ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮೂರ್ತಿ

Team Udayavani, Sep 9, 2018, 3:00 PM IST

9-sepctember-18.jpg

ಬನಹಟ್ಟಿ: ಗಣೇಶೋತ್ಸವಕ್ಕೆ ರಬಕವಿ- ಬನಹಟ್ಟಿಯಲ್ಲಿ ಜೇಡಿಮಣ್ಣಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿಕೆ ಕಾರ್ಯಭರದಿಂದ ಸಾಗಿದೆ. ಕಲಾವಿದರು ಮೂರ್ತಿಗಳ ತಯಾರಿಕೆಯಲ್ಲಿ ತಲ್ಲೀನರಾಗಿ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.

ಬದಲಾದ ಕಾಲಕ್ಕೆ ಅನುಗುಣವಾಗಿ ಕಳೆದ ಐದಾರು ವರ್ಷಗಳಿಂದ ಪ್ಲಾಸ್ಟರ ಆಫ್‌ ಪ್ಯಾರಿಸ್‌ನಿಂದ ತಯಾರಿಸಲಾದ ಮೂರ್ತಿ ತಯಾರಿಸಲಾಗುತ್ತಿತ್ತು. ಅದರಲ್ಲಿ ಕೆಲವರು ಪಿಒಪಿ ಮತ್ತು ಜೇಡಿಮಣ್ಣಿನ ಗಣಪತಿ ಪೂಜಿಸುತ್ತಿದ್ದರು. ಆದರೆ, ಕಳೆದೆರಡು ವರ್ಷಗಳಿಂದ ರಾಜ್ಯ ಸರಕಾರ ಮಣ್ಣಿನ ಗಣಪತಿ ಮೂರ್ತಿ ತಯಾರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಬಕವಿಯ ಚವ್ಹಾಣ ಎಂಬುವವರ ಕುಟುಂಬ ಶತಮಾನಗಳಿಗಿಂತಲೂ ಹೆಚ್ಚು ಕಾಲ ಗಣೇಶ ವಿಗ್ರಹಗಳನ್ನು ಮಾಡುತ್ತಿದೆ. ಚವಾಣ ಕುಟುಂಬದವರಿಗೆ ಸಾಕಷ್ಟು ಬೇಡಿಕೆ ಬಂದಿದೆ. ಕಾರಣ ಇವರು ಮೊದಲಿನಿಂದಲೂ ಮಣ್ಣಿನ ಗಣೇಶ ವಿಗ್ರಹಗಳನ್ನು ಮಾಡುತ್ತಾ ಬಂದಿರುವುದು ವಿಶೇಷ.

ಗ್ರಾಹಕರಿಗೆ ಹೊರೆ ಆದರೂ ಪರಿಸರ ಸ್ನೇಹಿ ಗಣಪ ಮಾತ್ರ ಮಾರಾಟವಾಗುತ್ತಿರುವುದು ಸಂತಸದ ವಿಷಯವಾಗಿದೆ. ಪಿಒಪಿ ಗಣಪತಿಗಿಂತ ಮಣ್ಣಿನ ಗಣಪತಿಗಳು ತುಸು ಭಾರವಾದರೂ ಕೂಡಾ ಆಕರ್ಷಿಣಿಯವಾಗಿಸುವ ಸಲುವಾಗಿ ಇಲ್ಲಿನ ಕುಟುಂಬದವರು ಮುತ್ತು ಹಾಗೂ ವಿಶೇಷವಾದ ವಸ್ತುಗಳಿಂದ ಸಿಂಗರಿಸಿ ಆಕರ್ಷಣಿಯವಾಗಿ ಕಾಣುವಂತೆ ಮಾಡಿದ್ದಾರೆ.

ಈ ಬಾರಿ ಐದು ನೂರಕ್ಕೂ ಹೆಚ್ಚು ವಿಗ್ರಹಗಳನ್ನು ಮಾಡಿದ್ದೇವೆ. ಇನ್ನೂ ಬೇಡಿಕೆ ಸಾಕಷ್ಟು ಇದೆ. ಆದರೆ ಮಣ್ಣಿನ ಮೂರ್ತಿಗಳನ್ನು ಕೈಯಿಂದ ಮಾಡಬೇಕಾದರೆ ಬಹಳಷ್ಟು ಸಮಯಬೇಕಾಗುತ್ತದೆ. ಅದರಲ್ಲೂ ತಾಳ್ಮೆ ಮುಖ್ಯವಾಗಿದೆ. ರಾಸಾಯನಿಕ ಬಣ್ಣ ಬಳಸದೆ, ಕೇವಲ ನೈಸರ್ಗಿಕ ನೀರಿನಲ್ಲಿ ಕರಗುವ ಬಣ್ಣಗಳನ್ನು ಬಳಸುತ್ತೇವೆ. ಅಲ್ಲದೇ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರು ಬರುತ್ತಿದ್ದು, ಪರಿಸರ ಸ್ನೇಹಿ ಗಣೇಶನಿಗೆ ಮತ್ತೊಮ್ಮೆ ಬಾರಿ ಬೇಡಿಕೆ ಬಂದಿದೆ ಎನ್ನುತ್ತಾರೆ ಮೂರ್ತಿ ತಯಾರಕ ಅಮರ ಚವಾಣ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.