರ ವಹಿಸಬೇಕು.
Team Udayavani, Jan 5, 2023, 5:44 PM IST
ಬಾಗಲಕೋಟೆ: ಗ್ರಾಹಕರು, ಯಾವುದೇ ವಸ್ತುಗಳ ಖರೀದಿಯ ಮುಂಚೆ ಅಂದ-ಚೆಂದ ನೋಡಬಾರದು. ಆ ವಸ್ತುಗಳ ಗುಣಮಟ್ಟ ಪರಿಶೀಲಿಸಿ ಖರೀದಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸಲಹೆ ನೀಡಿದರು.
ಜಿಪಂ ಸಭಾ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ, ಕಾನೂನು ಮಾಪನ ಶಾಸ್ತ್ರ, ಶಿಕ್ಷಣ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರು ವಸ್ತುಗಳ ಖರೀದಿ ಮುಂಚೆ ಅವುಗಳ ಬೆಲೆ, ಗುಣಮಟ್ಟ ಮತ್ತು ಪ್ರಮಾಣದ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಯೋಗ್ಯವೆಂದು ಖಾತ್ರಿಯಾದಾಗ ಖರೀದಿಸಲು ಮುಂದಾಗಬೇಕು. ಆರೋಗ್ಯ ಪೂರಕವಾದ ವಸ್ತುಗಳನ್ನು ಖರೀದಿಸಬೇಕಾದಲ್ಲಿ ತಿಳಿವಳಿಕೆ ಅಗತ್ಯವಾಗಿದೆ. ಇಲ್ಲದಿದ್ದರೆ ಮೋಸ ಹೋಗಬೇಕಾಗುತ್ತದೆ. ಗ್ರಾಹಕ ಮೋಸ ಹೋಗಬಾರದೆಂಬ ಉದ್ದೇಶದಿಂದ ಸರಕಾರ ಅನೇಕ ಕಾಯ್ದೆಗಳನ್ನು ಜಾರಿಗೆ ತಂದಿದೆ.
ಮೋಸ ಹೋದಲ್ಲಿ ಗ್ರಾಹಕರ ವೇದಿಕೆಗೆ ದೂರು ನೀಡಬಹುದಾಗಿದೆ. ಗ್ರಾಹಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ವಿವಿಧ ಪ್ರಾತ್ಯಕ್ಷಿಕೆ ಸಹ ಏರ್ಪಡಿಸಲಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ವಿಜಯಕುಮಾರ ಪಾವಲೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಕಾರದ ಸದಸ್ಯ ಕಾರ್ಯದರ್ಶಿ ಹೇಮಾಪಸ್ತಾಪುರ ಗ್ರಾಹಕರಿಗೆ ಮಾಹಿತಿಯುಳ್ಳ ಕರಪತ್ರಗಳನ್ನು ಬಿಡುಗಡೆ ಮಾಡಿ, ವಸ್ತುಗಳ
ಖರೀದಿಯಲ್ಲಿ ಗ್ರಾಹಕರಿಗೆ ಅನ್ಯಾಯವಾದಲ್ಲಿ ಗ್ರಾಹರಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಮೊರೆ ಹೋಗಬಹುದಾಗಿದೆ. ವ್ಯಾಜ್ಯಗಳ ಇತ್ಯರ್ಥ ಪಡಿಸಿಕೊಳ್ಳಲು ಉಚಿತವಾಗಿ ಲೋಕ ಅದಾಲತ್ ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
ಉಪನ್ಯಾಸಕರಾಗಿ ಆಗಮಿಸಿದ್ದ ವಕೀಲ ಜಿ.ಎನ್. ಕುಲಕರ್ಣಿ ಮಾತನಾಡಿ, ಗ್ರಾಹಕರ ದಿನಿತ್ಯದ ಜೀವನಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಸರಕಾರ ಜಾರಿಗೆ ತಂದಿದ್ದು, ಅವುಗಳ ಬಗ್ಗೆ ಅರಿವು ಗ್ರಾಹಕರಿಗೆ ಇರಬೇಕು. ಮಾರುಕಟ್ಟೆ ಬೆಳೆದಂತೆ ವಸ್ತುಗಳನ್ನು ಖರೀದಿಸುವಲ್ಲಿ ಎಚ್ಚರ ವಹಿಸಬೇಕು. ಯಾವುದೇ ಜಾಹೀರಾತುಗಳಿಗೆ ಮರೆ ಹೋಗಬಾರದು. ವಸ್ತುಗಳ ಖರೀದಿಯಲ್ಲಿ ಮೋಸ ಹೋದಲ್ಲಿ ಗ್ರಾಹಕರ ವ್ಯಾಜ್ಯಗಳ ವೇದಿಕೆಗೆ ದೂರು ನೀಡಬಹುದಾಗಿದೆ. ಸರಕಾರಿ ಸೇವೆಯಲ್ಲಿ ತೊಂದರೆಯಾದಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದರು.
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಜಿಲ್ಲೆಯ 10 ಶಾಲೆಗಳಲ್ಲಿ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸಿ.ಎಚ್.ಸಮಿಉನ್ನೀಸಾ ಅಬ್ರಾರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ ಉಪಸ್ಥಿತರಿದ್ದರು.
ವಿವಿಧ ಪ್ರಾತ್ಯಕ್ಷಿಕೆ ವೀಕ್ಷಣೆ: ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾ ಧಿಕಾರದಿಂದ ಆಹಾರ ಸುರಕ್ಷತೆ ಹಾಗೂ ಆಹಾರ ಕಲಬೆರಕೆ, ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ತೂಕ ಮತ್ತು ಅಳತೆ ಹಾಗೂ ಪೊಟ್ಟಣ ಸಾಮಗ್ರಿಗಳ ವಸ್ತು ಪ್ರದರ್ಶನ, ಪೂನಂ, ವೀರಭದ್ರೇಶ್ವರ ಗ್ಯಾಸ್ ಸೆಂಟರ್‌ನಿಂದ ಎಲ್.ಪಿ.ಜಿ ಸುರಕ್ಷತೆ ಬಗ್ಗೆ, ಲೀಡ್ ಬ್ಯಾಂಕ್‌ನಿಂದ ಬ್ಯಾಂಕ್ ಸೌಲಭ್ಯ, ಬಿಎಸ್‌ಎನ್‌ಎಲ್‌ನಿಂದ ದೂರವಾಣಿ ಸಂಪರ್ಕ ಸೌಲಭ್ಯ ಹಾಗೂ ಕೆ.ಎಸ್.ಆರ್ .ಟಿ.ಸಿಯಿಂದ ಸಾರಿಗೆ ಸೌಲಭ್ಯ ಕುರಿತ ಪ್ರಾತ್ಯಕ್ಷಿತೆ ವೀಕ್ಷಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.