ಗಂಟಲು ದ್ರವ ಪರೀಕ್ಷೆ ಕೇಂದ್ರ ಸ್ಥಾಪನೆ
Team Udayavani, Apr 14, 2020, 4:22 PM IST
ಮಹಾಲಿಂಗಪುರ: ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಂಟಲು ದ್ರವ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ| ಗುರುನಾಥ ಕಗಲಗೊಂಬ ತಿಳಿಸಿದ್ದಾರೆ. ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಇಲ್ಲಿ ಪಡೆದ ಗಂಟಲು ದ್ರವವನ್ನು ಬಾಗಲಕೋಟೆ ಕೇಂದ್ರಕ್ಕೆ ಕಳುಹಿಸಲಾಗುವುದು. ಅಲ್ಲಿಂದ ಬೆಂಗಳೂರಿಗೆ ಕಳುಹಿಸುವರು. ಈ ಮುಂಚೆ ರಾಜಸ್ಥಾನಕ್ಕೆ ಹೋಗಿ ಬಂದಿದ್ದ ಮಹಾಲಿಂಗಪುರದ 11 ಜನರು ಹಾಗೂ ಕೆಂಗೇರಿಮಡ್ಡಿಯ ಮದರಸಾದಲ್ಲಿದ್ದ 11 ಜನರ ಗಂಟಲು ದ್ರವ ಮುಧೋಳ ಕೇಂದ್ರದಲ್ಲಿ ಪರೀಕ್ಷೆ ಮಾಡಿ ಬಾಗಲಕೋಟೆಗೆ ಕಳುಹಿಸಲಾಗಿತ್ತು. ಇಲ್ಲಿಯವರೆಗೂ ಮಹಾಲಿಂಗಪುರ ಭಾಗದಿಂದ ಸುಮಾರು 50 ಜನರ ಗಂಟಲು ದ್ರವ ಪರೀಕ್ಷೆಗೆ ಕಳಿಸಲಾಗಿತ್ತು. ಅವೆಲ್ಲವೂ ನೆಗೆಟಿವ್ ವರದಿ ಬಂದಿವೆ ಎಂದರು.
ಕಂಪ್ಲಿಟ್ ಲಾಕ್‌ಡೌನ್: ರಬಕವಿ-ಬನಹಟ್ಟಿ ತಹಶೀಲ್ದಾರ್
ಪ್ರಶಾಂತ ಚನಗೊಂಡ ಆದೇಶದಂತೆ ಮಹಾಲಿಂಗಪುರ ಸಂಪೂರ್ಣ ಲಾಕ್‌ಡೌನ್ ಆಗಿ ಮೂರನೇ ದಿನಕ್ಕೆ ಮುಂದುವರಿದಿದೆ. ಬೆಳಗ್ಗೆ ಅಗತ್ಯ ವಸ್ತುಗಳಿಗಾಗಿ ಸಡಿಲಿಕೆ ಬಿಟ್ಟರೆ ಉಳಿದಂತೆ ಸಂಪೂರ್ಣ ಲಾಕ್‌ಡೌನ್ ಆಗಿದೆ. ಸೋಮವಾರ ತಹಶೀಲ್ದಾರ್ ಪ್ರಶಾಂತ ಚನಗೊಂಡ, ಗ್ರೇಡ್ 2 ತಹಶೀಲ್ದಾರ್ ಎಚ್.ಬಿ .ಕಾಂಬಳೆ ಸ್ಥಳೀಯ ಕೊರೊನಾ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯಾಧಿಕಾರಿ ಬಿ.ಆರ್.ಕಮತಗಿ ಇದ್ದರು.
ಮಹಾಲಿಂಗೇಶ್ವರ ಐದೇಶಿ ರದ್ದು: ಕೊರೊನಾ ಮುಂಜಾಗ್ರತೆಗಾಗಿ ಅಧಿಕಾರಿಗಳು ಮತ್ತು ಪಟ್ಟಣದ ಹಿರಿಯರ ಸಭೆ ನಡೆಸಿ ಏ. 16ರ ಐದೇಶಿ ಕಾರ್ಯಕ್ರಮ
ರದ್ದು ಪಡಿಸಲಾಗಿದೆ. ಭಕ್ತರು ಮನೆಯಲ್ಲಿಯೇ ಮಲ್ಲಯ್ಯನಿಗೆ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸಿ ಕೊರೊನಾ ವೈರಸ್ ಹಾವಳಿ ಕಡಿಮೆಯಾಗಲಿ ಎಂದು ಮಹಾಲಿಂಗೇಶ್ವರ ಮತ್ತು ಮಲ್ಲಿಕಾರ್ಜುನನಲ್ಲಿ ಪ್ರಾರ್ಥಿಸಿ, ಮನೆಯಲ್ಲಿಯೇ ಇದ್ದು ಕೊರೊನಾ ತಡೆಗಟ್ಟಿರಿ ಎಂದು ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಸದ್ಭಕ್ತರಲ್ಲಿ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.