ಬಾಗಿಲು ಮುಚ್ಚಿದ ಕುಡಿವ ನೀರಿನ ಘಟಕಗಳು

•ನಿರ್ವಹಣೆ ನಿರ್ಲಕ್ಷ್ಯ •ಸ್ಥಗಿತಗೊಂಡಿವೆ ಐದು ಘಟಕಗಳು •ಸಾರ್ವಜನಿಕರಿಗೆ ಈಗ ಶುದ್ಧ ನೀರು ಮರೀಚಿಕೆ

Team Udayavani, May 18, 2019, 11:04 AM IST

bagalkote-tdy-4..

ಅಮೀನಗಡ: ಎರಡು ವರ್ಷದಿಂದ ಸ್ಥಗಿತಗೊಂಡ ಪಟ್ಟಣದ 16ನೇ ವಾರ್ಡ್‌ನ ಶುದ್ಧ ಕುಡಿಯುವ ನೀರಿನ ಘಟಕ.

ಅಮೀನಗಡ: ಪಪಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸದಸ್ಯರ ತಾತ್ಸಾರದಿಂದ ಪಟ್ಟಣದ ಐದು ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆಯಿಲ್ಲದೆ ಬಾಗಿಲು ಮುಚ್ಚಿವೆ.

ಪಟ್ಟಣದ 16ನೇ ವಾರ್ಡ್‌ನ ಚಿತ್ತರಗಿ ಕ್ರಾಸ್‌ ಹತ್ತಿರವಿರುವ ಪಪಂ ಅನುದಾನದಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಎರಡೂವರೆ ವರ್ಷಗಳ ಹಿಂದೆ ಸ್ಥಾಪಿಸಲಾಗಿತ್ತು. ಆರಂಭದಲ್ಲಿ ಈ ಘಟಕ ಉತ್ತಮವಾಗಿಯೇ ನಡೆಯುತ್ತಿತ್ತು. ಆದರೆ ಪಪಂ ಅಧಿಕಾರಗಳ ನಿರ್ಲಕ್ಷ್ಯ ಹಾಗೂ ಸದಸ್ಯರುಗಳ ತಾತ್ಸಾರದಿಂದ ಸ್ಥಗಿತಗೊಂಡಿದ್ದು, ವಾರ್ಡ್‌ಗಳ ಜನತೆ ಕುಡಿಯುವ ನೀರಿಗಾಗಿ ಬೇರೆ ವಾರ್ಡ್‌ಗಳಿಗೆ ಅಲೆಯುವ ಪರಿಸ್ಥಿತಿ ಎದುರಾಗಿದೆ.

ಪಟ್ಟಣದ 8 ಮತ್ತು 16ನೇ ವಾರ್ಡ್‌ಗಳ ಸೆಂಟರ್‌ ಪಾಯಿಂಟ್ ಗುರುತಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ಎರಡು ವಾರ್ಡ್‌ಗಳ ಜನರಿಗೆ ಈ ಘಟಕ ಬಹಳ ಅನುಕೂಲವಾಗಿತ್ತು. ಈ ಘಟಕ ಕೆಟ್ಟಿರುವುದರಿಂದ ಎರಡೂ ವಾರ್ಡ್‌ನ ನೂರಾರು ಜನರಿಗೆ ತೀವ್ರ ತೊಂದರೆಯಾಗಿದೆ.

ಘಟಕ ಬಂದಾಗಲು ಕಾರಣವೇನು? ಘಟಕ ಸ್ಥಾಪನೆ ಮಾಡುವಾಗಲೇ ಗುಣಮಟ್ಟದ ಸಾಮಾನುಗಳನ್ನು ಬಳಸಿಲ್ಲ. ವಾರ್ಡ್‌ನ ಜನತೆಗೆ ಉಪಯುಕ್ತವಾಗಲಿ ಎಂಬ ಉದ್ದೇಶದಿಂದ ಆರಂಭಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಆರಂಭದಿಂದಲೇ ಸರಿಯಾಗಿ ನಿರ್ವಹಣೆಯಾಗಲಿಲ್ಲ. ಈ ಘಟಕದ ಬಗ್ಗೆ ಪಪಂ ಎಂಜಿನಿಯರ್‌ ಮತ್ತು ಅಧಿಕಾರಿಗಳು ಮತ್ತು ಸದಸ್ಯರು ಸರಿಯಾಗಿ ಗಮನ ನೀಡದೇ ನಿರ್ಲಕ್ಷ್ಯ ಮಾಡಿದ್ದರಿಂದ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದೆ.

ಪಟ್ಟಣದಲ್ಲಿರುವ ಒಟ್ಟು ಆರು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕೇವಲ ಒಂದು ಮಾತ್ರ ಕಾರ್ಯ ನಿರ್ವಹಣೆ ಮಾಡುತ್ತಿದೆ. ಐದು ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಪತ್ರಿಕಟ್ಟಿ ಹತ್ತಿರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿದೆ. ಉಳಿದ 5ನೇ ವಾರ್ಡ್‌ನಲ್ಲಿರುವ ಘಟಕ ಇನ್ನೂ ಆರಂಭವಾಗಿಲ್ಲ. 16ನೇ ವಾರ್ಡ್‌ನ ಸಂಗಮ ಕ್ರಾಸ್‌ದಲ್ಲಿರುವ ಘಟಕಗಳು ಎರಡು ವರ್ಷದಿಂದ ಸ್ಥಗಿತಗೊಂಡಿದೆ. ಚಾಲುಕ್ಯ ಡಾಬಾ ಹತ್ತಿರವಿರುವ ಘಟಕ ಮತ್ತು ಮೂರನೇ ವಾರ್ಡ್‌ನ ನೀರಿನ ಘಟಕದಲ್ಲಿ ಮೆಮರಿಯನ್‌ ಕೆಟ್ಟು ನಿಂತಿದೆ. ಇದರಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನೇ ನಂಬಿರುವ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುವ ಟೆಂಡರ್‌ ಮುಗಿದಿದ್ದು, ಈ ಹಿಂದೆ ಟೆಂಡರ್‌ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆದಾರನಿಗೆ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ನೀಡಿದ್ದಾರೆ. ಆದರೆ, ಗುತ್ತಿಗೆದಾರನಿಗೆ ಪಟ್ಟಣ ಪಂಚಾಯಿತಿ ಅಗತ್ಯ ಸಾಮಗ್ರಿ ಪೂರೈಸದ ಕಾರಣ ಅವೆಲ್ಲ ಸರಿಯಾಗಿ ನಿರ್ವಹಣೆಯಾಗಿಲ್ಲ ಎಂಬ ಮಾತು ಕೇಳಿ ಬಂದಿದೆ.

ಪಟ್ಟಣದಲ್ಲಿರುವ ಆರು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕೇವಲ ಒಂದು ಮಾತ್ರ ಚಾಲ್ತಿಯಲ್ಲಿದೆ. 16ನೇ ವಾರ್ಡ್‌ನ ಘಟಕ ಸುಮಾರು ಎರಡು ವರ್ಷದಿಂದ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಸದಸ್ಯರ, ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಬರದಿಂದ ವಾರಕೊಮ್ಮೆ ನೀರು ಬರುತ್ತದೆ. ಶುದ್ಧ ಕುಡಿಯುವ ನೀರಿನ ಘಟಕ ಕೂಡಾ ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಹಿರಿಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು.-ನಿಜಾಮುದ್ದಿನ್‌ ಖಾದ್ರಿ, ಯುವ ಮುಖಂಡರು, ಅಮೀನಗಡ

•ಎಚ್.ಎಚ್.ಬೇಪಾರಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.