ಉದ್ಯೋಗ ಖಾತ್ರಿ ರೈತರಿಗೆ ವರದಾನ


Team Udayavani, Feb 15, 2020, 11:52 AM IST

bk-tdy-1

ಬಾಗಲಕೋಟೆ: ಕೆಲಸ ಅರಿಸಿ ದೂರದ ಮಂಗಳೂರು ಮತ್ತು ಗೋವಾಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿಯೇ ಉದ್ಯೋಗ ಮತ್ತು ಉತ್ತಮ ಕೂಲಿ ಪಡೆದುಕೊಂಡು ಸಂತೃಪ್ತ ಜೀವನ ನಡೆಸುತ್ತಿರುವುದನ್ನು ಕಂಡು ಸಿಇಒ ಗಂಗೂಬಾಯಿ ಮಾನಕರ ಹರ್ಷ ವ್ಯಕ್ತಪಡಿಸಿದರು.

ಬಾದಾಮಿ ತಾಲೂಕಿನ ತೋಗುಣಶಿ ಮತ್ತು ಕೋಟೆಕಲ್ಲ ಗ್ರಾಮದಲ್ಲಿ ಶುಕ್ರವಾರ ಉದ್ಯೋಗ ಖಾತರಿ ಯೋಜನೆಯ ಐಇಸಿ ಕಾರ್ಯಕ್ರಮದಡಿ ಹಮ್ಮಿಕೊಂಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಶಿಬಿರ ಕಾರ್ಯಕ್ರಮದಅಂಗವಾಗಿ ಆಗಮಿಸಿದ ವೇಳೆ ಕೋಟೆಕಲ್ಲ ಗ್ರಾಮ ವ್ಯಾಪ್ತಿಯಲ್ಲಿ ನಾಲಾ ಸಂರಕ್ಷಣೆಗಾಗಿ ಹಮ್ಮಿಕೊಂಡ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ದೂರದ ಊರುಗಳಿಗೆ ಉದ್ಯೋಗ ಅರಿಸಿ ಹೋಗಬೇಡಿ. ಸ್ಥಳೀಯವಾಗಿಯೇ ನಿಮಗೆ ಉದ್ಯೋಗ ನೀಡಲಾಗುತ್ತದೆ. ನರೇಗಾ ಯೋಜನೆಯಡಿ ಜಾಬ್‌ ಕಾರ್ಡ್‌ ಹೊಂದಿದವರಿಗೆ 100 ದಿನ ಹಾಗೂ ಬರಗಾಲದಲ್ಲಿ 150 ದಿನ ಕೂಲಿ ನೀಡಲಾಗುತ್ತಿದೆ. ದಿನಕ್ಕೆ 249 ರೂ.ಗಳ ಕೂಲಿ ನೀಡುತ್ತಿದ್ದು, ಗಂಡು, ಹೆಣ್ಣು ಎನ್ನದೇ ಸಮಾನ ಕೂಲಿ ನೀಡಲಾಗುತ್ತಿದೆ. ಅಂಗವಿಕಲತೆ ಮತ್ತು ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ತೋಗುಣಶಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳಲ್ಲಿಯೂ 350ಕ್ಕೂ ಹೆಚ್ಚು ಜನ ಕೂಲಿ ಮಾಡುತ್ತಿದ್ದರು. ಕೂಲಿ ಕೆಲಸದಲ್ಲಿ ಹೆಚ್ಚಾಗಿ ಮಹಿಳೆಯರು ಇದ್ದದ್ದನ್ನು ಕಂಡು ಗ್ರಾಮೀಣೋಪಾಯದಡಿ ಸ್ವ-ಸಹಾಯ ಗುಂಪುಗಳಿಗೆ ಸ್ವ-ಉದ್ಯೋಗ ಕೈಗೊಳ್ಳಲು ಸಹಾಯಧನ ಸಾಲದ ಸೌಲಭ್ಯಗಳ ಒದಗಿಸಲಾಗುವುದು. ನರೇಗಾದಿಂದ ಕೋಳಿ, ಕುರಿ, ದನದ ತೊಟ್ಟಿ ನಿರ್ಮಾಣ ಹಾಗೂ ಎಸ್‌ ಎಚ್‌ಜೆ ಕಟ್ಟಡಕ್ಕು ಅವಕಾಶವಿದೆ. ದುಡಿಯುವ ಕೈಗಳಿಗೆ ಮಾತ್ರವಲ್ಲದೇ ರೈತರಿಗೂ ಸಹ ನರೇಗಾ ವರದಾನವಾಗಿದೆ ಎಂದು ತಿಳಿಸಿದರು.

