ಅರಣ್ಯ ಪ್ರದೇಶದಲ್ಲಿ ವಾಸಿಸುವವರಿಗೆ ಹಕ್ಕು ಪತ್ರ ನೀಡಿ
ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಲು ಒತ್ತಾಯ ;ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
Team Udayavani, Sep 18, 2022, 3:30 PM IST
ರಬಕವಿ-ಬನಹಟ್ಟಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಇದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಗ್ರಾಮದ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವುದಾಗಿದೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ತಹಶೀಲ್ದಾರ್ ಎಸ್.ಬಿ. ಇಂಗಳೆ ತಿಳಿಸಿದರು.
ಶನಿವಾರ ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೇಖರ ನೀಲಕಂಠ ಮತ್ತು ಬಿರಾದಾರ ಪಾಟೀಲ ಮಾತನಾಡಿ, ಸ್ಥಳೀಯ ಸರ್ವೇ ನಂ. 35ರ ಅರಣ್ಯ ಭೂ ಪ್ರದೇಶದಲ್ಲಿ ಜನರು ನಾಲ್ಕೈದು ದಶಕಗಳಿಂದ ವಾಸ ಮಾಡುತ್ತಿದ್ದಾರೆ. ಇವರಿಗೆ ಇಲಾಖೆಯಿಂದ ತೊಂದರೆಯಾಗುತ್ತಿದೆ. ಆದ್ದರಿಂದ ಕಾಯಃ ವಾಸ ಮಾಡಲು ಹಕ್ಕು ಪತ್ರ ನೀಡಬೇಕು. ಅದೇ ರೀತಿಯಾಗಿ ಜಿಎಲ್ಬಿಸಿ ಕಾಲುವೆಯ ಭೂ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಮಾರುತಿ ಸೋರಗಾವಿ ಮಾತನಾಡಿ, ಜಗದಾಳ ಗ್ರಾಮಕ್ಕೆ ಮೂಲ ಸೌಕರ್ಯ ನೀಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರದ ಭದ್ರತಾ ಯೋಜನೆ ಅಡಿಯಲ್ಲಿ ಮಾಸಾಶನದ ಆದೇಶ ಪ್ರತಿಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಪಂ ಇಒ ಸಂಜೀವ ಹಿಪ್ಪರಗಿ, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಕುರಿತು ಮಾಹಿತಿ ನೀಡಿದರು. ಗ್ರಾಪಂ ಅಧ್ಯಕ್ಷ ಗುರುಲಿಂಗಪ್ಪ ಚಿಂಚಲಿ ಅಧ್ಯಕ್ಷತೆ ವಹಿಸಿದ್ದರು.
ಶಂಕರ ಗೊಬ್ಬಣಿ, ಗ್ರೇಡ್ -2 ತಹಶೀಲ್ದಾರ್ ಎಸ್.ಬಿ. ಕಾಂಬಳೆ, ಎಇಇ ಚೇತನ ಅಬ್ಬಿಗೇರಿ, ಪರಶುರಾಮ ಬಸವ್ವಗೋಳ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ ಸೇರಿದಂತೆ ಜಗದಾಳ ಗ್ರಾಪಂ ಸದಸ್ಯರು ಇದ್ದರು. ಎಂ.ಬಿ. ಮಾಳೆದ ಸ್ವಾಗತಿಸಿದರು. ಆರ್.ವೈ. ಗುದಗೇನವರ ವಂದಿಸಿದರು. ಎಂ.ಎಲ್. ಹಾನಪುರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ರವಿ ಹುಕ್ಕೇರಿ, ಬಿ.ಆರ್. ಬಿರಾದಾರ ಪಾಟೀಲ, ಸದಾಶಿವ ದಡ್ಡಿಮನಿ, ಸದಾಶಿವ ದಡ್ಡಿಮನಿ, ಪ್ರಕಾಶ ವಂದಾಲ ಸೇರಿದಂತೆ ಜಗದಾಳ ಗ್ರಾಮದ ಜನರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.