18ರಂದು ಜಮಖಂಡಿಯಲ್ಲಿ ರೈತರ ಸಮಾವೇಶ: ಸಿಂಧೂರ
Team Udayavani, Feb 9, 2021, 5:32 PM IST
ಜಮಖಂಡಿ: ರೈತ ಜಾಗರಣಾ ವೇದಿಕೆ ಆಶ್ರಯದಲ್ಲಿ ಫೆ. 18ರಂದು ಸಂಜೆ 4 ಗಂಟೆಗೆ ನಗರದ ಬಸವ ಭವನ ಆವರಣದಲ್ಲಿ ರೈತರ ಸಮಾವೇಶ ನಡೆಯಲಿದೆ ಎಂದು ರೈತ ಮುಖಂಡ ಬಸವರಾಜ ಸಿಂಧೂರ ಹೇಳಿದರು.
ನಗರದ ರಮಾನಿವಾಸ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಜಾಗರಣ ವೇದಿಕೆ ಹಾಗೂ ಬಿಜೆಪಿ ಆಶ್ರಯದಲ್ಲಿ ನೂತನ ಕೃಷಿ ಕಾಯ್ದೆ ಜಾಗೃತಿ ಸಮಾವೇಶ ಜರುಗಲಿದೆ. ಕಾಂಗ್ರೆಸ್ ಆಡಳಿತದಲ್ಲಿ ಕೃಷಿ ಕಾಯ್ದೆಯನ್ನು ರೈತ ಮುಖಂಡ ಟಿಕಾಯತ್ ಸ್ವಾಗತಿಸಿದ್ದರು. ಆದರೆ, ಇಂದು ಅವರೇ ವಿರೋಧ ಮಾಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. ನೂತನ ಕಾಯ್ದೆಯಿಂದ ಎಪಿಎಂಸಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗುವುದಿಲ್ಲ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಎಸ್. ನ್ಯಾಮಗೌಡ ಮಾತನಾಡಿ, ಸಮಾವೇಶದಲ್ಲಿ ಗ್ರಾಪಂ ಆಯ್ಕೆಯಾದ ಬಿಜೆಪಿ ಬೆಂಬಲಿತ ನೂತನ ಸದಸ್ಯರ ಸನ್ಮಾನ ನಡೆಯಲಿದೆ. ರಾಜ್ಯಸಭಾ ಸದಸ್ಯ ರೈತ ಜಾಗರಣ ವೇದಿಕೆ, ರಾಜ್ಯ ಸಂಚಾಲಕ ಈರಣ್ಣ ಕಡಾಡಿ ನೇತೃತ್ವದಲ್ಲಿ ನೂತನ ಕೃಷಿ ಕಾಯ್ದೆಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಮಾವೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.
ಇದನ್ನೂ ಓದಿ :ಮೂತ್ರಕೋಶದ ಕಲ್ಲಿನ ನಿವಾರಣೆಗೆ ಬಾಳೆ ದಿಂಡಿನ ಪಲ್ಯ
ರೈತರಿಗೆ ನೂತನ ಕೃಷಿ ಕಾಯ್ದೆಯಿಂದ ಆಗುವ ಲಾಭದ ಕುರಿತು ಜಾಗೃತಿ ಕಾರ್ಯಕ್ರಮ ಅವಶ್ಯವಾಗಿವೆ. ರಾಜ್ಯದಲ್ಲಿಪ್ರಥಮವಾಗಿ ಜಮಖಂಡಿಯಿಂದ ಜಾಗೃತಿಗೆ ಚಾಲನೆ ನೀಡಲಾಗುತ್ತಿದೆ. ದೇಶದಲ್ಲಿ ರೈತರ ಹೋರಾಟದಲ್ಲಿ ರಕ್ತಕ್ರಾಂತಿಯಾಗಿರುವ ಉದಾಹರಣೆಗಳಿಲ್ಲ. ಆದರೆ, ಇಂದು ಕಾಂಗ್ರೆಸ್ ಅಧಿಕಾರ ಹಿಡಿಯುವ ದುರಾಸೆಯಿಂದ ರೈತರನ್ನು ಎತ್ತಿಕಟ್ಟುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.
ರೈತ ಜಾಗರಣಾ ವೇದಿಕೆ ತಾಲೂಕಾಧ್ಯಕ್ಷ ಶೈಲೇಶ ಆಪ್ಟೆ, ಸಿದ್ದರಾಯ ಸಾಯಗೊಂಡ, ಬಸವರಾಜ ಮರನೂರ, ಪ್ರವೀಣ ಕಲ್ಯಾಣಿ, ಸದಾಶಿವ ಕವಟಗಿ, ಪ್ರದೀಪ ಮೆಟಗುಡ್ಡ, ರವಿ ಐಗಳಿ, ಧರೆಪ್ಪ ಮಂಟೂರ, ಮಹೇಶ ಖೆಬ್ಟಾಣಿ, ಮುತ್ತು ಲಕ್ಕನಗೌಡರ, ಶ್ರೀಶೈಲ ಪಾಟೀಲ, ಪ್ರಭು ಬಾಳಿಕಾಯಿ, ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.