ಕುಡಿವ ನೀರು: 142 ಹೊಸ ಕಾಮಗಾರಿ ಅನುಮೋದನೆ
Team Udayavani, Dec 16, 2019, 12:44 PM IST
ಬಾಗಲಕೋಟೆ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕುಡಿಯುವ ನೀರಿಗೆ ಸಂಬಂಧಿಸಿದ ಒಟ್ಟು 265 ಕಾಮಗಾರಿಗಳ ಪೈಕಿ 238 ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹೊಸದಾಗಿ 142 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ತಿಳಿಸಿದರು.
ಜಿಪಂ ಅಧ್ಯಕ್ಷರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಒಟ್ಟು 265 ಕಾಮಗಾರಿಗೆ 4708.47 ಲಕ್ಷಗಳ ಕ್ರಿಯಾ ಯೊಜನೆಯಡಿ ಅನುಮೋದನೆ ನೀಡಲಾಗಿತ್ತು. 265 ಪೈಕಿ 238 ಕಾಮಗಾರಿ ಪೂರ್ಣಗೊಳಿಸಿದ್ದು, ಬಾಕಿ ಇರುವ ಕಾಮಗಾರಿ ಸಹ ಪೂರ್ಣಗೊಳಿಸಲು ಸೂಚಿಸಿದರು. ಇನ್ನು 142 ಹೊಸ ಕಾಮಗಾರಿಗಳಿಗೆ 3081.64 ಲಕ್ಷ ರೂ.ಗಳ ಅನುದಾನದ ಕ್ರೀಯಾ ಯೋಜನೆಗೂ ಸಹ ಅನುಮೋದನೆ ನೀಡಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಹಿಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸುಸ್ಥಿತಿಯಲ್ಲಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅಧಿ ಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ವಿ.ಎಸ್. ಹಿರೇಮಠ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.