ಆಯುಷ್ಮಾನ್ ಕಾರ್ಡ್‌ನಿಂದ ಉಚಿತ ಕೋವಿಡ್ ಚಿಕಿತ್ಸೆ
Team Udayavani, Jul 2, 2020, 11:28 AM IST
ಬಾಗಲಕೋಟೆ: ಆಯುಷ್ಮಾನ್ ಕಾರ್ಡ್ ನೀಡಲು ಜಿಲ್ಲಾಧಿಕಾರಿ ಕ್ಯಾ.ಡಾ| ಕೆ. ರಾಜೇಂದ್ರ ಚಾಲನೆ ನೀಡಿದರು.
ಬಾಗಲಕೋಟೆ: ಆಯುಷ್ಮಾನ್ ಕಾರ್ಡ್‌ನಿಂದ ಜಿಲ್ಲೆಯ 26 ಖಾಸಗಿ ಆಸ್ಪತ್ರೆಗಳಲ್ಲಿಯೂ ಕೋವಿಡ್ -19 ಸೋಂಕಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಕಾರ್ಡ್ ನೀಡುವ ಕಾರ್ಯಕ್ಕೆ ಥಮ್ ನೀಡಿ ಕಾರ್ಡ್ ಪಡೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಬಿಪಿಎಲ್, ಎಪಿಎಲ್ ಹಾಗೂ ಯಾವ ಪಡಿತರ ಕಾರ್ಡ್ ಇಲ್ಲದವರಿಗೂ ಈ ಆಯುಷ್ಮಾನ್ ಕಾರ್ಡ್ ಪಡೆಯಬಹುದಾಗಿದೆ. ವಿವಿಧ ಸರ್ಕಾರಿ ನೌಕರರು ಸಹ ಈ ಕಾರ್ಡ್ ಪಡೆಯಬಹುದು. ಈ ಕಾರ್ಡ್ ಮೂಲಕ ಕೋವಿಡ್ ಚಿಕಿತ್ಸೆಗೆ ಆಯ್ಕೆಯಾದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ಜಿಲ್ಲೆಯಲ್ಲಿರುವ 198 ಗ್ರಾಪಂ, 6 ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ 120 ಸಾಮಾನ್ಯ ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)ಗಳಲ್ಲಿ ಆಧಾರ್ ಕಾರ್ಡ್ ನಂಬರ್ ನೀಡಿ ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳಬಹುದು ಎಂದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸೇವಾ ಸಿಂಧು ಜಿಲ್ಲಾ ವ್ಯವಸ್ಥಾಪಕ ಸ್ವಾಗತ ಗುಡೆಗುಡಿ, ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಚೇತನ ಪಟ್ಟಣಶೆಟ್ಟಿ, ಸಕಾಲದ ಲಕ್ಷ್ಮೀ ಕಾಂತ ಜ್ಯೋತೆನ್ನವರ, ವಿಎಲ್‌ಇ ಹನಿಫ್ ಇನಾಮದಾರ ಇದ್ದರು.
ಆಯ್ಕೆಯಾದ ಆಸ್ಪತ್ರೆಗಳು
ಬಾಗಲಕೋಟೆ ನಗರದ ಧನುಷ್ ಆಸ್ಪತ್ರೆ, ಕೆರೂಡಿ ಆಸ್ಪತ್ರೆ, ಶಾಂತಿ ಆಸ್ಪತ್ರೆ, ದಡ್ಡೇನವರ ಆಸ್ಪತ್ರೆ, ಆಶೀರ್ವಾದ ಆಸ್ಪತ್ರೆ, ಕಟ್ಟಿ ಆಸ್ಪತ್ರೆ, ಸ್ಪಂದನಾ ಆಸ್ಪತ್ರೆ, ಸಂಜೀವಿನಿ ಮಕ್ಕಳ,
ಕಣ್ಣು ಆಸ್ಪತ್ರೆ, ಪಾಟೀಲ್ ಮೆಡಿಕೇರ್ ಆಸ್ಪತ್ರೆ, ಕುಂಟೋಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಗುಳೇದ ಆಥ್ರೋಕೇರ್ ಆಸ್ಪತ್ರೆ, ಶಕುಂತಲಾ ಆಸ್ಪತ್ರೆ, ಆಶ್ರಯ ಆಸ್ಪತ್ರೆ, ಕೆರೂಡಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಕುಮಾರೇಶ್ವರ ಆಸ್ಪತ್ರೆ, ಮಹಾಲಿಂಗಪುರದ ವೆಂಕಟೇಶ ಆಸ್ಪತ್ರೆ, ಆರೋಗ್ಯಧಾಮ ಆಸ್ಪತ್ರೆ, ಬೆಳಗಲ್ ಸರ್ಜಿಕಲ್ ಕ್ಲಿನಿಕ್, ರಿತಿ ಲೈಫ್ ಕೇರ್ ಆಸ್ಪತ್ರೆ, ಬಾದಾಮಿಯ
ಕಾರೂಡಗಿಮಠ ಮೆಮೋರಿಯಲ್ ಆಸ್ಪತ್ರೆ, ಮುಧೋಳನ ಸಾಯಿ ಆಧಾರ ಆಸ್ಪತ್ರೆ, ಶಾರದಾ ಆಥೋಸ್ಪೆಶಾಲಿಟಿ ಆಸ್ಪತ್ರೆ, ರಬಕವಿಯ ತ್ರಿಶಲಾದೇವಿ ಸೂಪರ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಆಥೋಕೇರ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಇಳಕಲ್ಲಿನ ಮಹಾಂತೇಶ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ತೇರದಾಳದ ಪದ್ಮಾ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಪಡೆದುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.