ಪ್ರವಾಹ ಹಾನಿ ಕಾಮಗಾರಿ ಪರಿಶೀಲನೆ
Team Udayavani, Jan 29, 2020, 11:40 AM IST
ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ಮತ್ತು ಮುಧೋಳ ತಾಲೂಕಿನ ಪ್ರವಾಹದಿಂದ ಹಾನಿಗೊಳಪಟ್ಟ ಶಾಲೆ, ಅಂಗನವಾಡಿ, ರಸ್ತೆ ಹಾಗೂ ಹೆಸ್ಕಾಂ ಕಾಮಗಾರಿ ಸೇರಿದಂತೆ ಇತರೆ ದುರಸ್ತಿ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳವಾರ ಮುಧೋಳ ತಾಲೂಕಿನ ಉತ್ತೂರಿನಲ್ಲಿ ಹೆಸ್ಕಾಂ ಕಾಮಗಾರಿ ಹಾಗೂ ಲೋಕೋಪಯೋಗಿ ಇಲಾಖೆ ಯಿಂದ ಕೈಗೊಂಡ ರಸ್ತೆ ದುರಸ್ತಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು. ರಂಜನಗಿ ಗ್ರಾಮದಲ್ಲಿ ಕೈಗೊಳ್ಳಬೇಕಾದ ವಿದ್ಯುತ್ ಕಾಮಗಾರಿಗಳನ್ನು ಸಹ ಪರಿಶೀಲನೆ ನಡೆಸಿದರು.
ನಂತರ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಿರಿಗಾಂವ ಪುನರ್ವಸತಿ ಕೇಂದ್ರದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾಗುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಚಿಚಖಂಡಿ ಕೆ.ಡಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣ ಹಾಗೂ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು. ಶಾಲಾ ದುರಸ್ತಿ ಕಾರ್ಯ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ, ತರಬೇತಿ ಐಎಎಸ್ ಅಧಿಕಾರಿ ಗರಿಮಾ ಪನ್ವಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಲರಾಮಲಮಾಣಿ, ಶಂಕರಲಿಂಗ ಗೋಗಿ, ಎ.ವೈ. ಬಸರಿಗಿಡದ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.