ಅನಾವಶ್ಯಕ ಹೊರ ಬಂದರೇ ಎಫ್‌ಐಆರ್ ದಾಖಲು
Team Udayavani, Apr 20, 2020, 3:22 PM IST
ಬಾಗಲಕೋಟೆ: ಹಳೆ ಬಾಗಲಕೋಟೆಯ ವಾರ್ಡ್ ನಂ.5ರಿಂದ 14 ವರೆಗೆ ಈಗಾಗಲೇ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಅನಾವಶ್ಯಕವಾಗಿ ಹೊರಗೆ ಬಂದಲ್ಲಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಕೋವಿಡ್ ವಿಶೇಷ ಅಪರ ಜಿಲ್ಲಾಧಿಕಾರಿ ಬಸವರಾಜ ಸೋಮಣ್ಣವರ ಎಚ್ಚರಿಕೆ ನೀಡಿದ್ದಾರೆ.
ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನಿರ್ಬಂಧಿತ ಪ್ರದೇಶದ ವ್ಯಾಪ್ತಿಯಲ್ಲಿ ಅನಾವಶ್ಯಕವಾಗಿ ಹೊರಗಡೆ ತಿರುಗಾಡುತ್ತಿದ್ದು, ಇನ್ನು ಮುಂದೆ ಯಾರು ಸಹ ಸಂಚರಿಸುವಂತಿಲ್ಲ. ಕೋವಿಡ್ 19 ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.
ಮನೆಯಿಂದ ಹೊರಗೆ ಬರದೇ ಸಾಮಾಜಿಕ ಅಂತರ ಕಾಯ್ದುಕೊಂಡಾಗ ಮಾತ್ರ ಸೋಂಕು ಹರಡುವದನ್ನುತಪ್ಪಿಸಲು ಅಸಾಧ್ಯ. ಆದ್ದರಿಂದ ನಿರ್ಬಂಧಿತ ಪ್ರದೇಶದಲ್ಲಿ ಯಾರು ಹೊರಗಡೆ ಸಂಚರಿಸದಂತೆ ಕಟ್ಟು ನಿಟ್ಟಿನ ಕ್ರಮಕ್ಕೆ ಕೈಗೊಳ್ಳಲಾಗಿದೆ. ಇದಕ್ಕೆ ಜನರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಔಷಧಿ, ದಿನಸಿ ಹಾಗೂ ತರಕಾರಿಗಳಿಗಾಗಿ ಈಗಾಗಲೇ ಮೊಬೈಲ್ ನಂಬರ್‌ಗಳನ್ನು ಎಲ್ಲೆಡೆ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಲಾಗಿದೆ. ವಾಟ್ಸ್‌ಆ್ಯಪ್ ಗ್ರೂಪ್ ಮತ್ತು ಆನ್‌ಲೈನ್ ಮೂಲಕ ಸರಬರಾಜಿಗೆ ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ತರಕಾರಿ ಮತ್ತು ಪಡಿತರ ಕಿಟ್ ಸಿದ್ಧಪಡಿಸಿ ಪೂರೈಸಲಾಗುತ್ತಿದೆ. ಅಲ್ಲದೇ ಹಣಕ್ಕಾಗಿ ಬ್ಯಾಂಕ್‌ಗಳಿಗೂ ಅಲೆದಾಡುವಂತಿಲ್ಲ.ಪೋಸ್ಟ್ ಆಫೀಸ್ ಮತ್ತು ಪೋಸ್ಟ್‌ಮನ್‌ಗೆ ಕರೆ ಮಾಡಿದರೆ ಸಾಕು ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಆಗಿದ್ದರೂ ಹಣವನ್ನು ಮನೆಯಲ್ಲಿಯೇ ಇದ್ದು ಪಡೆದುಕೊಳ್ಳಬಹುದಾಗಿದೆ ಎಂದರು.
ಔಷಧ ವಿತರಣೆಗೆ ಬಸವೇಶ್ವರ ವೃತ್ತದಲ್ಲಿ ಆರೋಗ್ಯ ಸಿಬ್ಬಂದಿಗಳ ಟೆಂಟ್ ಹಾಕಲಾಗಿದೆ. ತಾಲೂಕು ಆರೋಗ್ಯ ಅಧಿಕಾರಿ ಡಾ|ಬಿ.ಜಿ. ಹುಬ್ಬಳ್ಳಿ (9449843186, 6361367737) ಅವರಿಗೆ ತಿಳಿಸಿದಲ್ಲಿ ಆರೋಗ್ಯ ಸಿಬ್ಬಂದಿಗಳು ಮನೆ ಬಾಗಿಲಿಗೆ ಬಂದು ಔಷಧಿ ನೀಡುವರು. ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಆಹಾರಧಾನ್ಯ ಪೂರೈಕೆದಾರರಾದ ಕಾಸಟ್(9945502371) ಮುಳಗುಂದ (9845101024) ಅವರಿಗೆ ಕರೆ ಮಾಡಿದಲ್ಲಿ ಬೇಕಾದ ವಸ್ತುಗಳನ್ನು ಮನೆಯ ಬಾಗಿಲಿಗೆ ತಂದು ತಲುಪಿಸಲಿದ್ದಾರೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಉಪಯೋಗವಾಗದೇ ಇರುವ ಹಲವಾರು ಕ್ವಿಂಟಲ್ ಅಗತ್ಯ ದಿನಸಿಗಳನ್ನೂ ಸಹ ಕಿಟ್ ಮಾಡಿ ವಿತರಣೆಗೆ ಕ್ರಮಕೈಗೊಳ್ಳಬೇಕು. ಬೇರೆ ಜಿಲ್ಲೆಯವರು ಬಾಗಲಕೋಟೆ ವೈದ್ಯಕೀಯ ಚಿಕಿತ್ಸೆಗೆ ಬರಕೂಡದು. ಆಯಾ ಜಿಲ್ಲೆಗಳಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ, ನಗರಸಭೆ ಆಯುಕ್ತ ಮುನಿಶಾಮಪ್ಪ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.