ನಾಟಕಗಳಿಂದ ಜನಜಾಗೃತಿ ಸಾಧ್ಯ: ಶಾಸಕ ಸವದಿ

Team Udayavani, Jan 9, 2022, 10:16 PM IST

ಚವಬನಗ್ದ್ಸದಗ

ರಬಕವಿ-ಬನಹಟ್ಟಿ: ನಾಟಕ ಕಲೆ ಶ್ರೇಷ್ಠವಾದುದು. ನಾಟಕದ ಮೂಲಕ ಜನಜಾಗೃತಿ ಉಂಟು ಮಾಡಲು ಸಾಧ್ಯ. ಮುಂದಿನ ದಿನಗಳಲ್ಲಿಯೂ ನಾಟಕ ಕಲೆ ಉಳಿಯಬೇಕಾದರೆ ಪ್ರತಿಯೊಬ್ಬರು ನಾಟಕ ನೋಡುವುದರ ಜತೆಗೆ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.

ಬನಹಟ್ಟಿಯ ಭದ್ರನವರ ಕಲ್ಯಾಣ ಮಂಟಪದಲ್ಲಿ ರಬಕವಿ-ಬನಹಟ್ಟಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ ಮತ್ತು ಪೊಲೀಸ್‌ ಇಲಾಖೆ ಆಶ್ರಯದಲ್ಲಿ ಸಾಣೇಹಳ್ಳಿ ಶಿವಸಂಚಾರ ಕಲಾ ತಂಡದವರು ಪ್ರದರ್ಶನ ಮಾಡಿದ ಗಡಿಯಂಕ ಕುಡಿಮುದ್ದ ನಾಟಕ ಉದ್ಘಾಟಿಸಿ ಅವರು ಮಾತನಾಡಿದರು. ನಾಟಕಗಳಿಂದ ಸಾಮಾಜಿಕ ಬದಲಾವಣೆ ಸಾಧ್ಯ. ಸಾಣೇಹಳ್ಳಿ ಸ್ವಾಮೀಜಿಯವರು ನಾಟಕ ಕಲೆಯನ್ನು ಪ್ರೋತ್ಸಾಹಿಸುವುದರ ಮೂಲಕ ಶ್ರೇಷ್ಠ ಕಾರ್ಯವನ್ನು ಮಾಡುತ್ತಿದ್ದಾರೆ.

ಸಾಮಾಜಿಕ, ಧಾರ್ಮಿಕವಾಗಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಇಂಥ ನಾಟಕಗಳು ಜನರಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ. ಕನ್ನಡ ನಾಡಿನ ಸಂಸƒRತಿ ಶ್ರೇಷ್ಠವಾದುದು ನಮ್ಮ ಸಂಸ್ಕೃತಿಯನ್ನು ನಾಟಕಗಳಿಂದ ಪ್ರಚಾರ ಮಾಡಲು ಸಾಧ್ಯವಾಗುತ್ತದೆ. ಎಂದರು. ರಬಕವಿ-ಬನಹಟ್ಟಿ ತಹಶೀಲ್ದಾರ್‌ ಸಂಜಯ ಇಂಗಳೆ ಮಾತನಾಡಿ, ಮೂರು ದಿನಗಳ ಕಾಲ ನಾಟಕವನ್ನು ಹಮ್ಮಿಕೊಳ್ಳಲಾಗಿದ್ದು, ಸೋಮವಾರ ಸಂಜೆ 6:30ಕ್ಕೆ ಒಕ್ಕಲಿಗ ಮುದ್ದಣ್ಣ, ಮಂಗಳವಾರ ಸತ್ಯಹರಿಶ್ಚಂದ್ರ ನಾಟಕ ಹಮ್ಮಿಕೊಳ್ಳಲಾಗಿದೆ. ಕಲಾವಿದರನ್ನು ಪ್ರೋತ್ಸಾಹಿಸಿ, ಕಲೆಯನ್ನು ಉಳಿಸಿ ಬೆಳೆಸಿ.

ಈ ನಾಡಿನ ಸಂಸ್ಕೃತಿ, ಅಭಿರುಚಿಗಳು ನಾಟಕ ಕಲೆಯ ಮೂಲಕ ಕಂಡು ಬರುತ್ತವೆ ಎಂದರು. ರಬಕವಿ-ಬನಹಟ್ಟಿ ನಗರಸಭೆಯ ಅಧ್ಯಕ್ಷ ಶ್ರೀಶೈಲ ಬೀಳಗಿ, ಗ್ರೇಡ್‌-2 ತಹಶೀಲ್ದಾರ್‌ ಎಸ್‌.ಬಿ.ಕಾಂಬಳೆ, ನಗರ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಸಿಪಿಐ ಜೆ. ಕರುಣೇಶಗೌಡ, ರಬಕವಿ-ಬನಹಟ್ಟಿ ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ಮಹಾಲಿಂಗಪುರ ಪುರಸಭೆ ಮುಖ್ಯಾಧಿ ಕಾರಿ ಎಚ್‌. ಎಸ್‌. ಚಿತ್ತರಗಿ ಇದ್ದರು. ಉಪತಹಶೀಲ್ದಾರ್‌ ಶ್ರೀಕಾಂತ ಮಾಯನ್ನವರ, ಶಂಕರ ಜಾಲಿಗಿಡದ, ದುಂಡಪ್ಪ ಮಾಚಕನೂರ, ವೆಂಕಟೇಶ ನಿಂಗಸಾನಿ, ಬಿ. ಡಿ. ಭದ್ರನ್ನವರ, ಎಂ. ಬಿ. ನಾಶಿ, ಚಿದಾನಂದ ಸೊಲ್ಲಾಪುರ, ಗೌರಿ ಮಿಳ್ಳಿ, ವೈಷ್ಣವಿ ಬಾಗೇವಾಡಿ, ಅನುರಾಧಾ ಹೊರಟ್ಟಿ, ಪ್ರಭು ಪೂಜಾರಿ, ಮಾಲಾ ಬಾವಲತ್ತಿ, ಪವಿತ್ರಾ ತುಕ್ಕನ್ನವರ ಸವಿತಾ ಹೊಸೂರ, ಈಶ್ವರ ಬಿರಾದಾರಪಾಟೀಲ, ಎಂ. ಆರ್‌. ಕವಟಕೊಪ, ಪಿ.ಆರ್‌. ಮಠಪತಿ, ರಾಚಯ್ಯ ಮಠಪತಿ, ಎಂ.ಎಸ್‌. ನೀಲನವರ, ವಿ.ಪಿ. ಕುಗಟಿ, ಸದಾಶಿವ ಕುಂಬಾರ, ಅಮಸಿದ್ದ ಬಿರಾದಾರ, ಮಂಜುನಾಥ ಸಿದ್ದನ್ನವರ, ಎಸ್‌.ಎಸ್‌. ಸಜ್ಜನ, ರವಿ ಈಟಿ, ವಿಜಯಕುಮಾರ ನಿಡಗುಂದಿ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.