![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 30, 2020, 6:05 AM IST
ಬಾದಾಮಿ: ಮರಳು ಮತ್ತು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಹಶೀಲ್ದಾರ್ ಸುಹಾಸ ಇಂಗಳೆ ಹೇಳಿದರು.
ಶುಕ್ರವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ನಡೆದ ಮರಳು ಮತ್ತು ಗಣಿ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು. ಬಾದಾಮಿ ಠಾಣಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ಮರಳು ಗಣಿಗಾರಿಕೆ ಮಾಡುವ ಮಾಲೀಕರನ್ನು ಮತ್ತು ಇಟ್ಟಿಗೆ ಬಟ್ಟೆಗಳ ಮಾಲೀಕರರು ಸರಕಾರದ ಆದೇಶಗಳನ್ನು ಎಲ್ಲರೂ ಪಾಲಿಸಬೇಕು. ಯಾವುದೇ ಅಕ್ರಮ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಪಿಐ ರಮೇಶ ಹಾನಾಪುರ ಮಾತನಾಡಿ, ಕಾನೂನು ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪಿಎಸ್‌ಐ ಪ್ರಕಾಶ ಬಣಕಾರ ಮಾತನಾಡಿದರು. ಸಭೆಯಲ್ಲಿ ಮರಳು ಗಣಿಗಾರಿಕೆ, ಇಟ್ಟಿಗೆ ಬಟ್ಟೆಯ ಮಾಲೀಕರು ಭಾಗವಹಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.