ಹನಿ ನೀರಾವರಿ ಯೋಜನೆ ವಿಫಲ: ರೈತರ ಆಕ್ರೋಶ


Team Udayavani, Jul 12, 2020, 12:03 PM IST

ಹನಿ ನೀರಾವರಿ ಯೋಜನೆ ವಿಫಲ: ರೈತರ ಆಕ್ರೋಶ

ಹುನಗುಂದ: ಮರೋಳ ಏತ ನೀರಾವರಿಯ ಎರಡನೆಯ ಹಂತದ ಹನಿ ನೀರಾವರಿ ಯೋಜನೆಯ ವೀಕ್ಷಣೆಗೆ ಬೆಂಗಳೂರಿನಿಂದ ಆಗಮಿಸಿದ್ದ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚನ್ನಿ ಎದುರು ಯೋಜನೆಯ ವೈಫಲ್ಯದ ಕುರಿತು ರೈತರು ಅಕ್ರೋಶ ವ್ಯಕ್ತಪಡಿಸಿದರು.

ಹುನಗುಂದ ಸಮೀಪದ ಹನಿ ನೀರಾವರಿ ಜಾಕ್‌ವೆಲ್‌ಗೆ ಭೇಟಿ ನೀಡಿದ ವೇಳೆ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು ಏಷ್ಯಾ ಖಂಡದಲ್ಲಿ ಅತ್ಯಂತ ದೊಡ್ಡ ಹಾಗೂ ಇಸ್ರೇಲ್‌ ಮಾದರಿಯ ಬಹು ದೊಡ್ಡ ಯೋಜನೆಯನ್ನು780 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಈ ಯೋಜನೆ 60 ಸಾವಿರ ಹೆಕ್ಟೇರ್‌ ಯೋಜನೆ, ಗುತ್ತಿಗೆ ಪಡೆದ ಕಂಪನಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷದಿಂದ ಸಂಪೂರ್ಣ ಹಳ್ಳ ಹಿಡಿದಿದೆ ಎಂದು ಆರೋಪಿಸಿದರು.

