ಇ-ಗ್ರಂಥಾಲಯ ನೋಂದಣಿ; ಬಾಗಲಕೋಟೆ ಜಿಲ್ಲೆಯೇ ಫಸ್ಟ್
30 ಜಿಲ್ಲೆಗಳಿಂದ ಒಟ್ಟು 1.38 ಲಕ್ಷ ಜನರು ಆನ್‌ಲೈನ್ ನೋಂದಣಿ
Team Udayavani, May 19, 2020, 11:32 AM IST
ಬಾಗಲಕೋಟೆ: ಸಾರ್ವಜನಿಕ ಗ್ರಂಥಾಲಯ ಕೈಗೊಂಡ ಇ-ನೋಂದಣಿ ಪ್ರಕ್ರಿಯೆಗೆ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದ್ದು, ರಾಜ್ಯದ 30 ಜಿಲ್ಲೆಗಳಲ್ಲಿ ಬೆಂಗಳೂರು ನಗರ ಹೊರತುಪಡಿಸಿ ಅತೀ ಹೆಚ್ಚು ಜನರು ನೋಂದಣಿ ಮಾಡಿಕೊಂಡು ಪುಸ್ತಕ ಓದಿದವರಲ್ಲಿ ಬಾಗಲಕೋಟೆ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
ಹೌದು. ಕಳೆದ ಮಾರ್ಚ್ 24ರಿಂದ ಲಾಕ್‌ಡೌನ್ ಮುಂದುವರಿದಿದ್ದು, ಈ ವೇಳೆ ಗ್ರಂಥಾಲಯಗಳು ಬಾಗಿಲು ಮುಚ್ಚಿವೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ ಓದುಗರಿಗೆ ಮನೆಯಿಂದಲೇ ಸೌಲಭ್ಯ ಕಲ್ಪಿಸಿದ್ದು, ಇಲಾಖೆ ಆರಂಭಿಸಿದ ಆನ್‌ಲೈನ್ ನೋಂದಣಿ ಮೂಲಕ ಪುಸ್ತಕ ಓದು ಪ್ರಕ್ರಿಯೆ ಯಶಸ್ವಿಯಾಗಿದೆ.
ಮಾರ್ಚ್ 24ರಿಂದ ಇಲ್ಲಿಯವರೆಗೆ ರಾಜ್ಯದ 30 ಜಿಲ್ಲೆಗಳಿಂದ ಒಟ್ಟು 1.38 ಲಕ್ಷ ಜನರು ಆನ್‌ಲೈನ್ ನೋಂದಣಿ ಮಾಡಿಕೊಂಡು ಪುಸ್ತಕ ಓದಿದ್ದಾರೆ. ಲಾಕ್ ಡೌನ್ ವೇಳೆ ಜನರು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಇಲ್ಲವೇ ಕಂಪ್ಯೂಟರ್‌ನಲ್ಲಿ ನಾಡಿನ ಹೆಸರಾಂತ ಸಾಹಿತಿಗಳ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕ, ಕಥೆ, ಕಾದಂಬರಿ ಸಹಿತ ಹಲವಾರು ಪುಸ್ತಕ ಓದಲು ಗ್ರಂಥಾಲಯ ಇಲಾಖೆಯ ಇ-ಗ್ರಂಥಾಲಯ ಸಹಕಾರಿಯಾಗಿದೆ.
ಲಾಕ್‌ಡೌನ್ ಸಂದರ್ಭ ಲಾಕ್ ಫ್ರೀ : ಪುಸ್ತಕ-ಬೆರಳ ತುದಿಯಲ್ಲಿ ಗ್ರಂಥಾಲಯ ಎಂಬ ಸರ್ಕಾರದ ಹೊಸ ಪ್ರಕ್ರಿಯೆಗೆ ಜಿಲ್ಲೆಯ 11 ಸಾವಿರಕ್ಕೂ ಹೆಚ್ಚು ಓದುಗರು, ಮನೆಯಿಂದಲೇ ಇ ಸಾರ್ವಜನಿಕ ಗ್ರಂಥಾಲಯ, ಉಚಿತ ಆ್ಯಪ್ ಮೂಲಕ ನೋಂದಣಿ ಮಾಡಿಕೊಂಡು, ಡಿಜಿಟಲ್ ಗ್ರಂಥಾಲಯ ಉಪಯೋಗಪಡಿಸಿಕೊಂಡು, ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. -ಮಲ್ಲಿಕಾರ್ಜುನ ರೆಬಿನಾಳ, ಜಿಲ್ಲಾ ಸಾರ್ವಜನಿಕ ಗ್ರಂಥಾಲಯ ಅಧಿಕಾರಿ.
–ಶ್ರೀಶೈಲ ಕೆ. ಬಿರಾದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.