ಕೃಷಿ ಮತ್ತು ತೋಟಗಾರಿಕೆ ಪ್ರದೇಶ ಅಭಿವೃದ್ಧಿಗೆ ನಮ್ಮ ಹೊಲ ನಮ್ಮ ದಾರಿ ನಿರ್ಮಾಣಕ್ಕೆ ನರೇಗಾದಡಿ ಸಾಕಷ್ಟು ಅವಕಾಶಗಳಿವೆ. ಈ ಯೋಜನೆಯ ಲಾಭವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು. ಮೀನುಗಾರಿಕೆ, ಕೃಷಿ ಹೊಂಡ ನಿರ್ಮಾಣಕ್ಕೆ ವರದಾನವಾಗಿದೆ. ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ರಾಜ್ಯಕ್ಕೆ 5ನೇ ಸ್ಥಾನದಲ್ಲಿದೆ ಎಂದರು.

ವಿಕಲಚೇತನ ಕೂಲಿ ಕಾರ್ಮಿಕರಾದ ಯಮನವ್ವ ಪೂಜಾರಿ ಮಾತನಾಡಿ, ನರೇಗಾ ಯೋಜನೆಯಿಂದ ನಮಗೆ ವರದಾನವಾಗಿದೆ. ಉದ್ಯೋಗ ಅರಿಸಿ ವಲಸೆ ಹೋಗುವದನ್ನು ತಪ್ಪಿಸಿದೆ. ತಿಂಗಳು ಗಟ್ಟಲೇ ಬೇರೆ ರಾಜ್ಯಕ್ಕೆ ಕೆಲಸಕ್ಕೆ ಹೋಗಬೇಕಾಗುತ್ತಿತ್ತು. ಹೊಲದ ಕೆಲಸ ಇಲ್ಲದ ಸಮಯದಲ್ಲಿ ತುಂಬಾ ತೊಂದರೆಯಾಗುತ್ತಿತ್ತು. ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಜೀವನ ನಡೆಸಲು ತೊಂದರೆಯಾಗುತ್ತಿತ್ತು. ವಿಕಲತೆ ಹೊಂದಿದರು ಯಾವುದೇ ರೀತಿಯ ತೊಂದರೆ ಆಗಿಲ್ಲ ಎಂದು ಹೇಳಿಕೊಂಡರು. ಕಾರ್ಮಿಕ ಯಲ್ಲಪ್ಪ ಉಪ್ಪಾರ ಮಾತನಾಡಿ, ನರೇಗಾ ಯೋಜನೆ ನಮಗೆ ಅನ್ನ ಹಾಕುತ್ತಿದೆ. ಕೆಲಸಕ್ಕೆಂದು ಬೇರೆಯವರ ಜಮೀನುಗಳಿಗೆ ಹೋಗಿಕೆಲವೇ ದಿನಗಳ ವರಗೆ ಕೂಲಿ ಮಾಡಬೇಕಾಗುವ ಸಂದರ್ಭ ಒದಗಿಬರುತ್ತಿತ್ತು. ಆದರೆ ನರೇಗಾದಿಂದ 150 ದಿನಗಳ ಕೆಲಸ ದೊರೆಯುತ್ತಿರುವುದು ಅನುಕೂಲವಾಗಿದೆ ಎಂದರು.

ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ: ಕೋಟಿಕಲ್ಲ ಗ್ರಾಮ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಸ್ಥಳದಲ್ಲಿ ಆರೋಗ್ಯ ಶಿಬಿರ ನಡೆಸಲಾಯಿತು. ಕೆಲಸದಲ್ಲಿ ತೊಡಗಿದ್ದ ಒಟ್ಟು 350 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಸ್ಥಳದಲ್ಲಿಯೇ ಔಷಧಿ ನೀಡಲಾಯಿತು. ತೋಗುಣಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಸವರಾಜ ಕಾರ್ಮಿಕರ ತಪಾಸಣೆ ಮಾಡಿದರು.

ಈ ವೇಳೆ ಡಿಎಚ್‌ಒ ಡಾ| ಅನಂತ ದೇಸಾಯಿ, ಬಾದಾಮಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಡಾ| ಪುನಿತ್‌, ತೋಗುಣಸಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಲ್‌.ಜಿ. ಶಾಂತಗೇರಿ, ಎಡಿಪಿಸಿ ನಾಗರಾಜ ರಾಜನಾಳ, ಜಿಲ್ಲಾ ಐಇಸಿ ಸಂಯೋಜಕ ಪವನ ಕುಲಕರ್ಣಿ, ಜಿಲ್ಲಾ ಡಿಎಂಐಎಸ್‌ ಉಜ್ವಲ ಸಕ್ರಿ, ತಾಲೂಕು ಐಇಸಿ ಸಂಯೋಜಕ ಸಮೀರ ಉಮರ್ಜಿ, ಈರಣ್ಣ ಮಾಸ್ತಿ ಇದ್ದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.