ಸಫಲಗೊಳ್ಳದ ಯೋಜನೆ: ಈ ಯೋಜನೆಯು ಆರಂಭವಾಗಿ ಮೂರು ವರ್ಷ ಕಳೆದರೂ ಸರಿಯಾಗಿ ರೈತರ ಜಮೀನುಗಳಿಗೆ ನೀರು ಬಂದಿಲ್ಲ. ಕಂಪನಿಯವರಿಗೆ ಕೊಟ್ಟ ಐದು ವರ್ಷದ ನಿರ್ವಹಣೆ ಜವಾಬ್ದಾರಿ ಪೂರ್ಣಗೊಳ್ಳುತ್ತಿದ್ದು, ಸದ್ಯ ಕಂಪನಿಯವರು ರೈತರ ಭೂಮಿಗೆ ಶೇ. 80 ನೀರು ಹರಿಸಿದ್ದೇವೆ ಎಂದು ಸುಳ್ಳು ಹೇಳಿ, ಸಂಬಂಧಿಸಿದ ಮೇಲಧಿಕಾರಿಗಳ ದಿಕ್ಕು ತಪ್ಪಿಸುವ ಕಾರ್ಯ ನಡೆಯುತ್ತಿದೆ. ಇಲ್ಲಿವರಿಗೆ ರೈತರ ಜಮೀನಿಗೆ ಶೇ.25 ರಿಂದ 30ರಷ್ಟು ನೀರನ್ನು ಹರಿಸಿದ್ದು, ಉಳಿದ ಶೇ.75ರಷ್ಟು ನೀರು ಬಂದಿಲ್ಲ. ಸದ್ಯ ಗುತ್ತಿಗೆ ಪಡೆದ ಕಂಪನಿಗಳು ಮತ್ತು ಸ್ಥಳೀಯ ಕೆಬಿಜೆಎನ್‌ಎಲ್‌ ಅಧಿಕಾರಿಗಳು ಜೊತೆ ಸೇರಿ ರೈತರ ಹೊಲಗಳಿಗೆ ನೀರು ಹರಿಸುವ ಮೂಲಕ ಯೋಜನೆ ಸಫಲಗೊಂಡಿದೆ ಎಂದು ರೈತರಿಂದ ಒಪ್ಪಗೆ ಪತ್ರಕ್ಕೆ ಸಹಿ ಹಾಕಿಸಿಕೊಂಡು ಈ ಯೋಜನೆಯಿಂದ ಕೈ ತೊಳೆದುಕೊಳ್ಳುವ ಬಹು ದೊಡ್ಡ ಹುನ್ನಾರ ನಡೆದಿದೆ ಎಂದು ಕಂಪನಿ ಹಾಗೂ ಅಧಿಕಾರಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೊಳಕೆ ಹಂತದಲ್ಲಿಯೇ ನಾಶವಾದ ಬಿತ್ತನೆ: ರೈತರ ಮುಂಗಾರು ಬಿತ್ತನೆಗೆ ಅನೂಕೂಲಕ್ಕಾಗಿ ವಾಡಿಕೆಯಂತೆ ಜೂನ್‌ ತಿಂಗಳ ಮೊದಲ ವಾರದಲ್ಲಿಯೇ ರೈತರ ಭೂಮಿಗೆ ನೀರು ಹರಿಸಬೇಕಿತ್ತು. ಅದರ ಪ್ರಕಾರ ಕೆಬಿಜೆಎನ್‌ಎಲ್‌ ಅಧಿಕಾರಿಗಳು ಕೂಡಾ ರೈತರಿಗೆ ಭರವಸೆ ನೀಡಿದ್ದರು. ಅಧಿಕಾರಿಗಳ ಮಾತು ನಂಬಿದ ರೈತರು ತಮ್ಮ ಹೊಲಗಳಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಿದ್ದಾರೆ. ಅಗಷ್ಟ ಸಮೀಪಿಸುತ್ತಿದ್ದರೂ ಸಮರ್ಪಕ ನೀರು ಹರಸದೇ ಇರುವುದರಿಂದ ರೈತರು ಹೊಲದಲ್ಲಿ ಮಾಡಿದ ಬಿತ್ತನೆಗಳು ಮೊಳಕೆ ಹಂತದಲ್ಲಿಯೇ ನಾಶವಾಗುತ್ತಿವೆ ಎಂದು ಆರೋಪಿಸಿದರು.

ಕೃಷ್ಣಾ ಭಾಗ್ಯ ಜಲ ನಿಗಮದ ಕಾರ್ಯಪಾಲಕ ಅಭಿಯಂತರ ಎಸ್‌.ಬಿ ಸಾಂಬಾ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಅಮರೇಗೌಡ, ಪಿಎಸ್‌ಐ ಶರಣಬಸಪ್ಪ ಸಂಗಳದ ಮುಂತಾದವರು ಉಪಸ್ಥಿತರಿದ್ದರು.

ರೈತರ ಪಾಲಿಗೆ ಆಶಾಕಿರಣವಾಗಬೇಕಾಗಿದ್ದ ಹನಿ ನೀರಾವರಿ ಯೋಜನೆಯು ಸಂಪೂರ್ಣ ವಿಫಲವಾಗಿದೆ. ಈ ಯೋಜನೆಯ ಪ್ರಯೋಜನ ಇಲ್ಲಿವರೆಗೂ ಯಾವ ರೈತರಿಗೆ ತಲುಪಿಲ್ಲ. ಸಾಕಷ್ಟು ಅಧಿಕಾರಿಗಳು ಪರಿಶೀಲನೆಗೆ ಬರುತ್ತಾರೆ. ಗುತ್ತಿಗೆ ಪಡೆದ ಕಂಪನಿಗಳ ಕಾಗದ ಮತ್ತು ಸ್ಥಳೀಯ ಅಧಿಕಾರಿಗಳು ಹೇಳುವುದನ್ನು ಕೇಳಿ ಹೋಗುತ್ತಾರೆ. ವಾಸ್ತವ ಸಂಗತಿ ಯಾವ ಆಧಿಕಾರಿ ಅರಿಯುತ್ತಿಲ್ಲ. –ಮಹೇಶ ಬೆಳ್ಳಿಹಾಳ, ರೈತರು ಹುನಗುಂದ.

ಟಾಪ್ ನ್ಯೂಸ್

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಸೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಶೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

2

Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.