ವೇತನ ತಾರತಮ್ಯ ನಿವಾರಿಸಿ: ಉಪನ್ಯಾಸಕರ ಪ್ರತಿಭಟನೆ
Team Udayavani, Nov 29, 2019, 12:01 PM IST
ಬಾಗಲಕೋಟೆ: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ವೇತನ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ವಿವಿಧ ಕಾಲೇಜುಗಳ ಉಪನ್ಯಾಸಕರು ಗುರುವಾರ ಪ್ರತಿಭಟನೆ ನಡೆಸಿದರು.
ನವನಗರದ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮಾನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷಆರ್.ಎಂ. ಗೌಡರ ಮಾತನಾಡಿ, ಪದವಿ ಪೂರ್ವಕಾಲೇಜುಗಳ ಉಪನ್ಯಾಸಕರ ಬೇಡಿಕೆಗಳನ್ನು ಹಲವಾರು ವರ್ಷಗಳಿಂದ ರಾಜ್ಯ ಸರ್ಕಾರ ಮನವಿ ಸಲ್ಲಿಸಿದ್ದೆವೆ. ಆದರೆ, ಯಾವ ಸರ್ಕಾರಗಳು ಸರಿಯಾಗಿ ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಉಪನ್ಯಾಸಕರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಪನ್ಯಾಸಕರ ಕಾರ್ಯಬಾರ ಕುರಿತು ಉನ್ನತ ಮಟ್ಟದ ಪರಿಷತ್ ಸಮಿತಿ ರಚಿಸಬೇಕು. ವೇತನದ ತಾರತಮ್ಯ ಸರಿಪಡಿಸಬೇಕು. ವಾರದ 16 ಗಂಟೆ ಬೋಧನೆ ಅವಧಿಯನ್ನು ಮುಂದುವರಿಸಲಾಗುವುದು. 500ರೂ ವಿಶೇಷ ಭತ್ತೆ ಕೂಡಲೇ ವೇತನಕ್ಕೆ ವಿಲೀನಗೊಳಿಸಬೇಕು. ಎನ್‌ಸಿಇಆರ್‌ಟಿ ನಿಯಮದಂತೆ ಪ್ರತಿ ತರಗತಿಗೆ ವಿದ್ಯಾರ್ಥಿಗಳ ಗರಿಷ್ಠ ಸಂಖ್ಯೆಯನ್ನು 80ರಿಂದ 40ಕ್ಕೆ ನಿಗದಿ ಪಡಿಸಬೇಕು. ಪದೋನ್ನತಿ ಹೊಂದಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿರುವರಿಗೆ ಕಾಲಮಿತಿ ವೇತನ ಬಡ್ತಿಯನ್ನು ಮಂಜೂರು ಮಾಡುವಂತೆ ಆದೇಶಿಸುವುದು. ನೆಟ್,ಸೆಟ್, ಪಿಎಚ್‌ಡಿ ಪಡೆದ ಉಪನ್ಯಾಸಕರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ 276 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲಾಗಿದೆ. ಅನುದಾನಿತಕಾಲೇಜುಗಳ ಉಪನ್ಯಾಸಕರ ಕಾಲ್ಪನಿಕ ವೇತನ ಬಡ್ತಿ ಸಮಸ್ಯೆ ಬಗೆಹರಿಸಬೇಕು. ಹುಟ್ಟಿಕೊಂಡಿರುವ ಪ್ರಾಯೋಗಿಕ, ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು. ಸಿಬಿಎಸಿ ಸೂಚನೆಯಂತೆ ಗಣಿತ ವಿಷಯದಲ್ಲಿ ಪ್ರಾಯೋಗಿಕ ಅಂಕಅಳವಡಿಸಬೇಕು. ವೃತ್ತಿ ಶಿಕ್ಷಣ ಇಲಾಖೆಯಿಂದ ವಿಲೀನವಾಗಿರುವ ಉಪನ್ಯಾಸಕರಿಗೆ ಬಿಇಡಿಪದವಿಯಿಂದ ವಿನಾಯಿತಿ ನೀಡಿದೆ. ಅವರ ಕಾಯಂಪೂರ್ಣ ಸೇವಾ ಅವಧಿ ಘೋಷಣೆ ಮಾಡಬೇಕು ಎಂದು ಒತ್ತಾಯಸಿದರು.
ಬೇಡಿಕೆಗಳು ಈಡೇರಿಸಲು ಸರ್ಕಾರ ಮುಂದಾಗದಿದ್ದಲ್ಲಿ 2020 ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಕಾರ್ಯಾಧ್ಯಕ್ಷ ನಾಗರತ್ನಾ ರಡ್ಡಿ, ಪ್ರಧಾನ ಕಾರ್ಯದರ್ಶಿ ಮಹೇಶ ಜಕ್ಕನವರ, ಖಜಾಂಚಿ ನರೇಗಲ್, ಮುಖಂಡ ವಿ.ಎಚ್. ತುರುಡಗಿ, ಡಿ.ಎಸ್. ಪಾಟೀಲ, ಎಂ.ಸಿ. ಜಕ್ಕಲಿ, ಬಿ.ವೈ. ಗೌಡರ ಐ.ಎಚ್. ನಾಯಕ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.