ವಿನಾಶಕಾಲೇ ವಿಪರೀತ ಬುದ್ಧಿ: ಯತ್ನಾಳ
Team Udayavani, May 13, 2019, 12:34 PM IST
ಬನಹಟ್ಟಿ: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ ಸರ್ವಾಧಿಕಾರ ಧೋರಣೆ ತೋರುತ್ತಿರುವುದು ಇಂದು ನಿನ್ನೆಯದಲ್ಲ. ರಾಜ್ಯವನ್ನೇ ಕೊಳ್ಳೆ ಹೊಡೆದು ಅಕ್ರಮ ಆಸ್ತಿ ಮಾಡುವ ಮೂಲಕ ರಾಜ್ಯದಲ್ಲಿ ದುರಹಂಕಾರದಿಂದ ಮೆರೆಯುತ್ತಿದ್ದಾರೆ. ಸದ್ಯ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ, ಶಾಸಕ ಬಸನಗೌಡ ಯತ್ನಾಳ ಡಿಕೆಶಿ ವಿರುದ್ಧ ಟಾಂಗ್ ಕೊಟ್ಟರು.
ಶನಿವಾರ ರಾತ್ರಿ ನಗರದಲ್ಲಿ ಸಿದ್ಧಸಿರಿ ಮಾರುಕಟ್ಟೆ ಉದ್ಘಾಟನೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೀಪ ಆರುವ ಮುನ್ನ ಎಣ್ಣೆಯಿಲ್ಲದೆ ಹೇಗೆ ದೊಡ್ಡದಾಗಿ ಉರಿಯುತ್ತದೆಯೋ. ಸದ್ಯದಲ್ಲಿಯೇ ಕಾಂಗ್ರೆಸ್ ಅಧೋಗತಿಯತ್ತ ಸಾಗಿ, ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳನ್ನೂ ಅರಿತಿರುವ ಡಿಕೆಶಿ ಹತಾಶೆ ಭಾವನೆಯಲ್ಲಿ ಏನೇಲ್ಲ ಹೇಳಿಕೆ ನೀಡುತ್ತಿದ್ದಾರೆಂದು ಯತ್ನಾಳ ಹೇಳಿದರು.
ಈ ಭೂಮಿಯಲ್ಲಿ ನಿಜಾಮ, ಸುಲ್ತಾನರೇ ಮಣ್ಣು ಮುಕ್ಕಿ ಹೋಗಿದ್ದಾರೆ. ಅಹ: ಭಾವನೆಯಿಂದ ನಡೆಯುತ್ತಿರುವ ಇಂಥವರಿಗೆ ಸದ್ಯವೇ ಕೊನೆಗಾಲವಿದೆ ಎಂದರು. ರಾಜ್ಯದಲ್ಲಿ ಮೈತ್ರಿ ಸರ್ಕಾರದಿಂದ ಬೃಹತ್ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರರು ಕಮಿಶನ್ ಹಾವಳಿಯಿಂದ ಕೆಲಸವನ್ನೇ ಪಡೆಯುತ್ತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿರುವಾಗ ಸರ್ಕಾರ ನಡೆಸುತ್ತಿರುವ ಅಪವಿತ್ರ ಮೈತ್ರಿ ಸರ್ಕಾರ ಕಮಿಷನ್ ಎಂಬ ಭೂತದ ಸುಳಿಯಲ್ಲಿ ಗುತ್ತಿಗೆದಾರರ ಮೇಲೆ ಗದಾಪ್ರಹಾರ ನಡೆಸುತ್ತಿದ್ದಾರೆಂದು ಯತ್ನಾಳ ಆರೋಪಿಸಿದರು.
ಜನರ ಸೇವೆಗೆ ಮಾರುಕಟ್ಟೆ: ರಬಕವಿ-ಬನಹಟ್ಟಿ ತಾಲೂಕಿನ ಜನತೆಗೆ ಅಗ್ಗದ ದರದಲ್ಲಿ ಗುಣಮಟ್ಟದ ವಸ್ತುಗಳು ದೊರಕುವ ಮೂಲಕ ಹಾಗು ಕಲಬೆರಕೆ ರಹಿತವಾಗಿ ಸಾವಯವ ವಸ್ತುಗಳ ಬಳಕೆಯಿಂದ ದೀರ್ಘಾಯುಷ್ಯದ ದೃಷ್ಟಿಯಿಂದ ಮಾರುಕಟ್ಟೆಯನ್ನು ನಿರ್ಮಿಸಲು ಸನ್ನದ್ದರಾಗಿದ್ದೇವೆ ಎಂದು ಯತ್ನಾಳ ಹೇಳಿದರು.
ಶಾಸಕ ಸಿದ್ದು ಸವದಿ ಸಿದ್ಧಸಿರಿ ಮಾರುಕಟ್ಟೆಯನ್ನು ಉದ್ಘಾಟಿಸಿದರು. ಹಿರೇಮಠದ ಶರಣಬಸವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಮಲ್ಲಿಕಾರ್ಜುನ ಬಾಣಕಾರ, ನಿರಾಣಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಸಂಗಮೇಶ ನಿರಾಣಿ, ಬಸವರಾಜ ದಲಾಲ, ಭೀಮಶಿ ಮಗದುಮ್, ಶೇಖರ ಕೊಟ್ರಶೆಟ್ಟಿ, ರಾಜು ಅಂಬಲಿ, ಶಿವಾನಂದ ಗಾಯಕವಾಡ, ಸುರೇಶ ಅಕ್ಕಿವಾಟ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.