19ರಂದು ಇ-ಅದಾಲತ್
Team Udayavani, Sep 1, 2020, 4:56 PM IST
ಬನಹಟ್ಟಿ: ಸೆ.19 ರಂದು ಬನಹಟ್ಟಿ ನ್ಯಾಯಾಲಯದಲ್ಲಿ ನ್ಯಾಯಾಲಯದ ವ್ಯಾಪ್ತಿಗೆ ಸಂಬಂಧಪಟ್ಟ ಪ್ರಕರಣಗಳ ಇತ್ಯರ್ಥಕ್ಕೆ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕಕ್ಷಿದಾರರು ಲೋಕಅದಾಲತ್ ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರಾದ ರೇಶ್ಮಾ ಗೋಣಿ ಹೇಳಿದರು.
ಸೋಮವಾರ ಸ್ಥಳೀಯ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಪಟ್ಟ ಕಕ್ಷಿದಾರರು ಮನೆಯಲ್ಲಿ ಕುಳಿತುಕೊಂಡು ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಆಸ್ತಿ ಪರಭಾರೆ ದಾವೆಗಳು, ಹಣ ವಸೂಲಾತಿ, ನಿರ್ದಿಷ್ಟ ಕರಾರುಗಳಿಗೆ ಸಂಬಂಧಪಟ್ಟ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳಲ್ಲಿ ರಾಜಿಯಾಗಬಲ್ಲ ಪ್ರಕರಣಗಳು, ಬ್ಯಾಂಕ್‌ಗಳ ಹಣ ವಸೂಲಾತಿ ಪ್ರಕರಣ, ಜೀವನಾಂಶ, ವಿವಾಹ ವಿಚ್ಛೇದನಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ನ್ಯಾಯಾಧಿಧೀಶೆ ರೇಶ್ಮಾ ಗೋಣಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಮಹೇಶ ಚಂದ್ರಕಾಂತ ಮಾತನಾಡಿ, ಪ್ರಕರಣಗಳಿಗೆ ಸಂಬಂಧಪಟ್ಟ ಕಕ್ಷಿದಾರರು ತಮ್ಮ ವಕೀಲರನ್ನು ಸಂಪರ್ಕಿಸಿ ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ವಕೀಲರು, ಪೊಲೀಸ್ ಅಕಾರಿಗಳು ಮತ್ತು ಸಹಾಯಕ ಸರ್ಕಾರಿ ಅಭಿಯೋಜಕರು ಪ್ರಯತ್ನಿಸಬೇಕು. ಕೋವಿಡ್ ನಿಮಿತ್ತ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಸಿ. ಮಸಳಿ, ಪಿಎಸ್‌ಐ ರವಿಕುಮಾರ ಧರ್ಮಟ್ಟಿ, ತೇರದಾಳ ಪಿಎಸ್‌ಐ ವಿಜಯ ಕಾಂಬಳೆ, ಸಂಗಮೇಶ ಮುರನಾಳ, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪುಟಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.