ಹೆಣ್ಣು ಭ್ರೂಣ ಹತ್ಯೆ ಇನ್ನೂ ಜೀವಂತ
Team Udayavani, Sep 7, 2019, 10:17 AM IST
ಬಾಗಲಕೋಟೆ: ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಶೇಕಡಾ ವಾರು ಪ್ರಮಾಣದಲ್ಲಿ ಪುರುಷರಿಗಿಂತ ಹೆಣ್ಣಿನ ಸಂಖ್ಯೆ ಕಡಿಮೆ ಇದೆ. ಇದಕ್ಕೆ ಹೆಣ್ಣೂ ಭ್ರೂಣ ಹತ್ಯೆ ಕಾರಣವಾಗಿದ್ದು, ಇದನ್ನು ತಡೆಗಟ್ಟುವ ಕೆಲಸವಾಗಬೇಕು. ಈ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು.
ಜಿಪಂ ಸಭಾಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಹರಿಯಾಣದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಬೇರೆ ರಾಜ್ಯದ ಹೆಣ್ಣು ಮಕ್ಕಳನ್ನು ವಧು ದಕ್ಷಿಣೆ ಕೊಟ್ಟು ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಮಾಡುವ ಮೂಲಕ ಇಂತಹ ಪರಿಸ್ಥಿತಿಗೆ ನಾವೇ ಕಾರಣಿಭೂತರಾಗುತ್ತಿದ್ದೇವೆ ಎಂದರು.
ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಸಮಾಜ ಕಾರ್ಯಕರ್ತರಿಗೆ ವರದಕ್ಷಿಣೆ, ಮಹಿಳೆಯರ ಮಾರಾಟ ಮತ್ತು ಮಕ್ಕಳ ಸಾಗಾಣಿಕೆ ನಿಷೇಧ ಕಾಯ್ದೆ ಕುರಿತು ತರಬೇತಿ ಅಗತ್ಯವಾಗಿದೆ. ಈ ಕುರಿತು ಜಿಲ್ಲಾ ಮಟ್ಟದಲ್ಲಿ ತರಬೇತಿ ಏರ್ಪಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯ ವಿವಾಹ, ಹೆಣ್ಣು ಭ್ರೂಣಹತ್ಯೆ ಸೇರಿದಂತೆ ಇತರೆ ನಿಷೇಧ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಆಸ್ಪತ್ರೆಗಳಲ್ಲಿ ವಯಸ್ಸಿನ ದೃಢೀಕರಣ ಪತ್ರ ನೀಡದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು. ಇಂತಹ ಅನಿಷ್ಠ ಪದ್ಧತಿಗಳು ಗ್ರಾಮೀಣ ಭಾಗದ ಜನರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 4,879 ಸ್ತ್ರೀಶಕ್ತಿ ಗುಂಪುಗಳಿದ್ದು, ಅದರಲ್ಲಿ 970 ಪರಿಶಿಷ್ಟ ಜಾತಿ, 510 ಪರಿಶಿಷ್ಟ ಪಂಗಡ, 80 ಅಲ್ಪಸಂಖ್ಯಾತರು ಹಾಗೂ 3,319 ಇತರೆ ಜಾತಿಗೆ ಸೇರಿದ ಗುಂಪುಗಳಿವೆ. ಒಟ್ಟು 61.15 ಕೋಟಿ ರೂ.ಗಳನ್ನು ಉಳಿತಾಯ ಮಾಡಿದ್ದು, 4,232 ಗುಂಪುಗಳು ಬ್ಯಾಂಕ್‌ನಿಂದ ಒಟ್ಟು 55.33 ಕೋಟಿ ರೂ.ಗಳ ಸಾಲ ಪಡೆದುಕೊಂಡಿದ್ದಾರೆ ಎಂದು ಸಭೆಗೆ ಎ.ಕೆ. ಬಸಣ್ಣವರ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಗದೀಶ ಹೆಬ್ಬಳ್ಳಿ ಮಾತನಾಡಿದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಲಕ್ಷ್ಮಣ ದಡ್ಡಿ, ಜಿಪಂ ಉಪಕಾರ್ಯದರ್ಶಿ ಎ.ಜಿ.ತೋಟದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಗೋನಾಳ, ಡಾ| ಅನಂತ ದೇಸಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.