ರೈತರ ಬಗ್ಗೆ ಜಿಲ್ಲೆಯ ಅಧಿಕಾರಿಗಳ ನಿರ್ಲಕ್ಷ್ಯ : ರೈತ ಮುಖಂಡ ಮುತ್ತಪ್ಪ ಕೋಮಾರ

Team Udayavani, Nov 30, 2021, 6:50 PM IST

ರೈತರ ಬಗ್ಗೆ ಜಿಲ್ಲೆಯ ಅಧಿಕಾರಿಗಳ ನಿರ್ಲಕ್ಷ್ಯ : ರೈತ ಮುಖಂಡ ಮುತ್ತಪ್ಪ ಕೋಮಾರ

ರಬಕವಿ-ಬನಹಟ್ಟಿ: ಜಿಲ್ಲೆಯ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ರೈತರ ಬಗ್ಗೆ ನಿರ್ಲಕ್ಷ್ಯವನ್ನು ತೋರುತ್ತಿದ್ದಾರೆ. ರೈತರ ಕಬ್ಬಿನ ಬಿಲ್ ಪಾವತಿಸದೆ ನಾಲ್ಕು ವರ್ಷಗಳಾದರೂ ಯಾವುದೆ ರೀತಿಯ ಪರಿಹಾರ ಕೊಡಿಸಲಿಕ್ಕೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ರೈತರು ಪ್ರತಿಭಟನೆ ನಡೆಸುತ್ತಿರುವ ಮಾಹಿತಿ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಇದ್ದರೂ ಸಂಜೆಯಾದರೂ ಕೂಡಾ ಯಾವುದೆ ಅಧಿಕಾರಿಗಳು ರೈತರಿಗೆ ಸಮರ್ಪಕವಾದ ಉತ್ತರ ನೀಡದೆ ಇರುವುದು ಇವರ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ರೈತ ಮುಖಂಡ ಮುತ್ತಪ್ಪ ಕೋಮಾರ ತಿಳಿಸಿದರು.

ಅವರು ಮಂಗಳವಾರ ರಬಕವಿ-ಬನಹಟ್ಟಿ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗದಲ್ಲಿ ಹೋರಾಟನಿರತ ರೈತರನ್ನು ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮತ್ತೋರ್ವ ರೈತ ಮುಖಂಡ ಗಂಗಾಧರ ಮೇಟಿ ಮಾತನಾಡಿ, ನಾಲ್ಕು ವರ್ಷಗಳಿಂದ ತೇರದಾಳದ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರು ಬಿಲ್ಗಾಗಿ ಹೋರಾಟ ಮಾಡುತ್ತಿದ್ದಾರೆ. ಅಂದಾಜು 900 ರೈತರ ರೂ22 ಕೋಟಿಯಷ್ಟು ಹಣ ಬರಬೇಕಾಗಿದೆ ಎಂದರು.

ಬಿಲ್ ಪಾವತಿಸುವ ವಿಷಯ ನ್ಯಾಯಾಲಯದಲ್ಲಿದೆ ಮತ್ತು ಸಕ್ಕರೆ ಕಾರ್ಖಾನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಆದರೂ ಎರಡು ದಿನಗಳಿಂದ ಜನರು ಸಕ್ಕರೆ ಕಾರ್ಖಾನೆಯನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಇದು ಕಾನೂನಿಗೆ ವಿರೋಧವಾಗಿದೆ. ಯಾವುದೆ ಪರವಾಣಿಗೆ ಇಲ್ಲದೆ ಸಕ್ಕರೆ ಕಾರ್ಖಾನೆಯನ್ನು ಸ್ವಚ್ಛಗೊಳಿಸುತ್ತಿರುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು.  ಸಕ್ಕರೆ ಕಾರ್ಖಾನೆಯನ್ನು ಸ್ವಚ್ಛಗೊಳಿಸುತ್ತಿರವವರ ಮಾಹಿತಿ ಅಧಿಕಾರಿಗಳಿಗೆ ಇದ್ದರೂ ಯಾವುದೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಕುರಿತು ರೈತರಿಗೆ ಮಾಹಿತಿಯನ್ನು ನೀಡಿಲ್ಲ ಎಂದರು.

ಮತ್ತೋರ್ವ ಮುಖಂಡ ಶ್ರೀಕಾಂತ ಘೂಳನ್ನವರ ಮಾತನಾಡಿ, ಬಿಲ್ ಪಾವತಿಸುವಂತೆ ಈ ಭಾಗದ ರೈತರು ನಾಲ್ಕು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಕಬ್ಬು ಪೂರೈಸಿದ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಬಂದು ಸಮರ್ಪಕ ಉತ್ತರ ನೀಡುವವರೆಗೂ ಅನಿರ್ಧಿಷ್ಠಾವಧಿ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಎಸ್.ಬಿ.ಕಾಂಬಳೆ ಉತ್ತರ ನೀಡಿದರೂ ರೈತರು ಕೇಳದೆ ಪ್ರತಿಭಟನೆಯನ್ನು ಮುಂದುವರೆಸಿದರು.

ಪ್ರತಿಭಟನೆಯಲ್ಲಿ ಹೊನ್ನಪ್ಪ ಬಿರಡಿ, ಭುಜಬಲಿ ಕೆಂಗಾಲಿ, ಶಿಪಪ್ಪ ಹೋಟಕಾರ, ಮಗೆಪ್ಪ ತೇರದಾಳ, ಅರವಿಂದ ದಳವಾಯಿ, ಬಸು ಮಲೋಡಿ, ಮಾಯಪ್ಪ ತುರಾದಿ ಸೇರಿದಂತೆ ರಬಕವಿ ಬನಹಟ್ಟಿ ತಾಲ್ಲೂಕಿನ ರೈತರು ಇದ್ದರು. ಸ್ಥಳದಲ್ಲಿ ಬನಹಟ್ಟಿ ವೃತ್ತದ ಸಿಪಿಐ ಜೆ.ಕರುಣೇಶಗೌಡ, ಬನಹಟ್ಟಿ ಪಿಎಸ್‌ಐ ಸುರೇಶ ಮಂಟೂರ ಸೇರಿದಂತೆ ಮಹಾಲಿಂಗಪುರ, ತೇರದಾಳ, ಸಾವಳಗಿ ಪಿಎಸ್‌ಐ ಇದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.