ಗುಡಿಸಲಲ್ಲಿ ಬೆಳೆದ ಪ್ರತಿಭೆಗೆ ಶಿಕ್ಷಣ ಇಲಾಖೆೆ ಗೌರವ
Team Udayavani, May 4, 2019, 12:24 PM IST
ಕಮತಗಿ: ತಗಡಿನ ಶೆಡ್‌ದಲ್ಲಿ ಬೆಳೆದ ಪ್ರತಿಭೆಯ ಅಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಎಸ್ಸೆಸ್ಸೆಲ್ಸಿ ಪ್ರತಿಭೆಯನ್ನು ಗೌರವಿಸಿ ಪ್ರೋತ್ಸಾಹಿಸಿದರು.
ಕಮತಗಿಯ ಶಂಕ್ರಪ್ಪ ಹಡಪದ ಅವರ ಪುತ್ರಿ ಮತ್ತು ಬಾಗಲಕೋಟೆಯ ಪ್ರತಿಭಾನ್ವಿತ ಪ.ಜಾ/ಪ.ಪಂ. ಬಾಲಕಿಯರ ಸರ್ಕಾರಿ ವಸತಿ ಶಾಲೆ ವಿದ್ಯಾರ್ಥಿನಿ ಸತ್ಯವತಿ ಹಡಪದ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 (ಶೇ.98.56) ಅಂಕಗಳನ್ನು ಪಡೆದು ಜಿಲ್ಲೆಗೆ 3ನೇ ಸ್ಥಾನ ಪಡೆದಿದ್ದಾಳೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಗೋನಾಳ ಅವರು ಸತ್ಯವತಿ ಹಡಪದ ಶೆಡ್‌ಗೆ ಭೇಟಿ ನೀಡಿ ಶಾಲು ಹೊದಿಸಿ, ಹೂವಿನ ಹಾರ ಹಾಕಿ, ಸಿಹಿ ತಿನಿಸಿ ಗೌರವಿಸಿದರು.
ಈ ವೇಳೆ ಡಿಡಿಪಿಐ ಬಿ.ಎಚ್. ಗೋನಾಳ ಮಾತನಾಡಿ, ಕಷ್ಟ ಪಟ್ಟು ಓದಿ ಇಲಾಖೆ ಮತ್ತು ತಂದೆ-ತಾಯಿಗಳ ಕೀರ್ತಿಯನ್ನು ಹೆಚ್ಚು ಮಾಡಿದ ನಿನ್ನ ಪ್ರತಿಭೆ ಕಮರಬಾರದು. ಮುಂದಿನ ವ್ಯಾಸಂಗಕ್ಕೆ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಇಲಾಖೆಯಿಂದ ನೀಡಲಾಗುವುದು. ಅದರ ಸದುಪಯೋಗ ಪಡೆದು ಯಶಸ್ಸಿನ ಸಾಧನೆ ಮುಂದುವರಿಯಬೇಕು. ನಿನ್ನಲ್ಲಿರುವ ಕ್ರಮಬದ್ಧವಾದ ಓದಿನ ರುಚಿ ಕಡಿಮೆ ಮಾಡಿಕೊಳ್ಳದೇ ಪಿಯುಸಿಯಲ್ಲೂ ಉತ್ತಮ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂದು ವಿದ್ಯಾರ್ಥಿನಿಗೆ ಸೂಚಿಸಿದರು.
ಸಾಧಕ ವಿದ್ಯಾರ್ಥಿನಿ ಸತ್ಯವತಿ ಹಡಪದ ಮಾತನಾಡಿ, ವಸತಿ ಶಾಲೆಯಲ್ಲಿದ್ದುಕೊಂಡು ಉತ್ತಮವಾಗಿ ಅಭ್ಯಾಸ ಮಾಡಿದ ಪರಿಣಾಮದಿಂದ ಈ ರೀತಿಯ ಸಾಧನೆಗೆ ಕಾರಣವಾಗಿದೆ. ಪಾಲಕರ, ಶಿಕ್ಷಕರ ಪ್ರೋತ್ಸಾಹ ಸಾಕಷ್ಟು ಸಿಕ್ಕಿದೆ. ಪಿಯುಸಿ ನಂತರ ಐ.ಎ.ಎಸ್ ಅಧ್ಯಯನ ಮಾಡುವ ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದರು. ಬಾಗಲಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡಬಸಪ್ಪ ನೀರಲಕೇರಿ ಮಾತನಾಡಿದರು. ಬಾಲಕಿಯರ ಸರ್ಕಾರಿ ವಸತಿ ಶಾಲೆಯ ಮುಖ್ಯಶಿಕ್ಷಕ ಎಲ್.ಎ. ಬಿರಾದಾರ, ಶಂಕ್ರಪ್ಪ ಹಡಪದ, ಗಂಗಪ್ಪ ಭೂತಲ, ರಾಘವೇಂದ್ರ ಕಿರಸೂರ, ಶಿವಕುಮಾರ ಹಡಪದ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.