ಕೊಂಬೆ ಸವರುವ ಕಾಮಗಾರಿಗೆ ಚಾಲನೆ
Team Udayavani, Dec 15, 2019, 3:57 PM IST
ಬಾಗಲಕೋಟೆ: ತಾಲೂಕಿನ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನವನಗರದ ಯುನಿಟ್-1ರಲ್ಲಿಯ ಮುಖ್ಯ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಮತ್ತು ಬೀದಿ ಬದಿ ದೀಪಗಳಿಗೆ ಅಡತಡೆ ಉಂಟು ಮಾಡುವ ಮರ ಹಾಗೂ ಕೊಂಬೆ ಸವರುವ ಕಾಮಗಾರಿಗೆ ಶಾಸಕ ಡಾ|ವೀರಣ್ಣ ಚರಂತಿಮಠ ಚಾಲನೆ ನೀಡಿದರು.
ಶನಿವಾರ ನವನಗರದ ಸೆಕ್ಟರ್ ನಂ. 43ರಲ್ಲಿ ಮರದ ಕೊಂಬೆಗಳ ಸವರುವ ಕಾಮಗಾರಿಗೆ ಚಾಲನೆ ಮಾತನಾಡಿದ ಅವರು, ತಾಲೂಕಿನ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ಮತ್ತು ಕೃಷ್ಣ ಭಾಗ್ಯಜಲ ನಿಗಮ ನಿಯಮಿತ ಅರಣ್ಯ ವಿಭಾಗದ ಸಹಯೋಗದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. 60.64 ಲಕ್ಷ ರೂ.ಗಳಿಗೆ ಟೆಂಡರ್ ನೀಡಲಾಗಿದ್ದು, ಗುತ್ತಿಗೆದಾರರು ನಿಗದಿತ ಅವಧಿಯೊಳಗಾಗಿ ಮರದ ಕೊಂಬೆ ಸವರುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ನಗರಸಭೆ ಸದಸ್ಯರಾದ ನಾಗರತ್ನ ಹೆಬ್ಬಳ್ಳಿ, ಶಾಂತಾ ಹನಮಕ್ಕನವರ, ಬಿಟಿಡಿಎ ಮುಖ್ಯ ಎಂಜಿನಿಯರ್ ವಾಸನದ, ಮಾಜಿ ಬಿಟಿಡಿಎ ಅಧ್ಯಕ್ಷ ಜಿ.ಎನ್. ಪಾಟೀಲ, ಭಾಗೀರತಿ ಪಾಟೀಲ, ಬಸವರಾಜ ಹೆಬ್ಬಳ್ಳಿ, ರಾಜು ಗೌಳಿ, ಶಂಕರ ಕೆಂಚನ್ನವರ, ರಾಜು ರೆವಣಕರ, ರಾಜು ನಾಯಕರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.